More

    ರಾಜ್ಯ ಬಜೆಟ್​​​| ಕೃಷಿ ಮತ್ತು ಪೂರಕ ಚಟುವಟಿಕೆಗಳಿಗೆ 31,028 ಕೋಟಿ ರೂ. ಅನುದಾನ

    ಬೆಂಗಳೂರು: 2021-22ನೇ ಸಾಲಿನ ರಾಜ್ಯ ಬಜೆಟ್​ನಲ್ಲಿ ಕೃಷಿ ಮತ್ತು ಪೂರಕ ಚಟುವಟಿಕೆಗಳ ವಲಯಕ್ಕೆ ಸರ್ಕಾರ 31,028 ಕೋಟಿ ರೂ. ಅನುದಾನವನ್ನು ಮೀಸಲಿಟ್ಟಿದ್ದು, ಸಂಪೂರ್ಣ ವಿವರಣೆ ಈ ಕೆಳಕಂಡಂತಿದೆ.

    • ಸಾವಯವ ಕೃಷಿ ಉತ್ತೇಜನಕ್ಕೆ 500 ಕೋಟಿ ರೂ.ಗಳ ವೆಚ್ಚದಲ್ಲಿ ಯೋಜನೆ ಜಾರಿ.
    • ವಿಜಯಪುರ ಜಿಲ್ಲೆ ಇಟ್ಟಂಗಿಹಾಳ ಗ್ರಾಮದಲ್ಲಿ ಆತ್ಮನಿರ್ಭರ ಭಾರತ ಅಭಿಯಾನ ಯೋಜನೆಯಡಿ ಆಹಾರ ಪಾರ್ಕ್ ಸ್ಥಾಪನೆ.
    • ಕೃಷಿ ವಿಶ್ವವಿದ್ಯಾನಿಲಯಗಳಲ್ಲಿ ರೈತರ ಮಕ್ಕಳಿಗೆ ಇರುವ ಮೀಸಲಾತಿ ಶೇ.50ಕ್ಕೆ ಹೆಚ್ಚಳ.
    • ಕೃಷಿ ಯಾಂತ್ರೀಕರಣ ಯೋಜನೆಯಡಿ ಸಣ್ಣ ಟ್ಯ್ರಾಕ್ಟರ್​ಗಳಿಗೆ ನೀಡುತ್ತಿದ್ದ ಸಹಾಯಧನ 25-45 PTO ಟ್ಯ್ರಾಕ್ಟರ್​ಗಳಿಗೆ ವಿಸ್ತರಣೆ.
    • ಆತ್ಮ ನಿರ್ಭರ ಭಾರತ ಅಭಿಯಾನದ ಅಡಿಯಲ್ಲಿ ಆಹಾರ ಸಂಸ್ಕರಣೆ ಹಾಗೂ ಕೊಯ್ಲೋತ್ತರ ನಿರ್ವಹಣಾ ಘಟಕಗಳಿಗೆ ನೀಡುವ ಶೇ. 35 ರಷ್ಟು ಸಹಾಯಧನವನ್ನು ಶೇ. 50ಕ್ಕೆ ಹೆಚ್ಚಿಸಲು ರಾಜ್ಯ ಸರ್ಕಾರದಿಂದ ಶೇ. 15 ರಷ್ಟು ಹೆಚ್ಚುವರಿ ಸಹಾಯಧನ; 50 ಕೋಟಿ ರೂ. ಗಳ ಅನುದಾನ.
    • ಕೊಪ್ಪಳ ಜಿಲ್ಲೆಯ ಸಿರಿವಾರ ಗ್ರಾಮದಲ್ಲಿ ತೋಟಗಾರಿಕೆ ತಂತ್ರಜ್ಞಾನ ಪಾರ್ಕ್ ಅಭಿವೃದ್ಧಿ.
    • ರೈತ ಉತ್ಪಾದಕರ ಸಂಸ್ಥೆಗಳು ಮಾರಾಟ ಮಾಡುವ ತೋಟಗಾರಿಕೆ ಉತ್ಪನ್ನಗಳಿಗೆ ‘ಬ್ರಾಂಡ್ ವ್ಯಾಲ್ಯೂ’ ಕಲ್ಪಿಸಲು ಹಾಗೂ ಉತ್ತಮ ಮಾರುಕಟ್ಟೆ ಸಂಪರ್ಕ ಒದಗಿಸಲು ಕ್ರಮ.
    • ಅಡಿಕೆ ಬೆಳಗಾರರನ್ನು ಬಾಧಿಸುತ್ತಿರುವ ಹಳದಿ ಎಲೆ ರೋಗದ ಕುರಿತ ಸಂಶೋಧನೆ ಹಾಗೂ ಪರ್ಯಾಯ ಬೆಳೆಯನ್ನು ಪ್ರೋತ್ಸಾಹಿಸಲು 25 ಕೋಟಿ ರೂ.
    • ಸುವಾಸನೆಯುಕ್ತ ಮತ್ತು ಗಿಡಗಳು, ಹಣ್ಣು ಹಂಪಲು, ತರಕಾರಿಗಳು ಮತ್ತು ಸಂಬಾರ ಪದಾರ್ಥಗಳಿಗಾಗಿ ಹೊಸ ಕೃಷಿ ರಫ್ತು ವಲಯ ಸ್ಥಾಪನೆ; ತೋಟಗಾರಿಕಾ ಬೆಳೆಗಳ ರಫ್ತಿಗೆ ರಾಜ್ಯದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಪೂರಕ ಸೌಲಭ್ಯ. ಹಣ್ಣು ಮತ್ತು ತರಕಾರಿ ಬೆಳೆಗಳ ಮೌಲ್ಯ ವರ್ಧನೆ ಮತ್ತು ಮಾರುಕಟ್ಟೆ ಸಂಪರ್ಕ ಕಲ್ಪಿಸಲು ಬೆಳೆಗಾರರಿಗೆ ತರಬೇತಿ ಮತ್ತು ತಾಂತ್ರಿಕ ಬೆಂಬಲ.
    • ಕಳಸಾ ಬಂಡೂರಿ ತಿರುವು ಯೋಜನೆಗೆ 1677 ಕೋಟಿ ರೂ. ಅನುದಾನ. ಭದ್ರಾ ಯೋಜನೆಯನ್ನು ರಾಷ್ಟ್ರೀಯ ಯೋಜನೆಯೆಂದು ಘೋಷಿಸಲು ಕೇಂದ್ರಕ್ಕೆ ಒತ್ತಾಯ. 58 ಡ್ಯಾಂಗಳ ಪುನಶ್ಚೇತನಕ್ಕೆ ಕ್ರಮ. ಮೀನು ಮಾರಾಟ, ಮತ್ಸದರ್ಶಿನಿಗಳ ಸ್ಥಾಪನೆಗೆ 30 ಕೋಟಿ ರೂ., ಸೋಮೇಶ್ವರ ಕಡಲ ತೀರ ಅಭಿವೃದ್ಧಿಗೆ 10 ಕೋಟಿ ರೂಪಾಯಿ ಮತ್ತು ವಿಜಯಪುರದಲ್ಲಿ ಫುಡ್ ಪಾರ್ಕ್ ಸ್ಥಾಪನೆ. ಚಾಮರಾಜನಗರದಲ್ಲಿ ಅರಿಶಿನ ಮಾರುಕಟ್ಟೆಯ ಸಮಗ್ರ ಅಭಿವೃದ್ಧಿ. ಬಳ್ಳಾರಿಯ ಆಲದಹಳ್ಳಿ ಗ್ರಾಮದಲ್ಲಿ ಅತ್ಯಾಧುನಿಕ ಒಣಮೆಣಸಿನಕಾಯಿ ಮಾರುಕಟ್ಟೆ ಸ್ಥಾಪನೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts