More

    ರಾಜ್ಯ ಬಜೆಟ್​ 2023| ಪ್ರಸಕ್ತ ವರ್ಷದಲ್ಲಿ 5 ಲಕ್ಷ ಮನೆಗಳ ನಿರ್ಮಾಣಕ್ಕೆ 5 ಸಾವಿರ ಕೋಟಿ ರೂ. ಮೀಸಲು

    ಬೆಂಗಳೂರು: ಪ್ರಸಕ್ತ ವರ್ಷದಲ್ಲಿ 5 ಲಕ್ಷ ಮನೆಗಳ ನಿರ್ಮಾಣಕ್ಕೆ 5 ಸಾವಿರ ಕೋಟಿ ರೂಪಾಯಿ ಮೀಸಲು ಇಟ್ಟಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಜೆಟ್​ನಲ್ಲಿ ಘೋಷಣೆ ಮಾಡಿದರು.

    ನಮ್ಮ ಸರ್ಕಾರವು ಎಲ್ಲರಿಗೂ ಸೂರು ಒದಗಿಸಲು ವಿಶೇಷ ಆದ್ಯತೆ ನೀಡಿದೆ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗ, ಹಿಂದಿನ ಸರ್ಕಾರ ಯಾವುದೇ ಅನುದಾನ ಹಂಚಿಕೆ ಮಾಡದೇ 15.84 ಲಕ್ಷ ಮನೆಗಳು ಮಂಜೂರು ಮಾಡಲಾಗಿತ್ತು. ಬಡವರ ಹಿತಾಸಕ್ತಿಯ ದೃಷ್ಟಿಯಿಂದ ಹಿಂದಿನ ಸರ್ಕಾರದ ಅವಧಿಯಲ್ಲಿ ಘೋಷಿಸಿದ್ದ ಮನೆಗಳಿಗೆ ನಮ್ಮ ಸರ್ಕಾರವು ಎರಡು ವರ್ಷಗಳ ಕೋವಿಡ್ ಸಂಕಷ್ಟದ ನಡುವೆಯೂ 10,173 ಕೋಟಿ ರೂ. ಅನುದಾನವನ್ನು ಹಂಚಿಕೆ ಮಾಡಿ, ಸುಮಾರು 5 ಲಕ್ಷ ಮನೆಗಳನ್ನು ಪೂರ್ಣಗೊಳಿಸಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

    5 ಲಕ್ಷ ಹೊಸ ಮನೆಗಳ ನಿರ್ಮಾಣಕ್ಕೆ ಅನುಮೋದನೆ ನೀಡಿದ್ದ, ಪ್ರಸಕ್ತ ವರ್ಷದಲ್ಲಿ 5 ಲಕ್ಷ ಮನೆಗಳನ್ನು ಪೂರ್ಣಗೊಳಿಸಲಾಗುವುದು ಹಾಗೂ ಒಟ್ಟಾರೆ 5,000 ಕೋಟಿ ರೂ. ಗಳನ್ನು ವೆಚ್ಚ ಮಾಡಲಾಗುವುದು ಎಂದು ಘೋಷಿಸಿದರು.

    ಬೆಂಗಳೂರಿನಲ್ಲಿ ಪ್ರಸಕ್ತ ವರ್ಷದಲ್ಲಿ 20,000 ಮನೆಗಳನ್ನು ಪೂರ್ಣಗೊಳಿಸಿ ಫಲಾನುಭವಿಗಳಿಗೆ ಹಸ್ತಾಂತರಿಸಲಾಗುವುದು. ಈ ಯೋಜನೆಯಡಿ ಇಚ್ಛೆಪಡುವ ಮನೆಯನ್ನು ಆನ್‌ಲೈನ್‌ನಲ್ಲಿ ಫಲಾನುಭವಿಗಳೇ ಆಯ್ಕೆ ಮಾಡಿಕೊಳ್ಳುವ ವ್ಯವಸ್ಥೆಯನ್ನು ರೂಪಿಸಲಾಗಿದೆ. ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕುಗಳಲ್ಲಿ ಎಲ್ಲಾ ವಸತಿ ರಹಿತರಿಗೆ ವಸತಿ ಸೌಲಭ್ಯವನ್ನು ಕಲ್ಪಿಸುವುದು ನಮ್ಮ ಸರ್ಕಾರದ ಆದ್ಯತೆಯಾಗಿದೆ ಎಂದು ತಿಳಿಸುವುದು.

    ಅತಿವೃಷ್ಟಿಯಿಂದ ಸಂಪೂರ್ಣವಾಗಿ ಹಾನಿಯಾಗಿರುವ ಮನೆಗಳ ಪುನರ್ ನಿರ್ಮಾಣಕ್ಕೆ ನೀಡುತ್ತಿರುವ ಸಹಾಯಧನವನ್ನು ನಮ್ಮ ಸರ್ಕಾರವು 5 ಲಕ್ಷ ರೂ. ಗಳಿಗೆ ಹೆಚ್ಚಿಸಿದೆ. ವಿವಿಧ ವರ್ಗಗಳಡಿಯಲ್ಲಿ ಕಳೆದ 4 ವರ್ಷಗಳಲ್ಲಿ 3,01,884 ಮನೆಗಳ ಪುನರ್ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದ್ದು, ಇದಕ್ಕೆ ಇಲ್ಲಿಯವರೆಗೂ 2,627 ಕೋಟಿ ರೂ. ಗಳನ್ನು ಬಿಡುಗಡೆ ಮಾಡಲಾಗಿದೆ ಎಂದರು.

    ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಸರ್ಕಾರದ ಅವಧಿಯ ಕೊನೆಯ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಹಣಕಾಸು ಖಾತೆಯನ್ನೂ ಹೊಂದಿರುವ ಸಿಎಂ ಬೊಮ್ಮಾಯಿ ಅವರ ಪಾಲಿಗೆ ಇದು 2ನೇ ಬಜೆಟ್​ ಮಂಡನೆಯಾಗಿದೆ.

    ಹೈಸ್ಕೂಲ್​ ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿ ವಿದ್ಯಾಶಕ್ತಿ ಮತ್ತು ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಹಳ್ಳಿಮುತ್ತು ಯೋಜನೆ ಜಾರಿ

    ಆಸಿಡ್ ದಾಳಿ ಸಂತ್ರಸ್ತೆಯರಿಗೆ ನೆರವು; ಸ್ವಯಂ ಉದ್ಯೋಗಕ್ಕೆ ಬಡ್ಡಿ ರಹಿತ ಸಾಲ

    ಹೊಸ ಬಜೆಟ್​ನಲ್ಲಿ ಚರಂಡಿ ಅಭಿವೃದ್ಧಿಗೂ ಆದ್ಯತೆ; ಬೃಹತ್ ಪ್ರಮಾಣದ ತ್ಯಾಜ್ಯ ಉತ್ಪಾದಕರಿಗೆ ಸಂಸ್ಕರಣೆ ಕಡ್ಡಾಯ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts