

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಸರ್ಕಾರದ ಅವಧಿಯ ಕೊನೆಯ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಹಣಕಾಸು ಖಾತೆಯನ್ನೂ ಹೊಂದಿರುವ ಸಿಎಂ ಬೊಮ್ಮಾಯಿ ಅವರ ಪಾಲಿಗೆ ಇದು 2ನೇ ಬಜೆಟ್ ಮಂಡನೆಯಾಗಿದೆ. ಇನ್ನು ಕೆಲವೇ ತಿಂಗಳಲ್ಲಿ ಎದುರಾಗಲಿರುವ ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಜನಪ್ರಿಯ ಯೋಜನೆಗಳ ಘೋಷಣೆ ಸಾಧ್ಯತೆ ಇದೆ. ಬಜೆಟ್ ಕುರಿತ ಕ್ಷಣದ ಕ್ಷಣದ ಮಾಹಿತಿಯನ್ನು ಆರ್ಥಿಕ ಹಾಗೂ ರಾಜಕೀಯ ಪರಿಣಿತರ ಚರ್ಚೆ ಮತ್ತು ವಿಶ್ಲೇಷಣೆಯೊಂದಿಗೆ ಈ ಮೇಲಿನ ದಿಗ್ವಿಜಯ ನ್ಯೂಸ್ 24×7 ಯೂಟ್ಯೂಬ್ ಲೈವ್ನಲ್ಲಿ ವೀಕ್ಷಿಸಬಹುದಾಗಿದೆ.