10 ಕೋಟಿ ರೂ. ವೆಚ್ಚದಲ್ಲಿ ದೇವರಾಯನ ದುರ್ಗದ ಅಭಿವೃದ್ಧಿ ಕಾಮಗಾರಿ ಆರಂಭ

ತುಮಕೂರು: ಶಾಸಕ ಡಿ.ಸಿ.ಗೌರಿಶಂಕರ್ ಸೂಚನೆಯ ಮೇರೆಗೆ ದೇವರಾಯನ ದುರ್ಗದ ಸಮಗ್ರ ಅಭಿವೃದ್ದಿಗೆ 10 ಕೋಟಿ ರೂ. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳು ಆರಂಭವಾಗಿವೆ.

ಖುದ್ದು ಶಾಸಕರೇ ವಾರಕ್ಕೊಮ್ಮೆ ದೇವರಾಯನದುರ್ಗಕ್ಕೆ ಭೇಟಿ ನೀಡಿ ಗುತ್ತಿಗೆದಾರರು ಹಾಗೂ ಅಧಿಕಾರಿಗಳ ಜತೆ ಮಾತುಕತೆ ನಡೆಸಿ ಗುಣಮಟ್ಟದ ಕಾಮಗಾರಿ ಮಾಡಿ ಶೀಘ್ರವಾಗಿ ಪೂರ್ಣಗೊಳಿಸುವಂತೆ ತಾಕೀತು ಮಾಡಿದ್ದಾರೆ. ದೇವಸ್ಥಾನದ ರಥ ಬೀದಿಯ ಸಿಸಿ ರಸ್ತೆ ಕಾಮಗಾರಿ ಪ್ರಕ್ರಿಯೆ ಚುರುಕಿನಿಂದ ಸಾಗಿದೆ, ದೇವಸ್ಥಾನದ ವಿಮಾನ ಗೋಪುರದಿಂದ ರಥಗೋಪುರ ವರೆಗೆ 500ಮೀ ದುರಸ್ತಿ ಕಾರ್ಯ ಚಾಲ್ತಿಯಲ್ಲಿದೆ, ಒಳ ಚರಂಡಿ ಕಾಮಗಾರಿಗಳೂ ಸಹ ಪ್ರಗತಿಯಲ್ಲಿದೆ.

ಕ್ಷೇತ್ರದಲ್ಲಿ ಮೂಲ ಸೌಕರ್ಯ ಕಲ್ಪಿಸುವಂತೆ ಇಲ್ಲಿನ ಸ್ಥಳೀಯರು ಹಾಗೂ ಭಕ್ತರು ಒತ್ತಾಯಿಸಿದ್ದರು. ಎಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದ ಸಂದರ್ಭದಲ್ಲಿ ಶ್ರೀಕ್ಷೇತ್ರದ ಬಗ್ಗೆ ಗಮನ ಸೆಳೆದು 10 ಕೋಟಿ ಅನುದಾನ ಮಂಜೂರು ಮಾಡಿಸಿದ್ದರು. ಚುನಾವಣಾ ಸಂದರ್ಭದಲ್ಲಿ ಈ ಭಾಗದ ಜನರಿಗೆ ನೀಡಿದ್ದ ಭರವಸೆಯಂತೆ ಹಿಂದಿನ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಹಣ ಮಂಜೂರು ಮಾಡಿಸಿ ಭರವಸೆ ಉಳಿಸಿಕೊಂಡಿದ್ದಾರೆ. ಕಾಮಗಾರಿ ಗುಣಮಟ್ಟದ ಬಗ್ಗೆ ಜಾಗೃತೆ ವಹಿಸಲು ಸೂಚಿಸಿದ್ದಾರೆ.

ಸಾಕಷ್ಟು ಅಭಿವೃದ್ದಿ ಕಾಮಗಾರಿಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಶ್ರೀಕ್ಷೇತ್ರದ ಭಕ್ತರ ಸಂತೋಷಕ್ಕೆ ಕಾರಣವಾಗಿರುವುದು ಖುಷಿ ನೀಡಿದೆ ಎಂದು ಶಾಸಕ ಡಿ.ಸಿ.ಗೌರಿಶಂಕರ್ ಪ್ರತಿಕ್ರಿಯಿಸಿದ್ದಾರೆ.

Share This Article

ಕೇವಲ 7 ತಿಂಗಳಲ್ಲಿ 114 ಕೆಜಿ ತೂಕ ಇಳಿಕೆ ಹೇಗೆ ಸಾಧ್ಯ? ವೈರಲ್​ ಸ್ಟಾರ್​ ಬಿಚ್ಚಿಟ್ಟ ರಹಸ್ಯವಿದು…

ನವದೆಹಲಿ: ಯೂಟ್ಯೂಬರ್ ನಿಕೊಕಾಡೊ ಅವಕಾಡೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಸ್ಟಾರ್ ಎಂದೇ ಪ್ರಸಿದ್ಧಿ ಪಡೆದಿದ್ದಾರೆ. ನಿಕೋಲಸ್…

ದಿನಕ್ಕೊಂದು ಬಾಳೆಹಣ್ಣು ಎನ್ನುವ ಹಾಗೆ 30 ದಿನ ಈ ಹಣ್ಣು ತಿಂದರೆ ಏನಾಗುತ್ತೆ ಗೊತ್ತಾ..?

 ಬೆಂಗಳೂರು: ಪ್ರತಿದಿನ ಬಾಳೆಹಣ್ಣು ತಿನ್ನಬೇಕು. ಇದರಿಂದ ದೇಹಕ್ಕೆ ಹಲವಾರು ಪ್ರಯೋಜನಗಳಿವೆ. ಮಾವು ಹಣ್ಣುಗಳ ರಾಜನಾಗಿರಬಹುದು ಆದರೆ…

ತಲೆಯಲ್ಲಿ ಎರಡು ಸುಳಿ ಇದ್ರೆ ಎರಡು ಮದ್ವೆ ಆಗ್ತಾರೆ! ನಿಜಕ್ಕೂ ಇದು ಸತ್ಯಾನಾ?

ಬೆಂಗಳೂರು:  ಪ್ರತಿಯೊಬ್ಬರ ತಲೆಯ ಮೇಲೆ ಸುಳಿಗಳಿರುವುದು ಸಾಮಾನ್ಯ. ಈ ಸುರುಳಿಗಳು ಹುಟ್ಟಿನಿಂದಲೇ ತಲೆಯ ಮೇಲೆ ಇರುತ್ತವೆ.…