More

    ರಾಜ್ಯ ಬಜೆಟ್​ನಲ್ಲಿ ಸ್ತ್ರೀ ಸಬಲೀಕರಣಕ್ಕೆ ಬಂಪರ್ ಗಿಫ್ಟ್​: ಗೃಹಿಣಿಯರಿಗೆ 500 ರೂ. ಸಹಾಯಧನ, ವಿದ್ಯಾರ್ಥಿನಿಯರಿಗೆ ಫ್ರೀ ಬಸ್ ಪಾಸ್

    ಬೆಂಗಳೂರು: ಈ ಬಾರಿಯ ರಾಜ್ಯ ಬಜೆಟ್​ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ತ್ರೀ ಸಬಲೀಕರಣಕ್ಕೆ ಬಂಪರ್​ ಕೊಡುಗೆಯನ್ನು ಘೋಷಣೆ ಮಾಡಿದ್ದಾರೆ.

    ರಾಜ್ಯದಲ್ಲಿ ಗೃಹಿಣಿ ಶಕ್ತಿ ಯೋಜನೆ ಜಾರಿಗೆ ಘೋಷಣೆ ಮಾಡಿರುವ ಸಿಎಂ ಬೊಮ್ಮಾಯಿ, ಗೃಹಿಣಿಯರಿಗೆ ತಿಂಗಳಿಗೆ 500 ರೂ. ಸಹಾಯಧನ, 30 ಲಕ್ಷ ಮಹಿಳೆಯರಿಗೆ ಹಾಗೂ ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್ ಮತ್ತು 1 ಲಕ್ಷ ಮಹಿಳೆಯರಿಗೆ ಉಚಿತ ಕೌಶಲ್ಯ ತರಬೇತಿಯನ್ನು ಘೋಷಣೆ ಮಾಡಿದ್ದಾರೆ. ಸುಮಾರು 350 ಕೋಟಿ ರೂಪಾಯಿ ವೆಚ್ಚದಲ್ಲಿ ಉಚಿತ ಬಸ್‌ ಪಾಸ್ ನೀಡಲಾಗುವುದು ಎಂದ ಸಿಎಂ ಬೊಮ್ಮಾಯಿ ಘೋಷಣೆ ಮಾಡಿದರು.

    ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಸರ್ಕಾರದ ಅವಧಿಯ ಕೊನೆಯ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಹಣಕಾಸು ಖಾತೆಯನ್ನೂ ಹೊಂದಿರುವ ಸಿಎಂ ಬೊಮ್ಮಾಯಿ ಅವರ ಪಾಲಿಗೆ ಇದು 2ನೇ ಬಜೆಟ್​ ಮಂಡನೆಯಾಗಿದೆ. ಈ ಬಾರಿಯ ಬಜೆಟ್​ ಗಾತ್ರ ಒಟ್ಟು 3 ಲಕ್ಷ 9 ಸಾವಿರ 182 ಕೋಟಿ ರೂ. ಆಗಿದೆ.

    ಕಿವಿಗೆ ಹೂ ಇಟ್ಟುಕೊಂಡ ಬಂದ ಸಿದ್ದರಾಮಯ್ಯ! ಸಿಎಂ ಬೊಮ್ಮಾಯಿ ಟಾಂಗ್​, ಬಜೆಟ್​ ಮಂಡನೆಗೆ ಕಾಂಗ್ರೆಸ್ ವಿರೋಧ

    ಒಟ್ಟು 3 ಲಕ್ಷ 9 ಸಾವಿರ 182 ಕೋಟಿ ರೂ. ಮೊತ್ತದ ಬಜೆಟ್!

    LIVE| ರಾಜ್ಯ ಬಜೆಟ್ 2023​: ತಜ್ಞರ ಚರ್ಚೆ-ವಿಶ್ಲೇಷಣೆ ಜತೆಗೆ ಕ್ಷಣ ಕ್ಷಣದ ಮಾಹಿತಿಯ ನೇರಪ್ರಸಾರ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts