More

    ಕೋವಿಡ್​ನಿಂದಾಗಿ ಇಡೀ ಆರ್ಥಿಕ ವ್ಯವಸ್ಥೆ ಬುಡಮೇಲಾಗಿದೆ: ಸಿಎಂ ಬಿಎಸ್​ವೈ

    ಬೆಂಗಳೂರು: ಕರೊನಾ ಸಂಕಷ್ಟವು ಒಂದು ದುಸ್ವಪ್ನವಾಗಿ ಕಾಡಿದೆ. ಈ ಸಂಕಷ್ಟದ ನಡುವೆಯೂ ಸರ್ಕಾರ ಉತ್ತಮವಾಗಿ ಕೆಲಸ ಮಾಡಿದೆ ಎಂದು ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರು ತಿಳಿಸಿದರು.

    2021-22ನೇ ಸಾಲಿನ ಬಜೆಟ್​ ಮಂಡನೆ ಆರಂಭಕ್ಕೂ ಮುನ್ನ ಕರೊನಾ ಹಾಗೂ ನೆರೆ ಪರಿಸ್ಥಿತಿ ಬಗ್ಗೆ ಸಿಎಂ ಬಿಎಸ್​ವೈ ಮಾತನಾಡಿದರು. ನಮ್ಮ ಸರ್ಕಾರದಲ್ಲಿ ಅತಿವೃಷ್ಠಿ, ಅನಾವೃಷ್ಠಿ ನಿರಂತರ ಸವಾಲಾಗಿತ್ತು, ಇದರೊಂದಿಗೆ ಕರೊನಾ ದುಸ್ವಪ್ನವಾಗಿ ಕಾಡಿತು. ಕೋವಿಡ್​ನಿಂದಾಗಿ ಇಡೀ ಆರ್ಥಿಕ ವ್ಯವಸ್ಥೆ ಬುಡಮೇಲಾಗಿದೆ ಎಂದರು.

    ಜನರಿಗೆ ಉಚಿತ ಕರೊನಾ ಚಿಕಿತ್ಸೆ ನೀಡಲಾಗಿದೆ. ಫೆಬ್ರವರಿ ಅಂತ್ಯಕ್ಕೆ 1.91 ಕೋಟಿ ಆರ್​ಟಿಪಿಸಿಆರ್​ ಟೆಸ್ಟ್​ ಮಾಡಲಾಗಿದೆ. ಕಟ್ಟಡ ಕಾರ್ಮಿಕರಿಗೆ ಆಹಾರ ಪೊಟ್ಟಣ ನೀಡಲಾಗಿದೆ. ರಾಜ್ಯ ಕಾರ್ಯಕ್ಷಮತೆಯನ್ನು ಪ್ರಧಾನಿ ಮೋದಿ ಮೆಚ್ಚಿದ್ದಾರೆ. ಪಿಪಿಇ ಕಿಟ್ ಉತ್ಪಾದನೆಯಲ್ಲಿ ಹೆಚ್ಚಳ ಮಾಡಲಾಗಿದೆ. ಕೋವಿಡ್ ಲಸಿಕೆ ಹಂಚಿಕೆಯಲ್ಲಿ ರಾಷ್ಟ್ರದ ಗಮನ ಸೆಳೆದಿದ್ದೇವೆ ಎಂದರು.

    ಕೋವಿಡ್ ವಾರಿಯರ್ಸ್​ಗೆ ಈ ಸಂದರ್ಭದಲ್ಲಿ ಧನ್ಯವಾದ ಅರ್ಪಿಸಿದ ಬಿ.ಎಸ್.ಯಡಿಯೂರಪ್ಪ, ಕೋವಿಡ್ ಕಾಲದಲ್ಲಿ ಕಲಿತ ಪಾಠ ಸ್ಮರಣೀಯವಾಗಿದೆ ಎಂದು ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts