ಬೆಳಗಾವಿ: ರಾಜ್ಯ ಬಿಜೆಪಿಯಲ್ಲಿ ಯಾವುದೇ ಭಿನ್ನಮತ ಇಲ್ಲ

ಬೆಳಗಾವಿ: ರಾಜ್ಯದ ಸಮಗ್ರ ಅಭಿವೃದ್ಧಿ ದೃಷ್ಟಿಕೋನ ಇಟ್ಟುಕೊಂಡು ಅಕಾರಕ್ಕೆ ಬಂದಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಸುಭದ್ರವಾಗಿದ್ದು, ಯಾವುದೆ ಭಿನ್ನಮತ ಇಲ್ಲ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಹೇಳಿದ್ದಾರೆ.

ನಗರದ ಕಾಡಾ ಕಚೇರಿಯಲ್ಲಿ ಶುಕ್ರವಾರ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಕೇಂದ್ರದಲ್ಲಿ ಪ್ರಧಾನಿ ಮೋದಿ ಸರ್ಕಾರ, ರಾಜ್ಯದಲ್ಲಿ ಸಿಎಂ ಯಡಿಯೂರಪ್ಪ ಸರ್ಕಾರ ಭದ್ರವಾಗಿವೆ. ಈ ಬಗ್ಗೆ ಆತಂಕ ಪಡುವ ಅಗತ್ಯ ಇಲ್ಲ ಎಂದರು.

ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಜನರ ಸಮಸ್ಯೆ ಪರಿಹರಿಸಲು ಮುಖ್ಯಮಂತ್ರಿ, ಸಚಿವರು ಹಗಲಿರುಳು ಶ್ರಮಿಸುತ್ತಿದ್ದಾರೆ. ಈಗಾಗಲೇ ಎಲ್ಲ ಸಚಿವರು ಸಂತ್ರಸ್ತರ ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆಗಳನ್ನು ಆಲಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರದ ಆಡಳಿತ ಕುರಿತು ವಿರೋಧ ಪಕ್ಷಗಳು ಟೀಕೆ ಮಾಡುವುದು ಸಾಮಾನ್ಯ. ಅದರಲ್ಲಿ ಕೆಲವರು ಸರ್ಕಾರವನ್ನು ಅತಂತ್ರಗೊಳಿಸಲು ಕೆಲಸ ಮಾಡಿರುತ್ತಾರೆ. ಹಾಗಂತ ಯಾರೂ ಹೆದರಬೇಕಿಲ್ಲ ಎಂದರು.

ಸೂಕ್ತ ಸಮಯದಲ್ಲಿ ಎಲ್ಲರಿಗೂ ಜವಾಬ್ದಾರಿ

ಸಿಎಂ ಯಡಿಯೂರಪ್ಪ ನೇತೃತ್ವದ ಸರ್ಕಾರದಲ್ಲಿ ಶಾಸಕ ಉಮೇಶ ಕತ್ತಿಗೆ ಸಚಿವ ಸ್ಥಾನ ತಪ್ಪಿದೆ. ಇದು ಹೈಕಮಾಂಡ್ ತೀರ್ಮಾನ. ಮುಂದಿನ ದಿನಗಳಲ್ಲಿ ಸಚಿವ ಸ್ಥಾನ ವಂಚಿತರಿಗೆ ಅವಕಾಶಗಳು ಸಿಗಲಿವೆ. ಪಕ್ಷದ ಹೈಕಮಾಂಡ್ ಸೂಕ್ತ ಸಮಯದಲ್ಲಿ ಎಲ್ಲರಿಗೂ ಜವಾಬ್ದಾರಿ ನೀಡಲಿದೆ ಎಂದು ಸಚಿವ ಸುರೇಶ ಅಂಗಡಿ ತಿಳಿಸಿದರು.

Leave a Reply

Your email address will not be published. Required fields are marked *