More

    ರಾಜ್ಯದ ಅಭಿವೃದ್ಧಿಗೆ ಬಿಎಸ್‌ವೈ ಶ್ರಮ

    ಬೆಳಗಾವಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಒಂದು ವರ್ಷ ಯಶಸ್ವಿಯಾಗಿ ಪೂರೈಸಿದಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ಸಾಲು ಸಾಲು ಸಮಸ್ಯೆಗಳನ್ನು ಎದುರಿಸಿ ಬಡವರ, ರೈತರ, ಕಾರ್ಮಿಕರ ಪರ ಉತ್ತಮ ಆಡಳಿತ ನೀಡುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

    ರಾಜ್ಯ ಸರ್ಕಾರ ಒಂದು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಸವಾಲುಗಳ ವರ್ಷ, ಪರಿಹಾರದ ಸ್ಪರ್ಶ ಸರ್ಕಾರದ ಒಂದು ವರ್ಷದ ಪ್ರಗತಿ ವರದಿ ಪುಸ್ತಕ ಬಿಡುಗಡೆ ನೇರ ಪ್ರಸಾರ ಕಾರ್ಯಕ್ರಮವನ್ನು ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ವೀಕ್ಷಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

    ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಎಲ್ಲರ ಸಹಕಾರದೊಂದಿಗೆ ರಾಜ್ಯವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಲು ಶ್ರಮಿಸುತ್ತಿದ್ದಾರೆ. ಸಾಮರಸ್ಯ ಮತ್ತು ಸಹಭಾಗಿತ್ವದಲ್ಲಿ ಅಭಿವೃದ್ಧಿಪರ ಆಡಳಿತ ನೀಡುತ್ತಿದ್ದಾರೆ. 2023 ವಿಧಾನಸಭೆ ಚುನಾವಣೆ ಅವರ ನೇತೃತ್ವದಲ್ಲಿಯೇ ನಡೆಯಲಿದೆ ಎಂದು ರಮೇಶ ಜಾರಕಿಹೊಳಿ ಭವಿಷ್ಯ ನುಡಿದರು.

    ಸಾವು ಬದುಕು ನಮ್ಮ ಕೈಯಲ್ಲಿ ಇಲ್ಲ: ಕರೊನಾ ವೈರಸ್ ದೊಡ್ಡ ರೋಗವಲ್ಲ. ಹಾಗಾಗಿ, ಜನ ಹೆದರಿಕೊಳ್ಳುವ ಅವಶ್ಯಕತೆ ಇಲ್ಲ. ಲಸಿಕೆ ಸಿಗುವವರೆಗೆ ಎಲ್ಲರೂ ಅದರೊಂದಿಗೆ ಬದುಕು ವುದನ್ನು ಕಲಿಯಬೇಕು. ಸಾವು ಬದುಕು ನಮ್ಮ ಕೈಯಲ್ಲಿಲ್ಲ. ಸೋಂಕು ನಿಯಂತ್ರಣಕ್ಕಾಗಿ ಕರೊನಾ ಸೇನಾನಿಗಳು ಹಗಲಿಳುರು ಶ್ರಮಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

    ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ, ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ, ವಿಧಾನ ಪರಿಷತ್ ಆಡಳಿತ ಪಕ್ಷದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಸಂಸದ ಅಣ್ಣಾಸಾಹೇಬ ಜೊಲ್ಲೆ, ಶಾಸಕರಾದ ಮಹೇಶ ಕುಮಠಳ್ಳಿ, ಪಿ.ರಾಜೀವ್, ಡಿ.ಎಂ. ಐಹೊಳೆ, ಬುಡಾ ಅಧ್ಯಕ್ಷ ಘೂಳಪ್ಪ ಹೊಸಮನಿ, ಮುಖ್ತಾರ್ ಪಠಾಣ, ಪ್ರಾದೇಶಿಕ ಆಯುಕ್ತ ಆಮ್ಲಾನ್ ಆದಿತ್ಯ ಬಿಸ್ವಾಸ್, ಡಿಸಿ ಎಂ.ಜಿ.ಹಿರೇಮಠ, ಜಿಪಂ ಸಿಇಒ ಡಾ. ಕೆ.ವಿ. ರಾಜೇಂದ್ರ, ನಗರ ಪೊಲೀಸ್ ಆಯುಕ್ತ ಕೆ.ತ್ಯಾಗರಾಜನ್, ಎಸ್‌ಪಿ ಲಕ್ಷ್ಮಣ ನಿಂಬರಗಿ ಇತರರು ಇದ್ದರು.

    ಪವಿತ್ರಾಳ ತಾಯಿಯ ಆರೋಗ್ಯ ವಿಚಾರಿಸಿದ ಸಿಎಂ

    ಲಾಕ್‌ಡೌನ್ ಸಂದರ್ಭದಲ್ಲಿ ಮಾತ್ರೆ ಸಿಗದೆ ತೀವ್ರ ಕಿಡ್ನಿ ತೊಂದರೆಯಿಂದ ಬಳಲುತ್ತಿದ್ದ ರಾಮದುರ್ಗ ತಾಲೂಕಿನ ನರಸಾಪುರ ಗ್ರಾಮದ ಶೇಕವ್ವ ಅರಬಾವಿ ಕುರಿತು ಅವರ ಮಗಳು ಪವಿತ್ರಾ ಟಿಕ್‌ಟಾಕ್ ಮೂಲಕ ಮುಖ್ಯಮಂತ್ರಿ ಗಮನ ಸೆಳೆದಿದ್ದರು. ಅದಕ್ಕೆ ಸ್ಪಂದಿಸಿದ್ದ ಸಿಎಂ ಯಡಿಯೂರಪ್ಪ ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ದೂರವಾಣಿ ಮೂಲಕ ಮಾತನಾಡಿ, ತಕ್ಷಣವೇ ಅರಬಾವಿ ಅವರ ಕುಟುಂಬಕ್ಕೆ ಅಗತ್ಯ ಔಷಧ ಪೂರೈಸಿದ್ದರು. ಇಂದಿನ ನೇರಪ್ರಸಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪವಿತ್ರಾ ಅರಬಾವಿ ಅವರ ಜತೆ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಪವಿತ್ರಾಳ ತಾಯಿಯ ಆರೋಗ್ಯ ವಿಚಾರಿಸಿದರು. ಭವಿಷ್ಯದಲ್ಲಿ ಕುಟುಂಬಕ್ಕೆ ನೆರವು ಒದಗಿಸುವ ಭರವಸೆ ನೀಡಿದರು.

    ನಾನು ಬಿಜೆಪಿಯ ಸಾಮಾನ್ಯ ಕಾರ್ಯಕರ್ತ. ಸಚಿವ ಸಂಪುಟ ವಿಸ್ತರಣೆ ಬಗ್ಗೆ ನನಗೆ ಗೊತ್ತಿಲ್ಲ. ಪ್ರತಿಪಕ್ಷಗಳಾದ ಕಾಂಗ್ರೆಸ್, ಜೆಡಿಎಸ್ ಒಳ್ಳೆಯ ಕೆಲಸ ಮಾಡಲಿ. ಏಕೆಂದರೆ ರಾಜ್ಯದಲ್ಲಿ ಒಳ್ಳೆಯ ವಾತಾವರಣ ಇದೆ. ಬಿಮ್ಸ್ ಆವರಣದಲ್ಲಿ ನಡೆದ ಗಲಾಟೆ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಮುಂದಿನ ನಿರ್ಣಯ ಕೈಗೊಳ್ಳಲಾಗುವುದು.
    | ರಮೇಶ ಜಾರಕಿಹೊಳಿ ಜಿಲ್ಲಾ ಉಸ್ತುವಾರಿ ಸಚಿವ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts