

ಬೆಂಗಳೂರು:ಮಾರ್ಚ್ 7 ರಂದು ರಾಜ್ಯ ಬಜೆಟ್ ಮಂಡಿಸಲಾಗುವುದು. ಮಾರ್ಚ್ 19ರವರೆಗೆ ಬಜೆಟ್ ಮೇಲಿನ ಚರ್ಚೆಗಳು ನಡೆಯಲಿದ್ದು, ಮಾರ್ಚ್ 19 ರಂದು ವಿಧಾನಸಭೆಯಲ್ಲಿ ಹಾಗೂ 20 ರಂದು ವಿಧಾನಪರಿಷತ್ತಿನಲ್ಲಿ ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡುವುದಾಗಿ ಮುಖ್ಯಮಂತ್ರಿ(CM) ಸಿದ್ದರಾಮಯ್ಯ ಹೇಳಿದರು.
ವಿಧಾನಸೌಧದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದರು.
ಅಧಿಕಾರಿಗಳ ಮಟ್ಟದಲ್ಲಿ ಕಮೀಷನ್ ದಂಧೆ ನಡೆದಿರುವುದಾಗಿ ಗುತ್ತಿಗೆ ಸಂಘದವರು ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಲಂಚ ಪಡೆಯುವುದು ಹಾಗೂ ಲಂಚ ನೀಡುವುದು ಸಹ ಅಪರಾಧ. ಈ ರೀತಿಯ ಕೃತ್ಯದಲ್ಲಿ ಯಾರು ತೊಡಗಬಾರದು. ತಾನು ಇದುವರೆವಿಗೂ ಹಣಬಿಡುಗಡೆ ಮಾಡಲು ಯಾರಿಂದಲೂ ದುಡ್ಡು ಪಡೆದಿಲ್ಲವೆಂದರು.
ಡಿಕೆ ಶಿವಕುಮಾರ್ ಅವರು ಇದೇ ಅವಧಿಯಲ್ಲಿ ಮುಖ್ಯಮಂತ್ರಿಗಳಾಗುವ ಸಾಧ್ಯತೆ ಬಗ್ಗೆ ವೀರಪ್ಪ ಮೊಯಿಲಿ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ವಿಷಯದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮವಾಗಿದೆ ಎಂದರು.