More

    ಬಜೆಟ್ ಆಶಾದಾಯಕವಾಗಿರಲಿದೆ

    ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಫೆ. 16ರಂದು ಮಂಡಿಸಲಿರುವ ರಾಜ್ಯ ಬಜೆಟ್ ಆಶಾದಾಯಕವಾಗಿರಲಿದೆ. ರಾಜ್ಯಕ್ಕೆ ಹೊಸ ದಿಕ್ಸೂಚಿ ಆಗಲಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದರು.

    ಹುಬ್ಬಳ್ಳಿಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರ ಬದುಕಿಗೆ ಶಕ್ತಿ ತುಂಬುವ ಕಾರ್ಯಕ್ರಮ ರೂಪಿಸಿದ್ದೇವೆ. ಗ್ಯಾರಂಟಿ ಹೊರತುಪಡಿಸಿ ನೀರಾವರಿ ಯೋಜನೆ, ಬೇರೆ ಬೇರೆ ಚಿಂತನೆ ಮಾಡಿದ್ದೇವೆ. ಅನೇಕ ಕಾರ್ಯಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ. ಕಳೆದ 8 ತಿಂಗಳುಗಳಿಂದ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಅವನ್ನು ಪೂರ್ಣ ಪ್ರಮಾಣದಲ್ಲಿ ಅನುಷ್ಠಾನ ಮಾಡಲು ಕ್ರಮ ಕೈಗೊಂಡಿದ್ದೇವೆ. ಬಜೆಟ್ ಬಗ್ಗೆ ಎಲ್ಲ ವಿಷಯಗಳನ್ನು ಮುಂಚಿತವಾಗಿ ಬಹಿರಂಗ ಪಡಿಸಲು ಆಗುವುದಿಲ್ಲ. ನಾಳೆ ನಿಮಗೆ ಗೊತ್ತಾಗಲಿದೆ ಎಂದರು.

    ನಾನಾಗಲಿ, ಇನ್ನೊಬ್ಬರಾಗಲಿ ಯಾರಿಗೂ ಲೋಕಸಭೆ ಟಿಕೆಟ್ ಘೊಷಣೆ ಮಾಡಿಲ್ಲ. ಅದನ್ನು ಹೈ ಕಮಾಂಡ್ ತೀರ್ಮಾನ ಮಾಡುತ್ತದೆ. ಪಕ್ಷದಲ್ಲಿ ಬಹಳ ಜನ ಆಕಾಂಕ್ಷಿಗಳು ಇದ್ದಾರೆ. ಈಗಾಗಲೇ ಸಮೀಕ್ಷೆ ನಡೆಯುತ್ತದೆ. ಪಕ್ಷ ಸಿದ್ಧಾಂತ, ನಾಯಕರ ಅಭಿಪ್ರಾಯ ಎಲ್ಲವೂ ಗಣನೆಗೆ ಬರುತ್ತದೆ. ವ್ಯಕ್ತಿಗತವಾಗಿ ಘೊಷಣೆ ಮಾಡುವುದಿಲ್ಲ ಎಂದು ಹೇಳಿದರು.

    ಕೇಂದ್ರ ಸಹಕಾರ ಕೊಡುತ್ತಿಲ್ಲ.

    ಮಹದಾಯಿ ಯೋಜನೆ ಅನುಷ್ಠಾನಕ್ಕೆ ನಾವು ಒತ್ತಾಯ ಮಾಡುತ್ತಿದ್ದೇವೆ. ಆದರೆ, ಕೇಂದ್ರ ಸರ್ಕಾರ ಸಹಕಾರ ಕೊಡುತ್ತಿಲ್ಲ. ನಾವು ಕಾಮಗಾರಿಗಾಗಿ ಟೆಂಡರ್ ಕರೆದಿದ್ದೇವೆ. ಕೇಂದ್ರ ಸರ್ಕಾರ ಅನುಮೋದನೆ ಕೊಡುತ್ತಿಲ್ಲ. ಹಿಂದೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ನಾಯಕರು ಕೇಂದ್ರದ ಪತ್ರ ಹಿಡಿದು ಸಂಭ್ರಮಾಚರಣೆ ಮಾಡಿದ್ದರು. ಅಂಥ ಬಿಜೆಪಿ ನಾಯಕರಿಂದ, ಸಂಸದರಿಂದ ನೀವು ಉತ್ತರ ಕೇಳಿ ಎಂದರು.

    ಗ್ಯಾರಂಟಿ ಲೂಟಿ ಎಂದು ಹೇಳಿರುವ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿಗೆ ರಾಜ್ಯದ ಜನ ಸರಿಯಾಗಿ ಉತ್ತರ ಕೊಡುತ್ತಾರೆ. ಬಜೆಟ್ ಬಳಿಕ ನಿಗಮ-ಮಂಡಳಿಗಳಿಗೆ ಕಾರ್ಯಕರ್ತರನ್ನು ನೇಮಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು. ಚುನಾವಣೆ ಬಾಂಡ್ ಕುರಿತು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಬಗ್ಗೆ ಪಕ್ಷದ ವಕ್ತಾರರು ಹೇಳಿಕೆ ನೀಡುವರು ಎಂದು ಉತ್ತರಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts