26.7 C
Bengaluru
Sunday, January 19, 2020

ರಾಮನಗರ, ಜಮಖಂಡಿ ಉಪ ಚುನಾವಣೆಗೆ ಸಿದ್ಧತೆ

Latest News

ಪಿಒಕೆಯಲ್ಲಿ ಜನಾಭಿಪ್ರಾಯ ಸಂಗ್ರಹಿಸಲು ಪಾಕಿಸ್ತಾನ ಸಿದ್ಧವಿದೆ: ಪಾಕ್​ ಪ್ರಧಾನಿ ಇಮ್ರಾನ್​ ಖಾನ್​

ಇಸ್ಲಮಾಬಾದ್​: ಜನರ ನಿರ್ಧಾರಕ್ಕೆ ಬಿಡೋಣ ಅವರು ಪಾಕಿಸ್ತಾನದ ಭಾಗವಾಗಿರಲು ನಿರ್ಧರಿಸುತ್ತಾರಾ ಅಥವಾ ಸ್ವತಂತ್ರವಾಗಿರಲು ಬಯಸುತ್ತಾರಾ ಎಂಬುದನ್ನು ತಿಳಿಯಲು ಪಾಕ್​ ಆಕ್ರಮಿತ ಕಾಶ್ಮೀರದಲ್ಲಿ ಜನಾಭಿಪ್ರಾಯ...

ಪ್ರಧಾನಿ ಮೋದಿ ಟ್ವೀಟನ್ನು ಯಥಾವತ್ತಾಗಿ ಕಾಪಿ ಮಾಡಿ ಟ್ರೋಲ್​ಗೆ ದಾಳಕ್ಕೆ ಸಿಲುಕಿದ ನಟಿ ಊರ್ವಶಿ ರೌಟೇಲಾ!

ಮುಂಬೈ: ಶನಿವಾರ ಸಂಜೆ ಕಾರು ಅಪಘಾತದಲ್ಲಿ ಗಾಯಗೊಂಡ ಬಾಲಿವುಡ್​ ಹಿರಿಯ ನಟಿ ಶಬಾನಾ ಅಜ್ಮಿ ಅವರು ಬೇಗ ಗುಣಮುಖರಾಗಲೆಂದು ಟ್ವೀಟ್​ ಮಾಡಿ ನಟಿ...

ವಿಚಾರ ಸಂಕಿರಣದಲ್ಲಿ ಪಾಲ್ಗೊಳ್ಳಲು ಬಿಡದ ಆರೋಪ: ಉ. ಪ್ರದೇಶ ಪೊಲೀಸರ ವಿರುದ್ಧ ಮಾಜಿ ಐಎಎಸ್​ ಅಧಿಕಾರಿ ಗರಂ

ಪ್ರಯಾಗರಾಜ್​: ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದತಿಯನ್ನು ಖಂಡಿಸಿ ಐಎಎಸ್​ ಹುದ್ದೆಗೆ ರಾಜೀನಾಮೆ ನೀಡಿದ್ದ ಕೇರಳ ಮೂಲದ ಮಾಜಿ ಐಎಎಸ್​...

ಉಗರಗೋಳ: ಯಲ್ಲಮ್ಮನಗುಡ್ಡ ಅಭಿವೃದ್ಧಿಗೆ ಪ್ರಯತ್ನ

ಉಗರಗೋಳ: ಶ್ರೀಕ್ಷೇತ್ರ ಯಲ್ಲಮ್ಮನಗುಡ್ಡದ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದು ಶಾಸಕ ಆನಂದ ಮಾಮನಿ ಭರವಸೆ ನೀಡಿದ್ದಾರೆ. ತಮ್ಮ ಜನ್ಮದಿನದ ಅಂಗವಾಗಿ ಶ್ರೀಕ್ಷೇತ್ರ ಯಲ್ಲಮ್ಮನಗುಡ್ಡಕ್ಕೆ...

ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ

ಬಾಗಲಕೋಟೆ: ಜಿಲ್ಲಾದ್ಯಂತ ನಾಲ್ಕು ದಿನ ಹಮ್ಮಿಕೊಂಡಿರುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನಕ್ಕೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಬಾಯಕ್ಕ ಮೇಟಿ ಭಾನುವಾರ ಚಾಲನೆ...

