20.3 C
Bangalore
Sunday, December 15, 2019

ಮಸ್ಕಿ ಮತ್ತು ಆರ್​.ಆರ್​. ನಗರ ಕ್ಷೇತ್ರಗಳಿಗೆ ಚುನಾವಣೆ ಘೋಷಿಸದ್ದಕ್ಕೆ ಕಾರಣ ಏನು ಗೊತ್ತಾ? ಸಿಇಒ ಸಂಜೀವ್​ ಕುಮಾರ್​ ಹೇಳೋದು ಹೀಗಿದೆ…

Latest News

ಆರೋಗ್ಯದಲ್ಲಿ ಚೇತರಿಕೆ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಇಂದು ಆಸ್ಪತ್ರೆಯಿಂದ ಬಿಡುಗಡೆ

ಬೆಂಗಳೂರು: ಅನಾರೋಗ್ಯ ಹಿನ್ನೆಲೆಯಲ್ಲಿ ನಾಲ್ಕು ದಿನಗಳ ಹಿಂದೆ ಆಸ್ಪತ್ರೆ ದಾಖಲಾಗಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಇಂದು (ಭಾನುವಾರ) ಆಸ್ಪತ್ರೆಯಿಂದ ಬಿಡುಗೆಯಾಗಿ ಮನೆಗೆ ತೆರಳಲಿದ್ದಾರೆ.ಸ್ಟಂಟ್​ನಲ್ಲಿ...

ಜೆಡಿಎಸ್ ಜನ್ಮ ಜಾಲಾಟ, ವರಿಷ್ಠರಿಗೆ ಪೀಕಲಾಟ

ಬೆಂಗಳೂರು: ಸಾಲು ಸಾಲು ಸೋಲಿನಿಂದ ದಳಪತಿಗಳು ಕಂಗೆಟ್ಟಿದ್ದಾರೆ. ಲೋಕಸಭಾ ಚುನಾವಣೆ ಸೋಲಿ ನಿಂದ ಬೇಗುದಿ ಹೆಚ್ಚುತ್ತಿದ್ದು, ಮೈತ್ರಿ ಸರ್ಕಾರ ಪತನ, ಉಪಚುನಾವಣೆಯ ಹೀನಾಯ...

ಮೊದಲ ಟೆಸ್ಟ್​​ನಲ್ಲಿ ಆಸ್ಟ್ರೇಲಿಯಾಕ್ಕೆ ಬೃಹತ್ ಮುನ್ನಡೆ

ಪರ್ತ್: ಪ್ರವಾಸಿ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಬೃಹತ್ ಮುನ್ನಡೆ ಕಂಡಿರುವ ಆತಿಥೇಯ ಆಸ್ಟ್ರೇಲಿಯಾ ತಂಡ ಅಹರ್ನಿಶಿ ಟೆಸ್ಟ್ ಪಂದ್ಯಗಳಲ್ಲಿನ ತನ್ನ...

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ ಹಾವು: ವಿಡಿಯೋ ಬಗ್ಗೆ ಬಿಸಿಸಿಐ ಹೇಳಿದ್ದೇನು?

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ...

ವಿದೇಶಿ ಮಹಿಳೆಯಿಂದ ಪಿಂಡಪ್ರದಾನ

ಹೊಸಪೇಟೆ (ಬಳ್ಳಾರಿ): ದಕ್ಷಿಣ ಆಫ್ರಿಕಾದ ಮಹಿಳೆಯೊಬ್ಬರು ತಾಯಿಯ ಆತ್ಮಕ್ಕೆ ಶಾಂತಿ, ಸದ್ಗತಿ ದೊರೆಯಲೆಂದು ಶನಿವಾರ ಹಂಪಿ ನದಿ ತೀರದಲ್ಲಿ ಪುರೋಹಿತರ ನೇತೃತ್ವದಲ್ಲಿ ಹಿಂದು ಧಾರ್ವಿುಕ ವಿಧಿವಿಧಾನಗಳಂತೆ...

ಬೆಂಗಳೂರು: ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗಳ ಜತೆಯಲ್ಲೇ ರಾಜ್ಯದಲ್ಲಿ ತೆರವಾಗಿದ್ದ 17 ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಆದರೆ ಮಸ್ಕಿ ಮತ್ತು ರಾಜರಾಜೇಶ್ವರಿ ನಗರ ಕ್ಷೇತ್ರಗಳಿಗೆ ಚುನಾವಣಾ ಆಯೋಗ ಚುನಾವಣೆಯನ್ನು ಘೋಷಿಸಿಲ್ಲ. ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್​ ಕುಮಾರ್​ ಈ ಎರಡು ಕ್ಷೇತ್ರಗಳಲ್ಲಿ ಚುನಾವಣೆ ತಡೆಹಿಡಿದಿರುವ ಕುರಿತು ಸ್ಪಷ್ಟನೆ ನೀಡಿದ್ದಾರೆ.

