ತುಮಕೂರು: ಜಿಲ್ಲೆಯಲ್ಲಿ ಹಾದು ಹೋಗುವ ಲೋಕೋಪಯೋಗಿ ಇಲಾಖೆ ವ್ಯಾಪ್ತಿಗೆ ಸೇರಿದ ರಾಜ್ಯ ಹೆದ್ದಾರಿ ಮತ್ತು ಜಿಲ್ಲಾ ಮುಖ್ಯರಸ್ತೆಗಳಲ್ಲಿ 41 ಅಪಘಾತ ಸ್ಥಳಗಳನ್ನು (ಬ್ಲಾಕ್ ಸ್ಪಾಟ್) ಗುರುತಿಸಲಾಗಿದೆ. ಅಪಘಾತ ಸ್ಥಳಗಳಲ್ಲಿ ಎಚ್ಚರಿಕೆ- ಸೂಚನಾ ಫಲಕಗಳು, ಸ್ಪೀಡ್ ಬ್ರೇಕರ್, ಮಾರ್ಗ ಸೂಚಕಗಳನ್ನು ಅಳವಡಿಸಿ ಅಪಘಾತ ಪ್ರಮಾಣ ತಗ್ಗಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶುಭಕಲ್ಯಾಣ್ ಶುಕ್ರವಾರ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ತಾಕೀತು ಮಾಡಿದರು.
ಬ್ಲಾಕ್ಸ್ಪಾಟ್ಗಳು: ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 48ರ ಕ್ಯಾತಸಂದ್ರ ವ್ಯಾಪ್ತಿ ಚಿಕ್ಕಹಳ್ಳಿ, ಹಿರೇಹಳ್ಳಿ, ಪಂಡಿತನಹಳ್ಳಿ ಗೇಟ್, ಮಂಚಲಕುಪ್ಪೆ ವೃತ್ತ, ತುಮಕೂರು ಗ್ರಾಮಾಂತರ ವ್ಯಾಪ್ತಿ ಊರುಕೆರೆ ಜೈನ್ ಪಬ್ಲಿಕ್ ಸ್ಕೂಲ್, ಕೋರಾ ವ್ಯಾಪ್ತಿ ಅಜ್ಜಗೊಂಡನಹಳ್ಳಿ ವೃತ್ತ, ನೆಲಹಾಳ್ ವೃತ್ತ, ಕಳ್ಳಂಬೆಳ್ಳ ವ್ಯಾಪ್ತಿ ಜೋಗಿ ಹಳ್ಳಿ, ದೊಡ್ಡ ಆಲದ ಮರ, ಬಾಲೇನಹಳ್ಳಿ ಗೇಟ್, ಶಿರಾ ವ್ಯಾಪ್ತಿ ಶಿವಾಜಿ ನಗರ, ಮಾನಂಗಿ ತಾಂಡಾ ಗೇಟ್, ತಾವರೆಕೆರೆ ವ್ಯಾಪ್ತಿ ದ್ವಾರಾಳು ಬ್ರಿಡ್ಜ್, ತಾವರೆಕೆರೆ ಅಪಘಾತ ಸಂಭವಿಸಬಹುದಾದ ಸ್ಥಳಗಳೆಂದು (ಬ್ಲಾಕ್ ಸ್ಪಾಟ್) ಗುರುತಿಸಲಾಗಿದೆ.
ರಾಷ್ಟ್ರೀಯ ಹೆದ್ದಾರಿ 73ರ ತುಮಕೂರು ಗ್ರಾಮಾಂತರ ವ್ಯಾಪ್ತಿ ಹೆಗ್ಗೆರೆ ಬಸ್ ನಿಲ್ದಾಣ, ತಿಪಟೂರು ಪಟ್ಟಣ ವ್ಯಾಪ್ತಿ ಬಂಡಿಹಳ್ಳಿ ಗೇಟ್- ರೇಣುಕಾ ಡಾಬ, ರಾಷ್ಟ್ರೀಯ ಹೆದ್ದಾರಿ 75ರ ಕುಣಿಗಲ್ ವ್ಯಾಪ್ತಿ ಅಂಚೆಪಾಳ್ಯ ಸರ್ಕಲ್, ಬೇಗೂರು ಸೇತುವೆ, ಹೇರೂರು ಸೇತುವೆ, ಉರ್ಕೇಹಳ್ಳಿ, ಅಮೃತೂರು ವ್ಯಾಪ್ತಿ ನಾಗೇಗೌಡನಪಾಳ್ಯ ಗೇಟ್, ತಿಪ್ಪೂರು ಗೇಟ್, ಮಾಗಡಿ ಪಾಳ್ಯ ಗೇಟ್, ಹೇಮಾವತಿ ಕ್ರಾಸ್, ಚಾಕೇನಹಳ್ಳಿ ಎಂದು ಗುರುತಿಸಲಾಗಿದೆ.
ರಾಷ್ಟ್ರೀಯ ಹೆದ್ದಾರಿ 150(ಎ)ರ ತುರುವೇಕೆರೆ ವ್ಯಾಪ್ತಿ ಜೋಡಗಟ್ಟೆ; ರಾಜ್ಯ ಹೆದ್ದಾರಿ 33ರ ಹುಲಿಯೂರು ದುರ್ಗ ವ್ಯಾಪ್ತಿ ಬಿ.ಹೊಸಹಳ್ಳಿ-ಡಿ.ಹೊಸಹಳ್ಳಿ ಗೊಲ್ಲರಹಟ್ಟಿ, ಕೊಡವಂತಿ ಜಂಕ್ಷನ್, ಹಳೆವೂರು ಜಂಕ್ಷನ್, ಐಬಿ ಸರ್ಕಲ್, ಕುಣಿಗಲ್ ವ್ಯಾಪ್ತಿ ಕುರುಡಿಹಳ್ಳಿ, ಜಂಪೇನಹಳ್ಳಿ ಕ್ರಾಸ್, ಜಟ್ಟಿ ಅಗ್ರಹಾರ, ಥರಟಿ; ರಾಜ್ಯ ಹೆದ್ದಾರಿ 3ರ ಮಧುಗಿರಿ ವ್ಯಾಪ್ತಿ ಕೆರೆಗಳ ಪಾಳ್ಯ ಬಸ್ ನಿಲ್ದಾಣದ ಸುತ್ತ ಮುತ್ತ, ಮಿಡಿಗೇಶಿ ವ್ಯಾಪ್ತಿ ಹೊಸಕೆರೆ, ಪಾವಗಡ ವ್ಯಾಪ್ತಿ ರಾಜವಂತಿ ಕೆರೆ, ನಾಗಲಮಡಿಕೆ ಕ್ರಾಸ್, ಪಳವಳ್ಳಿ ಕೆರೆ, ಕೊರಟಗೆರೆ ವ್ಯಾಪ್ತಿ ತುಂಬಾಡಿ, ಜಿ.ನಾಗೇನಹಳ್ಳಿ ಕೂಡ ಅಪಘಾತಕ್ಕೆ ಆಹ್ವಾನಿಸುತ್ತಿವೆ.