More

    ಟ್ರಯಲ್ ಬ್ಲಾಸ್ಟ್‌ಗೆ ವಿರೋಧಿಸಿ ರಾಜ್ಯ ರೈತ ಸಂಘದ ಪ್ರತಿಭಟನೆ

    ಮೈಸೂರು: ಕೃಷ್ಣರಾಜಸಾಗರ ಅಣೆಕಟ್ಟೆಯ ಸುತ್ತುಮುತ್ತ ಟ್ರಯಲ್ ಬ್ಲಾಸ್ಟ್ ನಡೆಸದಂತೆ, ಶಾಶ್ವತವಾಗಿ ಗಣಿಗಾರಿಕೆ ನಿಷೇಧಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಲಾಯಿತು.


    ಕನ್ನಂಬಾಡಿ ಅಣೆಕಟ್ಟೆ ಸುತ್ತಮುತ್ತ ಗಣಿಗಾರಿಕೆ ನಡೆಸುತ್ತಿರುವುದರಿಂದ ಅಣೆಕಟ್ಟೆಗೆ ಅಪಾಯ ಇದೆ ಎಂದು 2018ರಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಾಹಣಾ ಮಂಡಳಿ ವರದಿಯಲ್ಲಿ ಉಲ್ಲೇಖಿಸಿದೆ. ಅಲ್ಲದೆ, ಹಲವಾರು ತಜ್ಞರು ಇದೇ ರೀತಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಶಾಶ್ವತವಾಗಿ ಗಣಿಗಾರಿಕೆ ನಿಷೇಧಿಸಿ ಕೆಆರ್‌ಎಸ್ ಉಳಿಸಿ ಎಂದು ರೈತ-ದಲಿತ-ಪ್ರಗತಿಪರ ಸಂಘಟನೆಗಳು ಹೋರಾಟ ಮಾಡುತ್ತ ಬಂದಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಅಣೆಕಟ್ಟೆಯ ಸುತ್ತ 144 ಸೆಕ್ಷನ್ ಜಾರಿ ಮಾಡಿ ಗಣಿಗಾರಿಕೆಗೆ ತಡೆ ಒಡ್ಡಿದೆ. ಈ ನಡುವೆ, ಟ್ರಯಲ್ ಬ್ಲಾಸ್ಟ್ ಮಾಡಲು ಬಂದಾಗ ವಿರೋಧದ ಹಿನ್ನೆಲೆಯಲ್ಲಿ ಅಧಿಕಾರಿಗಳು ವಾಪಸ್ ತೆರಳಿದ್ದರು. ಇದೀಗ ಮತ್ತೆ ಬ್ಲಾಸ್ಟ್ ಮಾಡಲು ಮುಂದಾಗಿರುವುದು ಸರಿಯಲ್ಲ ಎಂದು ಕಿಡಿಕಾರಿದರು.


    ಜಿಲ್ಲಾಡಳಿತ ಮತ್ತೆ ಟ್ರಯಲ್ ಬ್ಲಾಸ್ಟ್ ಮಾಡಲು ಅವಕಾಶ ಕಲ್ಪಿಸಿದ್ದು, ಇದರಲ್ಲಿ ಯಾವುದೇ ಪಾರದರ್ಶಕತೆ ಕಾಣುತ್ತಿಲ್ಲ. ಯಾವುದೋ ಒತ್ತಾಯಕ್ಕೆ ಮಣಿದು ಈ ಬ್ಲಾಸ್ಟ್ ಮಾಡಲಾಗುತ್ತಿದೆ ಎಂಬ ಅನುಮಾನಗಳು ಎದ್ದು ಕಾಣುತ್ತಿವೆ. ಹೀಗಾಗಿ ಟ್ರಯಲ್ ಬ್ಲಾಸ್ಟ್ ರದ್ದುಪಡಿಸಬೇಕು. ಕೆಆರ್‌ಎಸ್ ಸುತ್ತಮುತ್ತ ಸುಮಾರು 20 ಕಿಮೀ ಗಣಿಗಾರಿಕೆಗೆ ನಿಷೇಧ ಹೇರಿ ಅಣೆಕಟ್ಟೆಯನ್ನು ರಕ್ಷಿಸಲು ಮುಂದಾಗಬೇಕೆಂದು ಆಗ್ರಹಿಸಿದರು. ಬಳಿಕ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.


    ಪ್ರತಿಭಟನೆಯಲ್ಲಿ ರೈತ ಮುಖಂಡರಾದ ಅಶ್ವತ್ಥ್ ನಾರಾಯಣ ರಾಜೇ ಅರಸ್, ಪಿ.ಮರಂಕಯ್ಯ, ಹೊಸಕೋಟೆ ಬಸವರಾಜು, ಮೋಹನ್‌ಕುಮಾರ್ ಗೌಡ, ಬಾಲರಾಜು, ಆನಂದೂರು ಪ್ರಭಾಕರ್, ಶಿರಮಳ್ಳಿ ಸಿದ್ದಪ್ಪ, ಪ್ರಕಾಶ್, ಮಂಡಕಳ್ಳಿ ಮಹೇಶ್, ನಾಗನಹಳ್ಳಿ ವಿಜೇಂದ್ರ, ಚಂದ್ರಶೇಖರ್, ಮಹದೇವಸ್ವಾಮಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts