More

    ರಾಜ್ಯ ಸರ್ಕಾರ ಬದುಕಿದೆಯೋ ಸತ್ತಿದೆಯೋ?

    ಬೆಳಗಾವಿ: ಹಿಂದು ಯುವಕನನ್ನು ಮನಬಂದಂತೆ ಥಳಿಸಲಾಗಿದೆ. ರಾಜ್ಯದಲ್ಲಿ ಮುಸ್ಲಿಂ ಗೂಂಡಾಗಳು ಹಲ್ಲೆ ಮಾಡುತ್ತಿದ್ದಾರೆ. ಈ ವಿದ್ಯಮಾನ ಗಮನಿಸಿದರೆ ರಾಜ್ಯದಲ್ಲಿ ಸರ್ಕಾರ ಬದುಕಿದೆಯೋ ಇಲ್ಲವೋ ಗೊತ್ತಾಗುತ್ತಿಲ್ಲ’ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದರು.

    ಹಲ್ಲೆಗೊಳಗಾಗಿ ನಗರದ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯುವಕ-ಯುವತಿಯನ್ನು ಭಾನುವಾರ ಭೇಟಿಯಾದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ನಿತ್ಯ ಇಂಥ ಘಟನೆ ನಡೆಯುತ್ತಲೇ ಇವೆ. ಹಿಂದು-ಮುಸ್ಲಿಮರ ಮಧ್ಯೆ ಗಲಾಟೆ ನಡೆಸಿ, ಚುನಾವಣೆ ಎದುರಿಸಲು ಕಾಂಗ್ರೆಸ್‌ನವರು
    ತೀರ್ಮಾನಿಸಿದ್ದಾರೆ ಎಂದೂ ಆರೋಪಿಸಿದರು. ಬೆಳಗಾವಿಯಲ್ಲಿ ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್‌ಗಿರಿ ಹೆಸರಿನಲ್ಲಿ ಘಟನೆ ನಡೆದಿದ್ದು ಆಶ್ಚರ್ಯ ತಂದಿದೆ. ಯುವಕನಿಗೆ ಕಬ್ಬಿಣದ ರಾಡ್‌ನಿಂದ ಹೊಡೆಯಲಾಗಿದೆ. ಈ ಬಗ್ಗೆ ತನಿಖೆ ಕೈಗೊಳ್ಳಲು ಮುಖ್ಯಮಂತ್ರಿ ಹಾಗೂ ಗೃಹ ಸಚಿವರು ಬೆಳಗಾವಿಗೆ ತನಿಖಾ ದಳ ಕಳುಹಿಸಬೇಕು ಎಂದು ಒತ್ತಾಯಿಸಿದರು. ಹಲ್ಲೆಗೊಳಗಾದವರು ಸಹೋದರ-ಸಹೋದರಿ. ಈ ಘಟನೆಯಲ್ಲಿ ಭಾಗಿಯಾದವರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಬೇಕು. ಪೊಲೀಸರನ್ನೇ ಹೊಣೆಗಾರರನ್ನಾಗಿಸಿ ಸುಮ್ಮನೆ ಕೂರುವುದು ಸರಿ ಅಲ್ಲ ಎಂದರು.

    70ರಿಂದ 80 ಜನರಿಗೆ ಇದೇ ರೀತಿ ಹೊಡೆದಿದ್ದೇವೆ ಎಂದು ಆರೋಪಿಗಳು ಹೇಳಿದ್ದಾರೆ. ಅದಕ್ಕಾಗಿಯೇ ಅವರೊಂದು ಶೆಡ್ ಮಾಡಿಕೊಂಡಿದ್ದಾರೆ. ಮುಂದೆ ಇಂತಹ ಘಟನೆಗಳು ನಡೆಯದಂತೆ ಸರ್ಕಾರ ಎಚ್ಚರ ವಹಿಸಬೇಕು. ಹಲ್ಲೆಗೊಳಗಾದ ಯುವಕನಿಗೆ 2.5 ಲಕ್ಷ ರೂ. ಪರಿಹಾರ ನೀಡುವುದಾಗಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ. ಇಬ್ಬರಿಗೂ ಸರ್ಕಾರ ಎಲ್ಲ ರೀತಿ ಸೌಲಭ್ಯಗಳನ್ನು ಒದಗಿಸಬೇಕು ಎಂದು ಆಗ್ರಹಿಸಿದರು.

    ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಿದ ವಿಪಕ್ಷ ನಾಯಕ ಆರ್.ಅಶೋಕ ಸೇರಿ ಬಿಜೆಪಿ ನಾಯಕರ ಬಂಧನ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ’ಶ್ರೀಕಾಂತ ಪೂಜಾರಿ ಪರವಾಗಿ ನಾವು ಮಾಡಿದ್ದು ನ್ಯಾಯದ ಪರವಾದ ಹೋರಾಟ. ಅವರು ಎಷ್ಟು ಬೇಕಾದರೂ ಪ್ರಕರಣ ದಾಖಲಿಸಿಕೊಳ್ಳಲಿ. ಈ ಸರ್ಕಾರಕ್ಕೆ ಕೊನೆಗಾಲ ಬಂದಿದೆ. ಇದಕ್ಕೆ ಜನರೇ ಉತ್ತರ ಕೊಡುತ್ತಾರೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts