ಬೋಗಸ್ ಬಜೆಟ್ ಮಂಡಿಸುವ ಮುನ್ನವೇ ತುಷ್ಟೀಕರಣ ಆರಂಭಿಸಿದ ಭಂಡ ಹಾಗೂ ಭ್ರಷ್ಟರು: ಬಿಜೆಪಿ ಕಿಡಿ | State Budget 2025

State Budget 2025
Published on

State Budget 2025 : 2025-26ನೇ ಸಾಲಿನ ಬಜೆಟ್​ ಮಂಡನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಆರಂಭಿಸಿದ್ದಾರೆ. ರಾಜ್ಯದ ಇತಿಹಾಸದಲ್ಲಿ ದಾಖಲೆಯ 16ನೇ ಬಜೆಟ್​ ಅನ್ನು ಸಿಎಂ ಸಿದ್ದರಾಮಯ್ಯ ಮಂಡಿಸುತ್ತಿದ್ದು, ಜನಸಾಮಾನ್ಯರ ನಿರೀಕ್ಷೆ ಗರಿಗೆದರಿದೆ. ಇದರ ನಡುವೆ ಪ್ರತಿಪಕ್ಷ ಬಿಜೆಪಿ ಧರಣಿ ನಡೆಸುತ್ತಿದೆ.

ಬಜೆಟ್​ ಮಂಡನೆಗೂ ಮುನ್ನ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ವಿಪಕ್ಷ ನಾಯಕರು ಪ್ರತಿಭಟನೆಯನ್ನು ನಡೆಸಿದರು. ಗ್ಯಾರಂಟಿ ಯೋಜನೆಯನ್ನು ನಡೆಸಲಾಗದೇ ಪರದಾಡುತ್ತಿರುವ ಸರ್ಕಾರ ದಲಿತರ ಹಣವನ್ನು ದುರ್ಬಳಕೆ ಮಾಡಿದೆ ಕಿಡಿಕಾರಿದರು.

ಇದಕ್ಕೂ ಮುನ್ನ ಟ್ವೀಟ್​ ಮಾಡಿರುವ ಬಿಜೆಪಿ, ಬೋಗಸ್ ಬಜೆಟ್ ಮಂಡಿಸುವ ಮುನ್ನವೇ ತುಷ್ಟೀಕರಣವನ್ನು ಆರಂಭಿಸಿದ ಭಂಡ ಹಾಗೂ ಭ್ರಷ್ಟರು ಎಂದು ಕಾಂಗ್ರೆಸ್​ ಸರ್ಕಾರದ ವಿರುದ್ಧ ಮುಗಿಬಿದ್ದಿದೆ. ಗುತ್ತಿಗೆಯಲ್ಲಿ ಮುಸ್ಲಿಂರಿಗೆ ಶೇ.4 ರಷ್ಟು ಮೀಸಲಾತಿ ಹಿನ್ನೆಲೆಯಲ್ಲಿ ಬಿಜೆಪಿ ಆಕ್ರೋಶ ಹೊರಹಾಕಿದೆ.

ಈ ಬಾರಿಯ ಬಜೆಟ್​ ಅನ್ನು 10.15ಕ್ಕೆ ಅಂದರೆ, ರಾಹುಕಾಲ ಆರಂಭವಾಗುವ ಮುಂಚೆಯೇ ಆರಂಭಿಸಿದ್ದಾರೆ. ಕಳೆದ ಬಾರಿ 3.71 ಲಕ್ಷ ಕೋಟಿ ರೂಪಾಯಿ ಬಜೆಟ್ ಮಂಡಿಸಲಾಗಿತ್ತು. ಈ ಬಾರಿ ಬಜೆಟ್ ಗಾತ್ರ ಹೆಚ್ಚಾಗಲಿದೆ ಎಂದು ಹೇಳಲಾಗಿದ್ದು, 4 ಲಕ್ಷ ಕೋಟಿ ರೂಪಾಯಿ ದಾಟಬಹುದು ಎಂದು ಅಂದಾಜಿಸಲಾಗಿದೆ. ಈ ಬಾರಿಯ ಬಜೆಟ್​ನಲ್ಲಿ ಗ್ಯಾರಂಟಿ ಯೋಜನೆ, ಮೆಟ್ರೋ, ವೈದ್ಯಕೀಯ ಕಾಲೇಜು, ಕೈಗಾರಿಕೆ, ಹೋಟೆಲ್​ ಉದ್ಯಮ, ಉನ್ನತ ಶಿಕ್ಷಣ ಇಲಾಖೆ, ಹೈಟೆಕ್​ ರಸ್ತೆಗಳ ಅಭಿವೃದ್ಧಿಗೆ ಬಜೆಟ್​ನಲ್ಲಿ ಭರಪೂರ ಅನುದಾನ ಘೋಷಣೆಯಾಗುವ ಸಾಧ್ಯತೆಯಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net