More

    ವಿದ್ಯಾರ್ಥಿ ಜೊತೆ ರೊಮ್ಯಾಂಟಿಕ್‌ ಫೋಟ್‌ ಶೂಟ್‌ ಮಾಡಿಸಿದ ಮುಖ್ಯ ಶಿಕ್ಷಕಿ ಅಮಾನತು

    ಚಿಕ್ಕಬಳ್ಳಾಪುರ: ಶಾಲಾ ಪ್ರವಾಸದಲ್ಲಿ ಮುಖ್ಯ ಶಿಕ್ಷಕಿಯೊಬ್ಬರು ವಿದ್ಯಾರ್ಥಿಯೊಂದಿಗೆ ರೊಮ್ಯಾಂಟಿಕ್‌ ಫೋಟ್‌ ಶೂಟ್‌ ಮಾಡಿಸಿದ ಫೋಟೋ ಕಳೆದ ಎರಡು ದಿನಗಳಿಂದ ಸಿಕ್ಕಾಪಟ್ಟೆ ವೈರಲ್ ಆಗಿತ್ತು.

    ವಿದ್ಯಾರ್ಥಿಯೊಂದಿಗೆ ಅಸಭ್ಯವಾಗಿ ವಿವಿಧ ಭಂಗಿಗಳಲ್ಲಿ ಪೋಟೋ ತೆಗೆದುಕೊಂಡು ಶಿಕ್ಷಕರ ನಡುವಳಿಕೆಗಳಿಗೆ ವಿರುದ್ದವಾಗಿ ನಡೆದುಕೊಂಡಿರುವ ಆರೋಪದ ಹಿನ್ನೆಲೆಯಲ್ಲಿ ಇದೀಗ ಮುಖ್ಯ ಶಿಕ್ಷಕಿಯನ್ನು ಸೇವೆಯಿಂದ ಅನುಮಾನತುಗೊಳಿಸಿ ಶಿಕ್ಷಣ ಇಲಾಖೆ ಆದೇಶಿಸಿದೆ.

    ಇತ್ತೀಚೆಗೆ ಚಿಕ್ಕಬಳ್ಳಾಪುರ‌ ಜಿಲ್ಲೆಯ ಚಿಂತಾಮಣಿ ತಾಲೂಕಿನ ಗ್ರಾಮದ ಶಾಲೆಯಿಂದ ಕೈಗೊಂಡಿದ್ದ ಶೈಕ್ಷಣಿಕ ಪ್ರವಾಸದ ವೇಳೆ ಅಪ್ರಾಪ್ತ ವಯಸ್ಸಿನ ಬಾಲಕನೊಂದಿಗೆ ತೋಟಗಳ ಮಧ್ಯೆ ಪರಸ್ಪರ ಚುಂಬಿಸುವ ಪೋಟೋಗಳನ್ನು ಮೊಬೈಲ್ ಮೂಲಕ ಸೆರೆ ಹಿಡಿದುಕೊಂಡಿದ್ದರು. ಅವು ಶಿಕ್ಷಕಿಯ ಮೊಬೈಲ್​​​​​​​ನಿಂದ ಸೋರಿಕೆಯಾಗಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

    ಶಿಕ್ಷಕಿ ವಿರುದ್ದ ಗಂಭೀರ ಆರೋಪ ಕೇಳಿ ಬಂದ ಬೆನ್ನಲೇ ಶಾಲೆಗೆ ಚಿಂತಾಮಣಿ ಕ್ಷೇತ್ರ ಶಿಕ್ಷಣಾಧಿಕಾರಿ ಉಮಾದೇವಿ ಭೇಟಿ ನೀಡಿ ಪ್ರವಾಸಕ್ಕೆ ತೆರಳಿದ್ದ ಶಾಲಾ ಸಹ ಶಿಕ್ಷಕರನ್ನು, ವಿದ್ಯಾರ್ಥಿಗಳನ್ನು ಹಾಗೂ ಅಡುಗೆ ಸಿಬ್ಬಂದಿಯನ್ನು ಪ್ರತ್ಯೇಕವಾಗಿ ವಿಚಾರಣೆ ನಡೆಸಿದ್ದರು. ಆದರೆ ಅವರು ನಮ್ಮ ಗಮನಕ್ಕೆ ಬಂದಿಲ್ಲ ಎಂದು ಹೇಳಿಕೆ ನೀಡಿದ್ದರು. ಬಿಇಒ ಶಿಫಾರಸ್ಸಿನಂತೆ ಶಾಲಾ ಶಿಕ್ಷಣ ಇಲಾಖೆ ಜಿಲ್ಲೆಯ ಉಪ ನಿರ್ದೇಶಕರಾದ ಪಿ.ಬೈಲಾಂಜನಪ್ಪ, ಇಲಾಖೆ ವಿಚಾರಣೆಗೆ ಕಾಯ್ದರಿಸಿ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. 

    ವಿದ್ಯಾರ್ಥಿಯೊಂದಿಗೆ ಹೆಡ್‌ ಮಿಸ್‌ ರೊಮ್ಯಾಂಟಿಕ್ ಫೋಟೊ ಶೂಟ್ ವೈರಲ್

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts