More

    ಹೈಸ್ಕೂಲ್​ ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿ ವಿದ್ಯಾಶಕ್ತಿ ಮತ್ತು ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಹಳ್ಳಿಮುತ್ತು ಯೋಜನೆ ಜಾರಿ

    ಬೆಂಗಳೂರು: ರಾಜ್ಯದ ಎಲ್ಲಾ ಪ್ರೌಢ ಶಾಲಾ ವಿದ್ಯಾರ್ಥಿಗಳು ಉನ್ನತ ಶಿಕ್ಷಣವನ್ನು ಹೊಂದಲು ಅನುವು ಮಾಡಿಕೊಡುವ ದೃಷ್ಟಿಯಿಂದ ‘ಮುಖ್ಯಮಂತ್ರಿ ವಿದ್ಯಾಶಕ್ತಿ’ ಯೋಜನೆಯನ್ನು ಪ್ರಾರಂಭಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಣೆ ಮಾಡಿದರು.

    ಈ ಯೋಜನೆ ಅಡಿಯಲ್ಲಿ ಸರ್ಕಾರಿ ಪದವಿಪೂರ್ವ ಮತ್ತು ಸರ್ಕಾರಿ ಪದವಿ ಕಾಲೇಜುಗಳಲ್ಲಿ ಪ್ರವೇಶ ಪಡೆಯುವ ಎಲ್ಲಾ ವಿದ್ಯಾರ್ಥಿಗಳಿಗೆ ಪೂರ್ಣ ಶುಲ್ಕ ವಿನಾಯಿತಿ ನೀಡಲಾಗುವುದು. ಈ ಉಚಿತ ಉನ್ನತ ಶಿಕ್ಷಣದಿಂದ ರಾಜ್ಯದ 8 ಲಕ್ಷ ವಿದ್ಯಾರ್ಥಿಗಳು ಅನುಕೂಲ ಪಡೆಯಲಿದ್ದಾರೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.

    ಇಷ್ಟೇ ಅಲ್ಲದೆ, ‘ಹಳ್ಳಿ ಮುತ್ತು’ ಎಂಬ ಯೋಜನೆಯಡಿ ಗ್ರಾಮೀಣ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಶಾಲಾ ಶಿಕ್ಷಣವನ್ನು ಪೂರೈಸುವ 500 ಅತ್ಯುತ್ತಮ ವಿದ್ಯಾರ್ಥಿಗಳಿಗೆ, CET ಮೂಲಕ ಸರ್ಕಾರಿ ಕೋಟಾದಲ್ಲಿ ಆಯ್ಕೆಯಾದ ವೃತ್ತಿಪರ ಶಿಕ್ಷಣದ ಸಂಪೂರ್ಣ ಶುಲ್ಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಭರಿಸುವುದಾಗಿ ಹೇಳಿದರು.

    ವಿದ್ಯಾವರ್ಧಿನಿ’ ಯೋಜನೆಯಡಿ ಎಲ್ಲಾ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜುಗಳು ಹಾಗೂ ಪಾಲಿಟೆಕ್ನಿಕ್‌ಗಳಿಗೆ ಅಗತ್ಯ ಮೂಲಭೂತ ಸೌಲಭ್ಯಗಳು ಒದಗಿಸಲಾಗುವುದು ಮತ್ತು ವಿದ್ಯಾರ್ಥಿನಿಯರ ದೈಹಿಕ ಸಾಮರ್ಥ್ಯ ಮತ್ತು ಆತ್ಮವಿಶ್ವಾಸ ವೃದ್ಧಿಗೆ ಎಲ್ಲಾ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜುಗಳು, ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಯೋಗ ತರಬೇತಿ ನೀಡಲಾಗುವುದು ಎಂದು ಸಿಎಂ ಬೊಮ್ಮಾಯಿ ಅವರು ಹೇಳಿದರು.

    ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಸರ್ಕಾರದ ಅವಧಿಯ ಕೊನೆಯ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಹಣಕಾಸು ಖಾತೆಯನ್ನೂ ಹೊಂದಿರುವ ಸಿಎಂ ಬೊಮ್ಮಾಯಿ ಅವರ ಪಾಲಿಗೆ ಇದು 2ನೇ ಬಜೆಟ್​ ಮಂಡನೆಯಾಗಿದೆ.

    ಎಸ್​ಸಿ, ಎಸ್​​ಟಿ ಗುತ್ತಿಗೆದಾರರಿಗೆ ಬಂಪರ್! ಟೆಂಡರ್​ನಲ್ಲಿ ಶೇ. 24 ಮೀಸಲಾತಿ

    ರಾಜ್ಯ ಬಜೆಟ್​ 2023| ಆರೋಗ್ಯ ಕ್ಷೇತ್ರ ಸುಧಾರಣೆಗೆ 720 ಕೋಟಿ ರೂ., ಉ. ಕನ್ನಡ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ

    1,230 ಹೆಚ್ಚುವರಿಯಾಗಿ ಶಾಲಾ ಕೊಠಡಿ ನಿರ್ಮಾಣ; ಸಿಎಂ ಬೊಮ್ಮಾಯಿ ಘೋಷಣೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts