More

    ಗ್ಯಾರಂಟಿ ಯೋಜನೆಗಳು ಚುನಾವಣೆ ಗಿಮಿಕ್‌ ಅಲ್ಲ: ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ

    ಬೆಂಗಳೂರು: ಗ್ಯಾರಂಟಿ ಜಾರಿಯಿಂದ ಸರ್ಕಾರ ದಿವಾಳಿಯಾಗಿದೆ ಎಂದು ಕೆಲವರು ಸುಳ್ಳು ಹೇಳುತ್ತಿದ್ದಾರೆ. ಅಭಿವೃದ್ಧಿಯಾಗುವುದಿಲ್ಲ ಎಂದು ಹೇಳುತ್ತಿದ್ದಾರೆ. ಆದರೆ, ಎಲ್ಲರನ್ನೂ ಒಳಗೊಂಡಂತೆ ರಾಜ್ಯವನ್ನು ನಾವು ಅಭಿವೃದ್ಧಿ ಮಾಡುತ್ತೇವೆ ಎನ್ನುವ ಮೂಲಕ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದರು.

    ಬಜೆಟ್​ ಮಂಡನೆ ಆರಂಭಿಸಿದ ಸಿಎಂ ಸಿದ್ದರಾಮಯ್ಯ, ಮೊದಲು ಶರಣರ ಚಿಂತನೆ ಓದಿದರು. ಇದರೊಂದಿಗೆ ಡಾ. ರಾಜ್​ಕುಮಾರ್​ ಅಭಿನಯದ ಬಂಗಾರದ ಮನುಷ್ಯ ಚಿತ್ರದ “ಆಗದು ಎಂದು ಕೈಕಟ್ಟಿ ಕುಳಿತರೆ ಸಾಗದು ಕೆಲಸವು ಮುಂದೆ” ಎಂಬ ಅದ್ಭುತ ಹಾಡಿನ ಸಾಲುಗಳನ್ನು ಉಲ್ಲೇಖಿಸಿದರು. ನಮ್ಮ ದೇಶವು ಗಣರಾಜ್ಯವಾಗಿ 75ನೇ ವರ್ಷಕ್ಕೆ ಕಾಲಿಟ್ಟಿದೆ. ಈ ಒಳ್ಳೆಯ ಸಮಯದಲ್ಲಿ 15ನೇ ಬಜೆಟ್​ ಮಂಡನೆ ಮಾಡುತ್ತಿದ್ದೇನೆ. ಡಾ. ಬಿ.ಆರ್​. ಅಂಬೇಡ್ಕರ್​ರವರ ಆಶಯದಂತೆ ಸಾಮಾಜಿಕ ಸಮಾನತೆಯ ಉದ್ದೇಶದೊಂದಿಗೆ ಈ ಬಜೆಟ್ ಮಂಡನೆ ಮಾಡುತ್ತಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದರು.

    ಇದೇ ವೇಳೆ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ ಸಿದ್ದರಾಮಯ್ಯ, ನಾವು ಭರವಸೆ ನೀಡಿದ ಉಚಿತ ಗ್ಯಾರಂಟಿಗನ್ನು ಕಡಿಮೆ ಅವಧಿಯಲ್ಲಿ ಜಾರಿ ಮಾಡಿದ್ದೇವೆ. ಈ ಮೂಲಕ ನಮ್ಮ ಮಾತನ್ನು ಉಳಿಸಿಕೊಂಡಿದ್ದೇವೆ. ಜನರ ಆಶೋತ್ತರಗಳನ್ನು ಈಡೇರಿಸುವತ್ತ ಗ್ಯಾರಂಟಿಗಳು ಸಾಗಿದೆ. ಗ್ಯಾರಂಟಿ ಯೋಜನೆಗಳಿಂದ ನಮ್ಮ ಆರ್ಥಿಕ ಸ್ಥಿತಿ ಕೆಟ್ಟಿಲ್ಲ. ಬದಲಾಗಿ ನಮ್ಮ ಗ್ಯಾರಂಟಿಗಳನ್ನೇ ನಕಲಿ ಮಾಡಲಾಗುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿದರು.

    ನಮ್ಮ ಗ್ಯಾರಂಟಿ ಯೋಜನೆಗಳು ಚುನಾವಣೆಗೆ ಮಾಡಿದ ಗಿಮಿಕ್‌ ಅಲ್ಲ. ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿರುವುದನ್ನು ನೋಡಿ ಇಡೀ ಜಗತ್ತು ನಮ್ಮ ರಾಜ್ಯದತ್ತ ನೋಡುತ್ತಿದೆ. ಶಕ್ತಿ ಯೋಜನೆಯಿಂದ ಮಹಿಳೆಯರು ತುಂಬಾ ಖುಷಿಯಾಗಿದ್ದಾರೆ. ಗ್ಯಾರಂಟಿ ಜಾರಿಯಿಂದ ಸರ್ಕಾರ ದಿವಾಳಿಯಾಗಿದೆ ಎಂದು ಕೆಲವರು ಸುಳ್ಳು ಹೇಳುತ್ತಿದ್ದಾರೆ. ಅಭಿವೃದ್ಧಿಯಾಗುವುದಿಲ್ಲ ಎಂದು ಹೇಳುತ್ತಿದ್ದಾರೆ. ಆದರೆ, ಎಲ್ಲರನ್ನೂ ಒಳಗೊಂಡಂತೆ ರಾಜ್ಯವನ್ನು ನಾವು ಅಭಿವೃದ್ಧಿ ಮಾಡುತ್ತೇವೆ ಎಂದು ಸಿದ್ದರಾಮಯ್ಯ ತಿಳಿಸಿದರು.

    2024-25 ನೇ ಸಾಲಿನಲ್ಲಿ ಶೇಕಡಾ 6.6 ರಷ್ಟು ರಾಜ್ಯದ ಬೆಳವಣಿಗೆ ದರ ಗುರಿ ಹೊಂದಿದೆ. ಗ್ರಾಮೀಣ ಮಟ್ಟದಲ್ಲಿ ಆಧುನಿಕ ಶಿಕ್ಷಣ ನೀಡಲಾಗುತ್ತಿದೆ. ಕೌಶಲ್ಯಾಭಿವೃದ್ಧಿ ಕ್ಷೇತ್ರಕ್ಕೆ ಹೆಚ್ಚಿನ ಮನ್ನಣೆ ನೀಡಲಾಗಿದೆ. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಶಾಲೆಗಳ ಅಭಿವೃದ್ಧಿಯಾಗುತ್ತಿದೆ. ಈ ಆಯವ್ಯಯ ಮುಂದಿನ ರಾಜಕೀಯ ನಡೆಯ ಸಂಕೇತವಾಗಲಿದೆ ಎಂದು ತಿಳಿಸಿದರು.

    ಶಿವಮೊಗ್ಗ: ಪ್ರಾಣಿ, ಪಕ್ಷಿಗಳನ್ನು ಓಡಿಸುವುದಕ್ಕೂ ಕೆಲಸ‌ ಖಾಲಿ ಇದೆ…ಅದೂ ವಿಮಾನ ನಿಲ್ದಾಣದಲ್ಲಿ!

    ರಾಜ್ಯಸಭೆ ಎಲೆಕ್ಷನ್​ಗೆ ಪಂಚ್!; ಕುದುರೆ ವ್ಯಾಪಾರ ಸಾಧ್ಯತೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts