More

    ಆಡಳಿತ ನೆಲಕಚ್ಚುವ ಸ್ಥಿತಿಗೆ ಬಂದಿದೆ

    ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ: ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಬಿಜೆಪಿ ಅಧಿಕಾರದಲ್ಲಿದ್ದಾಗ ಶೇ. 40 ರಷ್ಟು ಕಮಿಷನ್ ಸರ್ಕಾರ ಅಂತಿದ್ದರು. ಈಗ 6 ತಿಂಗಳಲ್ಲಿಯೇ ಭ್ರಷ್ಟಾಚಾರ ಮಿತಿ ಮೀರಿದ್ದು, ಆಡಳಿತ ನೆಲಕಚ್ಚುವ ಸ್ಥಿತಿಗೆ ಬಂದಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಟೀಕಿಸಿದರು.

    ಹುಬ್ಬಳ್ಳಿಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಸ್ತೆ, ಗಟಾರ ಸೇರಿ ಇನ್ನಿತರ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿಲ್ಲ. ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೊಂಡ ಕಾಮಗಾರಿಗಳ ಗುತ್ತಿಗೆದಾರರ ಬಿಲ್ ಪಾವತಿಯಾಗುತ್ತಿಲ್ಲ. ಮೇಲಿಂದ ಸೂಚನೆಯಿದೆ ಎಂದು ಅಧಿಕಾರಿಗಳು ನೆಪ ಹೇಳುತ್ತಿದ್ದಾರೆ. ರಾಜ್ಯ ಸರ್ಕಾರ ಪರಿಶೀಲನೆ ಮಾಡಿ ಗುತ್ತಿಗೆದಾರರಿಗೆ ಹಣ ಪಾವತಿಸಲಿ ಎಂದು ಹೇಳಿದರು.

    ರಾಜ್ಯ ಕಾಂಗ್ರೆಸ್​ನಲ್ಲಿ ಎಲ್ಲವೂ ಸರಿಯಿಲ್ಲ. ಸಿಎಂ ಹಾಗೂ ಡಿಸಿಎಂ ನಡುವೆ ಹೊಂದಾಣಿಕೆ ಇಲ್ಲ. ದೊಡ್ಡ ಪ್ರಮಾಣದಲ್ಲಿ ಭಿನ್ನಮತವಿದೆ. ಬಿ.ಆರ್. ಪಾಟಿಲ, ಬಸವರಾಜ ರಾಯರೆಡ್ಡಿ, ಸತೀಶ್ ಜಾರಕಿಹೊಳಿ ಗುಂಪುಗಾರಿಕೆ ನೋಡಿದರೆ ಇವರಿಗೆ ರಾಷ್ಟ್ರೀಯ ನಾಯಕರ ಹೆದರಿಕೆ ಇಲ್ಲದಂತೆ ಕಾಣಿಸುತ್ತಿದೆ. ಜನರಿಗೆ ದಿನವೀಡಿ ಇವರ ಜಗಳ ನೋಡುವುದೇ ಆಗಿದೆ ಎಂದರು.

    ಕಾಂಗ್ರೆಸ್ ರಾಷ್ಟ್ರೀಯ ನಾಯಕ ಶಶಿ ತರೂರ್ ಪಾಲ್ಗೊಂಡ ಸಭೆಯಲ್ಲೂ ಮುಂದಿನ ಮುಖ್ಯಮಂತ್ರಿ ಯಾರು, ಸಿದ್ದರಾಮಯ್ಯ ಅವರನ್ನು ಯಾವಾಗ ಕೆಳಗಿಳಿಸುತ್ತೀರಿ ಎಂಬಿತ್ಯಾದಿ ಚರ್ಚೆಗಳೇ ನಡೆದಿವೆ. ಅದರೆ, ಅದಕ್ಕೆ ತರೂರ ಉತ್ತರ ನೀಡಿಲ್ಲ ಎಂದು ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts