More

    ರಾಜ್ಯ ಸರ್ಕಾರದ ವಿರುದ್ಧ ಆಶಾ ಕಾರ್ಯಕರ್ತೆಯರ ಆಕ್ರೋಶ

    ಕುಷ್ಟಗಿ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಪದಾಧಿಕಾರಿಗಳು ಬುಧವಾರ ಪಟ್ಟಣದ ತಹಸಿಲ್ ಕಚೇರಿ ಎದುರು ಪ್ರತಿಭಟನೆ ನಡೆಸಿ ತಹಸೀಲ್ದಾರ್ ಎಂ.ಸಿದ್ದೇಶಗೆ ಮನವಿ ಸಲ್ಲಿಸಿದರು.

    ಸಂಘದ ತಾಲೂಕು ಅಧ್ಯಕ್ಷೆ ಗಾಯಿತ್ರಿ ಮಾತನಾಡಿ, ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಜು.10 ರಿಂದ ಸೇವೆ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುತ್ತಿದೆ. ಧರಣಿ 20ನೇ ದಿನಕ್ಕೆ ಕಾಲಿಟ್ಟಿದ್ದು, ಈಗಲೂ ಸರ್ಕಾರ ಸ್ಪಂದಿಸುತ್ತಿಲ್ಲ. 12ಸಾವಿರ ರೂ.ಗಳ ಗೌರವ ಧನ ಹಾಗೂ ಕರೊನಾ ಸೇನಾನಿಗಳಾಗಿ ಕಾರ್ಯನಿರ್ವಹಿಸುವ ವೇಳೆ ಅಗತ್ಯ ರಕ್ಷಣಾ ಸಾಮಗ್ರಿಗಳನ್ನು ವಿತರಿಸಿ ಆಶಾ ಕಾರ್ಯಕರ್ತೆಯರ ಜೀವನ ನಿರ್ವಹಣೆಗೆ ಅನುಕೂಲ ಮಾಡಿಕೊಡಬೇಕಿದೆ ಎಂದರು. ಸಂಘದ ಕಾರ್ಯದರ್ಶಿ ಮಲ್ಲಮ್ಮ, ಪದಾಧಿಕಾರಿಗಳಾದ ರೇಣುಕಾ, ಅಂಬ್ರಮ್ಮ ಮಾಲಿಪಾಟೀಲ್, ಯಮನೂರಬಿ, ಕಸ್ತೂರಿ, ಶರಣಮ್ಮ, ಅನಸೂಯ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts