

ಕುಂದಾಪುರ: ಸ್ವಾಮಿ ವಿವೇಕಾನಂದ ಚಿಂತನಶೀಲ ವಿಚಾರ ವೇದಿಕೆ ಸಾರಥ್ಯದ ವಿವೇಕ ಚೇತನ ಚಾರಿಟೆಬಲ್ ಟ್ರಸ್ಟ್, ಶ್ರೀ ರಾಘವೇಂದ್ರ ಪ್ರಕಾಶನ ಸಹಯೋಗದಲ್ಲಿ ವಿವೇಕ ಚೇತನ ಶಿಕ್ಷಕರ ದಿನಾಚರಣೆ ಸಂದರ್ಭದಲ್ಲಿ ನೀಡುವ ‘ಗುರುಶ್ರೀ’ ರಾಜ್ಯ ಪ್ರಶಸ್ತಿಗೆ ಬೈಂದೂರು ಶೈಕ್ಷಣಿಕ ವಲಯದ ಆಲೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ದೈಹಿಕ ಶಿಕ್ಷಣ ಶಿಕ್ಷಕ ವೀರೇಂದ್ರ ಜೋಗಿ ಆಯ್ಕೆಯಾಗಿದ್ದಾರೆ.
ಆಲೂರು ಶಾಲೆಯಲ್ಲಿ 12 ವರ್ಷಗಳಿಂದ ದೈಹಿಕ ಶಿಕ್ಷಣ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಹೋಬಳಿ, ತಾಲೂಕುಮಟ್ಟದಲ್ಲಿ ಶಾಲೆಯ ತಂಡ ಸತತವಾಗಿ 6 ವರ್ಷ ಅಥ್ಲೆಟಿಕ್ಸ್‌ನಲ್ಲಿ ಸಮಗ್ರ ಪ್ರಶಸ್ತಿ ಪಡೆದು ಜಿಲ್ಲಾಮಟ್ಟದ ಸ್ಪರ್ಧೆಯಲ್ಲಿ ಅನೇಕ ವಿದ್ಯಾರ್ಥಿಗಳು ಭಾಗವಹಿಸುವಂತೆ ತರಬೇತಿ ನೀಡಿದ್ದಾರೆ.