More

  ಪೊಲೀಸರ ಮೂಲಕ ಹೋರಾಟ ಹತ್ತಿಕ್ಕಲು ಯತ್ನ

  ಹೊಳೆಹೊನ್ನೂರು: ಕೇಂದ್ರ ಸಚಿವರು ದೇಶದ ರೈತರನ್ನು ಭಯೋತ್ಪಾದಕರೆಂದು ಕರೆದಿರುವುದು ಖಂಡನೀಯ ಎಂದು ರಾಜ್ಯ ರೈತ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಯಶವಂತರಾವ್ ಘೋರ್ಪಡೆ ಆಕ್ರೋಶ ವ್ಯಕ್ತಪಡಿಸಿದರು.
  ಅರಹತೊಳಲು ಕೈಮರ ಸುಂದರೇಶ್ ವೃತ್ತದಲ್ಲಿ ಶಿವಮೊಗ್ಗ-ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ರಸ್ತೆ ತಡೆ ಪ್ರತಿಭಟನೆಯಲ್ಲಿ ಮಾತನಾಡಿದರು.
  ಪ್ರತಿಭಟನಾನಿರತ ರೈತರನ್ನು ಹತ್ತಿಕ್ಕಲು ಕೇಂದ್ರ ಸಚಿವರು ಮನಬಂದಂತೆ ಮಾತನಾಡುತ್ತಿದ್ದಾರೆ. ರೈತವಿರೋಧಿ ಹೇಳಿಕೆಗಳನ್ನು ನೀಡುವ ಮೊದಲು ತಾವು ಎಷ್ಟರಮಟ್ಟಿಗೆ ರೈತರ ಹಿತ ಕಾಪಾಡುವಲ್ಲಿ ಶ್ರಮಿಸಿದ್ದೀರೆಂದು ದೇಶದ ರೈತರಿಗೆ ತಿಳಿಸಬೇಕು. ಈಗಾಗಲೇ ರೈತರು ದೆಹಲಿಯ ಗಡಿ ಭಾಗದಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದರೆ. ಅವರನ್ನು ಹತ್ತಿಕ್ಕಲು ಕೇಂದ್ರ ಸರ್ಕಾರ ಪೊಲೀಸರ ಮೂಲಕ ಪ್ರಯತ್ನಿಸುತ್ತಿದೆ. ರೈತರನ್ನು ಎದುರು ಹಾಕಿಕೊಂಡು ರಾಜಕೀಯ ಪಕ್ಷಗಳು ಮತ್ತೊಮ್ಮೆ ಅಧಿಕಾರಕ್ಕೆ ಬಂದ ಉದಾಹರಣೆಗಳಿಲ್ಲ ಎಂದರು.
  ಮೇಕೆದಾಟು ಯೋಜನೆ ಜಾರಿಗೆ ತರುತ್ತೇವೆಂದು ಪಾದಯಾತ್ರೆ ಮಾಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಇಂದು ಅದರ ಬಗ್ಗೆ ಚಕಾರವೆತ್ತದೆ ಅಧಿಕಾರ ನಡೆಸುತ್ತಿದೆ. ಕೇಂದ್ರ ಸರ್ಕಾರ ಭದ್ರಾ ಮೇಲ್ದಂಡೆ ಯೋಜನೆಗೆ 3,500 ಕೋಟಿ ರೂ. ನೀಡುವುದಾಗಿ ಭರವಸೆ ನೀಡಿತ್ತು. ಈಗ ಯೋಜನೆಯನ್ನು ಶೀಘ್ರ ಜಾರಿಗೆ ತರಬೇಕೆಂದು ಒತ್ತಾಯಿಸಿದರು.
  ರಾಜ್ಯ ವಲಯ ಕಾರ್ಯದರ್ಶಿ ಡಿ.ವಿ.ವೀರೇಶ್, ಹಿರಣ್ಣಯ್ಯ, ಡಿ.ಯಲ್ಲಪ್ಪ, ಮಂಜುನಾಥ, ಶಿವಾಜಿರಾವ್, ಕಗ್ಗಿ ಮಲ್ಲೇಶ್ ರಾವ್, ಬಸವರಾಜ್, ಕೃಷ್ಣಮೂರ್ತಿ ಇತರರಿದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts