More

    ದ್ವಿತೀಯ ಪಿಯುಸಿ ಮರುಮೌಲ್ಯಮಾಪನದಲ್ಲಿ ಒಂದು ಅಂಕ ಹೆಚ್ಚು ಬಂದ್ರೂ ಪರಿಗಣನೆ

    ಬೆಂಗಳೂರು: ದ್ವಿತೀಯ ಪಿಯುಸಿ ಮುಖ್ಯ ಪರೀಕ್ಷೆಯ ಉತ್ತರ ಪತ್ರಿಕೆ ಮರುಮೌಲ್ಯಮಾಪನ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆ ತರಲಾಗಿದೆ. ಇನ್ನು ಮುಂದೆ ಮರುಮೌಲ್ಯಮಾಪನದಲ್ಲಿ ವಿದ್ಯಾರ್ಥಿಯು ಮುಖ್ಯ ಪರೀಕ್ಷೆಯಲ್ಲಿ ಪಡೆದಿರುವುದಕ್ಕಿಂತ ಒಂದು ಅಂಕ ಹೆಚ್ಚು ಬಂದರೂ ಪರಿಗಣಿಸಲಾಗುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.

    2023ರ ಮಾರ್ಚ್‌ನಲ್ಲಿ ನಡೆಯಲಿರುವ ವಾರ್ಷಿಕ ಪರೀಕ್ಷೆಯಿಂದಲೇ ಈ ಹೊಸ ನಿಯಮ ಅನ್ವಯವಾಗಲಿದೆ. ಹಾಲಿ ಇರುವ ನಿಯಮದ ಪ್ರಕಾರ, ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗೆ ಕನಿಷ್ಠ 6 ಅಥವಾ ಅದಕ್ಕಿಂತ ಹೆಚ್ಚಿನ ಅಂಕಗಳು ಬಂದಲ್ಲಿ ಮಾತ್ರ ಪರಿಗಣಿಸಲಾಗುತ್ತಿತ್ತು. ಅದಕ್ಕಿಂತ ಕಡಿಮೆ ಅಂಕಗಳು ಬಂದಲ್ಲಿ ಪರಿಗಣಿಸುತ್ತಿರಲಿಲ್ಲ.

    ಆದರೆ, ಹೊಸ ನಿಯಮಗಳ ಪ್ರಕಾರ ಪ್ರತಿ ಅಂಕವನ್ನೂ ಪರಿಗಣಿಸಲಾಗುತ್ತದೆ ಮತ್ತು ಶುಲ್ಕವನ್ನು ವಾಪಸ್ ನೀಡಲಾಗುತ್ತದೆ. ಈ ಸಂಬಂಧ ಶೀಘ್ರದಲ್ಲೇ ಕರ್ನಾಟಕ ಪದವಿಪೂರ್ವ ಶಿಕ್ಷಣ ರಾಜ್ಯ ಮಟ್ಟದ ಪಬ್ಲಿಕ್ ಪರೀಕ್ಷೆ ನಿಯಮಗಳು-1997ಕ್ಕೆ ತಿದ್ದುಪಡಿ ತರಲಾಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ.

    ಎಸ್ಸೆಸ್ಸೆಲ್ಸಿಯಲ್ಲಿ ಈಗಾಗಲೇ ಈ ನಿಯಮ ಜಾರಿಯಲ್ಲಿದ್ದು, ಇದನ್ನು ದ್ವಿತೀಯ ಪಿಯುಸಿಗೂ ಅಳವಡಿಸಿಕೊಳ್ಳಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts