More

    ಅಸಮಾಧಾನ ಇದ್ದವರು ದೆಹಲಿಗೆ ಹೋಗಿ ವರಿಷ್ಠರ ಜತೆ ಮಾತಾಡಲಿ: ಸಿಎಂ ಬಿಎಸ್​ವೈ

    ಬೆಂಗಳೂರು: ನೂತನವಾಗಿ ಏಳು ಸಚಿವರು ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪರ ಸಚಿವ ಸಂಪುಟ ಸೇರಿಕೊಂಡ ಬೆನ್ನಲ್ಲೇ ಬಿಜೆಪಿ ಪಾಳಯದಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು, ಪಕ್ಷದ ವಿರುದ್ಧ ಮಾತನಾಡುತ್ತಿರುವವರಿಗೆ ಖಡಕ್​ ಸಂದೇಶವನ್ನು ರವಾನಿಸಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿ, ಸಂಪುಟ ವಿಸ್ತರಣೆಯಿಂದ ಅಸಮಾಧಾನ ಇರುವ ಶಾಸಕರು ಹಗುರವಾಗಿ ಮಾತಾಡೋದು ಬೇಡ. ಅಸಮಧಾನ ಇದ್ದವರು ದೆಹಲಿಗೆ ಹೋಗಿ ವರಿಷ್ಠರ ಜತೆ ಮಾತಾಡಲಿ, ಇದಕ್ಕೆ ನನ್ನ ಅಭ್ಯಂತರ ಏನೂ ಇಲ್ಲ ಎಂದರು.

    ಇದನ್ನೂ ಓದಿರಿ: 5 ತಿಂಗಳ ಮಗು ಎತ್ಕೊಂಡು ಬೆತ್ತಲೆಯಾಗಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ: ಶ್ರೀಮಂತೆಯ ದುರಂತ ಕತೆಯಿದು!

    ಏನೇ ಇದ್ರೂ ದೆಹಲಿಗೆ ಹೋಗಿ ದೂರು ಕೊಡಲಿ. ಇಲ್ಲಿ ಮಾತಾಡಿ‌ ಪಕ್ಷದ ವರ್ಚಸ್ಸಿಗೆ ಧಕ್ಕೆ ತರುವ ಕೆಲಸವನ್ನು ಶಾಸಕರು ಮಾಡೋದು ಬೇಡ ಎನ್ನುತ್ತಲೇ ಎಚ್ಚರಿಕೆ ಮಾತುಗಳಿಗೆ ಜಗ್ಗಲ್ಲ ಎಂಬ ಸ್ಪಷ್ಟ ಸಂದೇಶವನ್ನು ಸಿಎಂ ರವಾನೆ ಮಾಡಿದ್ದಾರೆ.

    ಬಹು ನಿರೀಕ್ಷಿತ ರಾಜ್ಯ ಸಚಿವ ಸಂಪುಟ ವಿಸ್ತರಣೆ ಬುಧವಾರ ನಡೆಯಿತು. ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ನೇತೃತ್ವದ ಸಂಪುಟದಲ್ಲಿ ‘ಸಪ್ತ’ ಶಾಸಕರು ಮಂತ್ರಿಗಿರಿ ಅಲಂಕರಿಸಿದ್ದಾರೆ. ಎಸ್. ಅಂಗಾರ, ಸಿ.ಪಿ. ಯೋಗೇಶ್ವರ್, ಎಂ.ಟಿ.ಬಿ. ನಾಗರಾಜ್, ಆರ್.ಶಂಕರ್, ಅರವಿಂದ ಲಿಂಬಾವಳಿ, ಮುರುಗೇಶ ನಿರಾಣಿ, ಉಮೇಶ್ ಕತ್ತಿ ಸೇರಿ 7 ಮಂದಿ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಇದರ ಬೆನ್ನಲ್ಲೇ ಇವರೆಲ್ಲರಿಗೂ ವಿಧಾನಸೌಧದಲ್ಲೇ ಕೊಠಡಿ ಹಂಚಿಕೆ ಮಾಡಲಾಗಿದೆ. (ದಿಗ್ವಿಜಯ ನ್ಯೂಸ್​)

    ಬಿಎಸ್​ವೈ ಸಂಪುಟ ಸೇರಿದ ‘ಸಪ್ತ’ ಸಚಿವರು: ಯಾರಿಗೆ ಯಾವ ಖಾತೆ? ಇಲ್ಲಿದೆ ಸಂಭಾವ್ಯ ಪಟ್ಟಿ

    ಬಿಎಸ್​ವೈ ಗಟ್ಟಿತನ ಇನ್ನಷ್ಟು ವಿಸ್ತರಣೆ, ನಾಯಕತ್ವ ಅಚಲ

    ಬಿಎಸ್​ವೈ ಸಂಪುಟದಲ್ಲಿ 33 ಸಚಿವರು: ಯಾವ ಜಾತಿಗೆ ಎಷ್ಟು ಪ್ರಾತಿನಿಧ್ಯ ಸಿಕ್ತು? ಇಲ್ಲಿದೆ ಮಾಹಿತಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts