ದೈಹಿಕ-ಮಾನಸಿಕ ಆರೋಗ್ಯಕ್ಕೆ ಕ್ರೀಡೆ ಪೂರಕ

ಔರಾದ್: ಕ್ರೀಡೆಯಲ್ಲಿ ತೊಡಗಿಸಿಕೊಂಡವರಿಗೆ ಯಾವುದೇ ರೋಗಗಳು ಬಾಧಿಸುವುದಿಲ್ಲ. ದೈಹಿಕ ಮತ್ತು ಮಾನಸಿಕವಾಗಿ ಆರೋಗ್ಯವಾಗಿರಲು ಕ್ರೀಡೆಗಳು ಅವಶ್ಯಕವಾಗಿದ್ದು, ವಿದ್ಯಾರ್ಥಿಗಳು ಓದಿನೊಂದಿಗೆ ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಶಾಸಕ ಪ್ರಭು ಚವ್ಹಾಣ್ ಹೇಳಿದರು.

ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಹಾಗೂ ಪತ್ರಿಸ್ವಾಮಿ ಪದವಿಪೂರ್ವ ಕಾಲೇಜು ವತಿಯಿಂದ ಶುಕ್ರವಾರ ಪಟ್ಟಣದ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ೨೦೨೪-೨೫ನೇ ಸಾಲಿನ ತಾಲೂಕು ಮಟ್ಟದ ಪದವಿಪೂರ್ವ ವಿದ್ಯಾರ್ಥಿಗಳ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿ, ವಿಶೇಷವಾಗಿ ದೇಸಿ ಆಟಗಳನ್ನು ಆಡಬೇಕೆಂದು ಹೇಳಿದರು.

ತಾಲೂಕು, ಜಿಲ್ಲಾ ಮತ್ತು ವಿಭಾಗ ಮಟ್ಟದಲ್ಲಿ ಗೆದ್ದು ರಾಜ್ಯಮಟ್ಟಕ್ಕೆ ಹೋಗುವ ತಂಡಕ್ಕೆ ೩೧ ಸಾವಿರ ರೂ. ಬಹುಮಾನ ಮತ್ತು ಟಿ ಶರ್ಟ್ಗಳನ್ನು ನೀಡಲಾಗುವುದೆಂದು ಘೋಷಿಸಿದರು. ವಿದ್ಯಾರ್ಥಿಗಳು ಕ್ರೀಡಾ ಭಾವನೆಯಿಂದ ಹುಮ್ಮಸ್ಸಿನಿಂದ ಆಟವಾಡಬೇಕು. ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಜಯಿಸಿ ತಾಲೂಕಿನ ಹೆಸರನ್ನು ಎತ್ತರಕ್ಕೆ ಕೊಂಡೊಯ್ಯಬೇಕು ಎಂದರು.

ಶಿಕ್ಷಣದ ಅಭಿವೃದ್ಧಿಗೆ ನಾನು ಸದಾ ಬದ್ಧನಾಗಿದ್ದು, ಐಎಎಸ್, ಐಪಿಎಸ್, ಕೆಎಎಸ್‌ನಂಥ ಹುದ್ದೆಗಳಿಗೆ ಹೋಗಲು ಕ್ಷೇತ್ರದ ವಿದ್ಯಾರ್ಥಿಗಳು ಪ್ರಯತ್ನ ಮಾಡಬೇಕು ಎಂದು ಹೇಳಿದರು.

ಮಾಜಿ ಶಾಸಕ ಗುಂಡಪ್ಪ ಬಿರಾದಾರ್ ಮಾತನಾಡಿ, ಮಕ್ಕಳಿಗೆ ಉತ್ತಮ ಶಿಕ್ಷಣ ಸಿಗಬೇಕೆಂಬ ಸದಾಶಯದೊಂದಿಗೆ ಶಾಸಕರು ಕೆಲಸ ಮಾಡುತ್ತಿದ್ದಾರೆ. ಮಕ್ಕಳ ಕಲಿಕೆಗೆ ಬೇಕಿರುವ ಎಲ್ಲ ಸೌಕರ್ಯಗಳನ್ನು ಒದಗಿಸುತ್ತಿದ್ದಾರೆ. ಮಕ್ಕಳು ಇದರ ಸದುಪಯೋಗ ಪಡೆದು ಉತ್ತಮ ಅಭ್ಯಾಸ ಮಾಡಬೇಕು. ಕೇವಲ ಪದವಿಗಳಿಗೆ ಹಿಂಬಾಲಿಸದೆ ಇಂದಿನ ಕಾಲಕ್ಕೆ ಅನುಗುಣ ಉತ್ತಮ ಕೌಶಲ ಬೆಳೆಸಿಕೊಳ್ಳಬೇಕು. ಸ್ಪರ್ಧಾತ್ಮಕ ಯುಗಕ್ಕೆ ಹೊಂದಿಕೊಳ್ಳಬೇಕೆಂದು ಸಲಹೆ ಮಾಡಿದರು.

ತಹಸೀಲ್ದಾರ್ ಮಲಶೆಟ್ಟಿ ಚಿದ್ರೆ, ಪ್ರಾಂಶುಪಾಲರಾದ ಓಂಪ್ರಕಾಶ ದಡ್ಡೆ, ಡಾ.ಮನ್ಮಥ ಢೋಳೆ, ರೋಣಯ್ಯ ಮಠ, ಅನೀಲಕುಮಾರ, ಅಖಿಲ್, ಜಾನಪದ ಅಕಾಡೆಮಿ ಸದಸ್ಯ ವಿಜಯಕುಮಾರ ಸೊನಾರೆ, ಎಪಿಎಂಸಿ ಅಧ್ಯಕ್ಷ ಧೊಂಡಿಬಾ ನರೋಟೆ, ಪ್ರಮುಖರಾದ ರಾಹುಲ್ ಮಿಶ್ರಾ, ರಾಮಶೆಟ್ಟಿ ಪನ್ನಾಳೆ, ಶಿವರಾಜ ಅಲ್ಮಾಜೆ, ಪ್ರವೀಣ ಕಾರಬಾರಿ ಸೇರಿದಂತೆ ವಿವಿಧ ಪದವಿಪೂರ್ವ ಕಾಲೇಜಗಳ ಉಪನ್ಯಾಸಕು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಗುರುನಾಥ ದೇಶಮುಖ ಪ್ರಾಸ್ತಾವಿಕ ಮಾತನಾಡಿದರು. ಕಂಟೆಪ್ಪ ಭೌರಾ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ನಂತರ ಶಾಸಕರು ಕೂಡ ವಿದ್ಯಾರ್ಥಿಗಳೊಂದಿಗೆ ವಾಲಿಬಾಲ್ ಆಟವಾಡಿ ಗಮನ ಸೆಳೆದರು.

Share This Article

ಗಂಟಲಲ್ಲಿ ಮೀನಿನ ಮುಳ್ಳು ಸಿಲುಕಿಕೊಂಡ್ರೆ ಏನು ಮಾಡ್ಬೇಕು? ಇಲ್ಲಿದೆ ನೋಡಿ ಸಿಂಪಲ್​ ಟಿಪ್ಸ್​ | Fish

ಮೀನು ( Fish ) ಗಳು ಅನೇಕ ಜನರ ನೆಚ್ಚಿನ ಆಹಾರಗಳಲ್ಲಿ ಒಂದಾಗಿದೆ. ಮೀನು ಆರೋಗ್ಯಕ್ಕೆ…

ಒಂದು ಕೈಯಲ್ಲಿ ಫೋನ್ ಹಿಡಿದುಕೊಂಡು ಸ್ಕ್ರೋಲಿಂಗ್ ಮಾಡ್ತೀರಾ?  ಇದ್ರಿಂದಲೇ ಗೊತ್ತಾಗುತ್ತದೆ ನಿಮ್ಮ Personality traits…

ಬೆಂಗಳೂರು:  ಈಗ  ಕೆಲವು ಅಧ್ಯಯನಗಳು ಒಬ್ಬ ವ್ಯಕ್ತಿಯ ವ್ಯಕ್ತಿತ್ವವನ್ನು (Personality traits ) ಹುಟ್ಟಿದ ದಿನಾಂಕ, ಕಣ್ಣಿನ…

Salt Water : ಪ್ರತಿದಿನ ಬೆಳಗ್ಗೆ ಉಗುರು ಬೆಚ್ಚನೆಯ ನೀರಿನಲ್ಲಿ ಉಪ್ಪು ಹಾಕಿ ಕುಡಿದರೆ ಏನಾಗುತ್ತೆ ಗೊತ್ತಾ?

ಬೆಂಗಳೂರು: ನಾವು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ನೀರು ಕುಡಿಯುವ ಅಭ್ಯಾಸ ಬೆಳೆಸಿಕೊಳ್ಳುವುದು ತುಂಬಾ…