ಅಥಣಿ, ಕಾಗವಾಡ, ಗೋಕಾಕ, ಯಲ್ಲಾಪುರ, ಹಿರೇಕೆರೂರು, ರಾಣಿಬೆನ್ನೂರು, ವಿಜಯನಗರ, ಚಿಕ್ಕಬಳ್ಳಾಪುರ, ಕೆ. ಆರ್. ಪುರ, ಯಶವಂತಪುರ, ಮಹಾಲಕ್ಷ್ಮಿ ಲೇಔಟ್, ಶಿವಾಜಿನಗರ, ಹೊಸಕೋಟೆ, ಕೃಷ್ಣರಾಜಪೇಟೆ, ಹುಣಸೂರಿನಲ್ಲಿ ಉಪಚುನಾವಣೆ ಘೋಷಣೆಯಾಗಿದೆ. ಈ ಹಿನ್ನೆಲೆಯಲ್ಲಿ ಈ ಎಲ್ಲಾ ಕ್ಷೇತ್ರಗಳಲ್ಲಿ ತಕ್ಷಣದಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದಿದೆ. ನಾಮಪತ್ರ ಸಲ್ಲಿಕೆಗೆ ಸೆಪ್ಟೆಂಬರ್​ 30 ಕೊನೆಯ ದಿನಾಂಕವಾಗಿದ್ದು, ಅಕ್ಟೋಬರ್​ 3 ರಂದು ನಾಮಪತ್ರ ಹಿಂಪಡೆಯಲು ಕೊನೆ ದಿನಾಂಕವಾಗಿದೆ. ಅಕ್ಟೋಬರ್ 21ರಂದು ಮತದಾನ ನಡೆಯಲಿದ್ದು, ಅ. 24 ಕ್ಕೆ ಮತ ಎಣಿಕೆ ನಡೆಯಲಿದೆ. ಅಕ್ಟೋಬರ್ 27 ರ ಒಳಗೆ ಎಲ್ಲಾ ಕ್ಷೇತ್ರಗಳ ಚುನಾವಣೆ ಮುಗಿಯಲಿದೆ. 15 ಕ್ಷೇತ್ರಗಳಲ್ಲಿ ಒಟ್ಟು 37,49,047 ಮತದಾರರು ಇದ್ದಾರೆ. ಇವರಲ್ಲಿ 19,12,084 ಪುರುಷರು, 18,36,566 ಮಹಿಳೆಯರು ಮತ್ತು 70,619 ಪ್ರಥಮ ಬಾರಿಯ ಮತದಾರರು ಇದ್ದಾರೆ ಎಂದು ಸಂಜೀವ್​ ಕುಮಾರ್​ ಮಾಹಿತಿ ನೀಡಿದರು.

ಚುನಾವಣೆಗೆ ಅಗತ್ಯವಾದ ವಿವಿಪ್ಯಾಟ್ ಮತ್ತು ಮತಯಂತ್ರಗಳನ್ನು ಈಗಾಗಲೇ ಹೊಂದಿಸಿಕೊಳ್ಳಲಾಗಿದೆ. ನೆರೆಯ ರಾಜ್ಯಗಳಿಂದಲೂ ಇವುಗಳನ್ನು ತರಿಸಿದ್ದೇವೆ. ಒಟ್ಟು 4,185 ಮತಗಟ್ಟೆಗಳು ಇರಲಿದ್ದು 15,782 ಚುನಾವಣಾ ಸಿಬ್ಬಂದಿಯನ್ನು ನೇಮಿಸಲಾಗಿದೆ. ಇವರಿಗೆಲ್ಲಾ ಚುನಾವಣಾ ಕೆಲಸದ ತರಬೇತಿ ನೀಡಲಾಗುತ್ತಿದೆ. ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇರದಿದ್ದರೆ ಕೂಡಲೇ ಅದನ್ನು ಸೇರಿಸಲು ಅರ್ಜಿ ನೀಡಬೇಕು. ಮಂಗಳವಾರದ ನಂತರ ನಾವೂ ಈ ವಿಚಾರಣದಲ್ಲಿ ಏನೂ ಮಾಡಲು ಸಾಧ್ಯವಾಗುವುದಿಲ್ಲ ಎಂದು ತಿಳಿಸಿದರು.

ಇನ್ನು ಮಸ್ಕಿ ಮತ್ತು ಆರ್​. ಆರ್​. ನಗರ ಕ್ಷೇತ್ರಗಳಿಗೆ ಚುನಾವಣೆ ಘೋಷಣೆಯಾಗದಿರುವ ಕುರಿತು ಮಾಹಿತಿ ನೀಡಿದ ಸಂಜೀವ್​ ಕುಮಾರ್​, ಕಳೆದ ಚುನಾವಣೆಯಲ್ಲಿ ಮಸ್ಕಿ ಕ್ಷೇತ್ರದಲ್ಲಿ ಪ್ರತಾಪ್​ ಗೌಡ ಅವರು ಆಯ್ಕೆಯಾಗಿದ್ದನ್ನು ಪ್ರಶ್ನಿಸಿ ಪರಾಜಿತ ಅಭ್ಯರ್ಥಿ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ. ಜತೆಗೆ ಆರ್​. ಆರ್​. ನಗರ ಕ್ಷೇತ್ರದಲ್ಲಿ ನಕಲಿ ವೋಟರ್​ ಐಡಿ ಮತ್ತು ಮುನಿರತ್ನ ಆಯ್ಕೆ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ಹೈಕೋರ್ಟ್​ನಲ್ಲಿ ಬಾಕಿ ಇದೆ. ಈ ಹಿನ್ನೆಲೆಯಲ್ಲಿ ಅರ್ಜಿ ಇತ್ಯರ್ಥವಾಗುವವರೆಗೆ ಚುನಾವಣೆ ನಡೆಯುವುದಿಲ್ಲ ಎಂದು ತಿಳಿಸಿದರು.

Stay connected

278,754FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...