ಬೆಂಗಳೂರು: ರಾಜ್ಯದಲ್ಲಿ ಸದ್ಯ ತೆರವಾಗಿರುವ ರಾಮನಗರ ಮತ್ತು ಬಾಗಲಕೋಟೆ ಜಿಲ್ಲೆಯ ಜಮಖಂಡಿ ವಿಧಾನಸಭೆ ಕ್ಷೇತ್ರದ ಉಪಚುನಾವಣೆಗೆ ಚುನಾವಣೆ ಆಯೋಗ ಸಿದ್ಧತೆ ಕೈಗೊಂಡಿದೆ.

ಕರ್ನಾಟಕದಲ್ಲಿ ತೆರವಾಗಿರುವ ಕ್ಷೇತ್ರಗಳ ಬಗ್ಗೆ ರಾಜ್ಯ ಚುನಾವಣೆ ಆಯೋಗ ನೀಡಿದ್ದ ಮಾಹಿತಿ ಹಿನ್ನೆಲೆಯಲ್ಲಿ ಸೂಚನೆ ನೀಡಿರುವ ಕೇಂದ್ರ ಚುನಾವಣೆ ಆಯೋಗ, ಉಪ ಚುನಾವಣೆಗೆ ಸಕಲ ಸಿದ್ಧತೆಗಳನ್ನೂ ಮಾಡಿಕೊಳ್ಳುವಂತೆ ತಿಳಿಸಿದೆ ಎಂದು ಬಲ್ಲ ಮೂಲಗಳು ‘ವಿಜಯವಾಣಿ’ ಸೋದರ ಸಂಸ್ಥೆ ‘ದಿಗ್ವಿಜಯ’ ನ್ಯೂಸ್​ಗೆ ತಿಳಿಸಿವೆ. ಅಲ್ಲದೆ, ಶೀಘ್ರದಲ್ಲಿಯೇ ಉಪ ಚುನಾವಣೆ ದಿನಾಂಕ ಘೋಷಣೆಯಾಗುವ ಸಾಧ್ಯತೆಗಳೂ ಇವೆ ಎನ್ನಲಾಗಿದೆ.

ಕಳೆದ ಮೇ ತಿಂಗಳಲ್ಲಿ ರಾಜ್ಯ ವಿಧಾನಸಭೆಗೆ ನಡೆದಿದ್ದ ಚುನಾವಣೆಯಲ್ಲಿ ರಾಮನಗರ ಮತ್ತು ಚನ್ನಪಟ್ಟಣ ಎರಡೂ ಕ್ಷೇತ್ರಗಳಿಂದ ಜೆಡಿಎಸ್​ ಅಭ್ಯರ್ಥಿಯಾಗಿ ಸ್ಪರ್ಧಿಸಿ ಎರಡೂ ಕ್ಷೇತ್ರಗಳಲ್ಲೂ ಗೆದ್ದಿದ್ದ ಮುಖ್ಯಮಂತ್ರಿ ಎಚ್​.ಡಿ ಕುಮಾರಸ್ವಾಮಿ ಅವರ ರಾಜೀನಾಮೆಯಿಂದ ರಾಮನಗರ ಕ್ಷೇತ್ರ ತೆರವಾಗಿತ್ತು.

ಬಾಗಲಕೋಟೆ ಜಿಲ್ಲೆಯ ಜಮಖಂಡಿಯ ವಿಧಾನಸಭೆ ಕ್ಷೇತ್ರದಿಂದ ಕಾಂಗ್ರೆಸ್​ ಅಭ್ಯರ್ಥಿಯಾಗಿ ಸ್ಪರ್ಧಿಸಿ ಆಯ್ಕೆಯಾಗಿದ್ದ ಸಿದ್ದು ನ್ಯಾಮಗೌಡ ಅವರು, ಮೇ 28ರಂದು ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ಮರಣಹೊಂದಿದ್ದರು. ಅವರ ನಿಧನದ ಹಿನ್ನೆಲೆಯಲ್ಲಿ ಜಮಖಂಡಿ ಕ್ಷೇತ್ರ ತೆರವಾಗಿತ್ತು.
ಹೀಗಾಗಿ ಈ ಎರಡೂ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಬೇಕಿದೆ. ಯಾವುದೇ ಕ್ಷೇತ್ರ ತೆರವಾದ 6 ತಿಂಗಳಲ್ಲಿ ಮತ್ತೊಂದು ಚುನಾವಣೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕಿರುವ ಹಿನ್ನೆಲೆಯಲ್ಲಿ ಚುನಾವಣೆ ಆಯೋಗ ಉಪ ಚುನಾವಣೆಗೆ ಸಕಲ ತಯಾರಿಗಳನ್ನೂ ಕೈಗೊಂಡಿದೆ.

ಮುಖ್ಯಮಂತ್ರಿ ಎಚ್​.ಡಿ ಕುಮಾರಸ್ವಾಮಿ ಅವರು ತಾವು ತೆರವುಗೊಳಿಸಿರುವ ರಾಮನಗರ ಕ್ಷೇತ್ರದಿಂದ ತಮ್ಮ ಪತ್ನಿ, ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ ಅವರನ್ನೇ ಅಭ್ಯರ್ಥಿಯನ್ನಾಗಿ ಮಾಡಲಿದ್ದಾರೆ ಎನ್ನಲಾಗಿದೆ. ಇತ್ತೀಚೆಗೆ ರಾಮಗನರದಲ್ಲಿ ಸರ್ಕಾರ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಸಚಿವ ಜಿ.ಟಿ ದೇವೇಗೌಡ, “ರಾಮನಗರದಿಂದ ಅನಿತಾ ಕುಮಾರಸ್ವಾಮಿ ಅವರು ಸ್ಪರ್ಧಿಸಲಿದ್ದಾರೆ. ಕ್ಷೇತ್ರದ ಜನತೆ ಅವರನ್ನು ಬೆಂಬಲಿಸಬೇಕು,” ಎಂದು ಹೇಳಿದ್ದರು.

ಇನ್ನು ಜಮಖಂಡಿ ಕ್ಷೇಥ್ರದಿಂದ ಮಾಜಿ ಶಾಸಕ ದಿ. ಸಿದ್ದು ನ್ಯಾಮಗೌಡ ಅವರ ಪುತ್ರ ಆನಂದ ನ್ಯಾಮಗೌಡ ಅವರನ್ನು ಕಾಂಗ್ರೆಸ್​ ಅಭ್ಯರ್ಥಿಯನ್ನಾಗಿ ಮಾಡುವ ಸಾಧ್ಯತೆಗಳಿವೆ. ಕೆಲ ದಿನಗಳ ಹಿಂದೆ ಬಾಗಲಕೋಟೆಗೆ ಪ್ರವಾಸ ಕೈಗೊಂಡಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ  “ಮುಂಬರುವ ಉಪ ಚುನಾವಣೆಯಲ್ಲಿ ದಿ. ಸಿದ್ದು ನ್ಯಾಮಗೌಡ ಅವರ ಪುತ್ರ ಆನಂದ ನ್ಯಾಮಗೌಡ ಅವರನ್ನು 30 ಸಾವಿರ ಮತಗಳ ಅಂತರದಿಂದ ಗೆಲ್ಲಿಸಬೇಕು,” ಎಂದು ಜನರಲ್ಲಿ ಮನವಿ ಮಾಡಿದ್ದರು.

ರಾಮನಗರಕ್ಕೆ ‘ಸೀತೆ’ ಬೇಕು

ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಖಚಿತ

ರಾಮನಗರ ಬೈ ಎಲೆಕ್ಷನ್​ನತ್ತ ಪಕ್ಷಗಳ ಚಿತ್ತ

ರಾಮನಗರದಲ್ಲಿ ಕಾಂಗ್ರೆಸ್​ ಸ್ಪರ್ಧಿಸದಿದ್ದರೆ ಬಂಡಾಯವೇಳುತ್ತೇನೆ ಎಂದ ಸಿ.ಎಂ.ಲಿಂಗಪ್ಪ

ವಿಡಿಯೋ ನ್ಯೂಸ್

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...