More

    ಇಸ್ಲಾಮಿಕ್ ಮೂಲಭೂತವಾದಕ್ಕೆ ರಾಜ್ಯ ಸರ್ಕಾರ ಸಹಕಾರ

    ಹುಬ್ಬಳ್ಳಿ : ಬೆಂಗಳೂರಿನಲ್ಲಿ ಸಂಭವಿಸಿದ ಬಾಂಬ್ ಸ್ಪೋಟದ ತನಿಖೆಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ. ರಾಜ್ಯದಲ್ಲಿ ಇಸ್ಲಾಮಿಕ್ ಮೂಲಭೂತವಾದ ನಡೆಯುತ್ತಿದೆ. ಕಟರ್ ಇಸ್ಲಾಮಿಕ್ ಮೂಲಭೂತವಾದಿಗಳಿಗೆ ರಾಜ್ಯ ಸರ್ಕಾರ ಸಹಕಾರ ನೀಡುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪಿಸಿದ್ದಾರೆ.

    ನಗರದಲ್ಲಿ ಶನಿವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಎಸ್​ಡಿಪಿ ಮತ್ತು ಪಿಎಫ್​ಐ ಮೇಲಿನ ಪ್ರಕರಣಗಳನ್ನು ಹಿಂಪಡೆಯುವ ಮೂಲಕ ಅವರ ಪರವಾಗಿ ಸರ್ಕಾರ ಇರುವುದಾಗಿ ತೋರಿಸಿದೆ. ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದವರ ಮೇಲೂ ಯಾವುದೇ ಕ್ರಮ ಆಗಿಲ್ಲ. ರಾಜ್ಯದಲ್ಲಿ ಸಾಮಾನ್ಯ ಜನರು ಅಸುರಕ್ಷಿತವಾಗಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು.

    ಮೂಲಭೂತವಾದಿಗಳಿಗೆ ಮತ್ತು ಉಗ್ರಗಾಮಿಗಳಿಗೆ ಕರ್ನಾಟಕ ಸುರಕ್ಷಿತ ತಾಣವಾಗಿದೆ. ಸರ್ಕಾರದ ತುಷ್ಠೀಕರಣ ನೀತಿಯಿಂದಾಗಿ ರಾಜ್ಯದಲ್ಲಿ ಈ ದುಸ್ಥಿತಿ ಉದ್ಘವಿಸಿದೆ. ಸ್ಪೋಟದ ಘಟನೆಯನ್ನು ಎನ್​ಐಎಗೆ ವಹಿಸಬೇಕು ಎಂದು ಒತ್ತಾಯಿಸಿದರು.

    ಕಾಂಗ್ರೆಸ್ ಮತಬ್ಯಾಂಕ್ ರಾಜಕೀಯಕ್ಕಾಗಿ ದೇಶವನ್ನು ಅಭದ್ರಗೊಳಿಸುತ್ತಿದೆ. ಇದು ಹೇಡಿತನದ ಕೃತ್ಯ. ಈ ಸರ್ಕಾರಕ್ಕೆ ಯಾವ ಕಾರಣಕ್ಕಾಗಿ ಬೆಂಬಲ ನೀಡಬೇಕು ? ಜಿಹಾದಿ ರಾಜಕಾರಣಕ್ಕೆ ಬೆಂಬಲ ನೀಡಬೇಕಾ ? ಎಂದು ಪ್ರಶ್ನಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts