ಜನರ ಮೇಲೆ ಸಾಲದ ಹೊರೆಯನ್ನು ಹೊರಿಸಿದ ರಾಜ್ಯ ಸರ್ಕಾರ: ವಿಪಕ್ಷ ನಾಯಕ ಆರ್.ಅಶೋಕ ಆರೋಪ | State government

dk (72) (1)
Published on

State government:ಪ್ರಸ್ತುತ ಕರ್ನಾಟಕದ ಒಟ್ಟು ಸಾಲವನ್ನು 6 ಲಕ್ಷ 65 ಸಾವಿರ ರೂ. ಕೋಟಿಗೆ ಮುಟ್ಟಿಸಿದ್ದಾರೆ. ಪ್ರತಿ ಕನ್ನಡಿಗನ ಮೇಲೆ ಬರೋಬ್ಬರಿ 1 ಲಕ್ಷ ರೂಪಾಯಿ ಸಾಲದ ಹೊರೆಯನ್ನು ಭ್ರಷ್ಟ ಕಾಂಗ್ರೆಸ್‌ ಸರ್ಕಾರ ಹೊರೆಸಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ ಆರೋಪ ಮಾಡಿದ್ದಾರೆ.

ಈ ಕುರಿತು ತಮ್ಮ ಎಕ್ಸ್​​ ಖಾತೆಯಲ್ಲಿ ಹಮಚಿಕೊಂಡಿರುವ ಆರ್​.ಅಶೋಕ, ಕರ್ನಾಟಕವನ್ನು ಸಂಪೂರ್ಣ ದಿವಾಳಿ ಮಾಡಬೇಕೆಂಬುದೇ ಸರ್ಕಾರದ ಒನ್‌ ಲೈನ್‌ ಅಜೆಂಡಾ ಆಗಿದೆ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ:ರಾಜ್ಯ ಮುಖ್ಯ ಮಾಹಿತಿ ಹಾಗೂ ರಾಜ್ಯ ಮಾಹಿತಿ ಆಯುಕ್ತರಿಗೆ ಪ್ರಮಾಣ ವಚನ ಬೋಧಿಸಿದ ರಾಜ್ಯಪಾಲ ಗೆಹ್ಲೋಟ್ | Information Officer ಸಾಲ ಮಾಡುವುದನ್ನೇ ಫುಲ್‌ ಟೈಂ ಕಾಯಕವನ್ನಾಗಿಸಿಕೊಂಡಿರುವ ಸಿಎಂ, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕರ್ನಾಟಕ ನಾವೀನ್ಯತೆಯ ಸೂಚ್ಯಂಕದಲ್ಲಿ, ಬಂಡವಾಳ ಹೂಡಿಕೆಯಲ್ಲಿ ನಂಬರ್‌ 1 ಆಗಿತ್ತು, ಆದರೆ ಈಗಿನ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಕರ್ನಾಟಕ ಅತಿ ಹೆಚ್ಚು ಸಾಲ ಮಾಡುವ ರಾಜ್ಯಗಳಲ್ಲಿ ನಂಬರ್‌ 1 ಆಗುತ್ತಿರುವುದು ಅತ್ಯಂತ ನಾಚಿಕೆಗೇಡು ಎಂದು ಟೀಕಿಸಿದ್ದಾರೆ.

ಬಿಜೆಪಿ ಟೀಕೆ

ಸಿಎಂ ಸಿದ್ದರಾಮಯ್ಯ ಅವರು ತಮ್ಮ ಹೆಸರನ್ನು “ಸಾಲ”ರಾಮಯ್ಯ ಎಂದು ಬದಲಿಸಿಕೊಳ್ಳುವುದು ಒಳಿತು ಎಂದು ಬಿಜೆಪಿ ಕರ್ನಾಟಕ ಎಕ್ಸ್​ ಪೇಜ್​ ಹಂಚಿಕೊಂಡಿದೆ.

ಸಿದ್ದರಾಮಯ್ಯ ಅವರು ಸಿಎಂ ಆದಾಗೆಲ್ಲಾ ಕರ್ನಾಟಕದ ಸಾಲ ರಾಕೆಟ್‌ ವೇಗದಲ್ಲಿ ವೃದ್ಧಿಯಾಗುತ್ತಿದೆ. ಪ್ರಸ್ತುತ ಕರ್ನಾಟಕದ ಸಾಲ 6.65 ಲಕ್ಷ ಕೋಟಿಗೆ ತಲುಪಿದ್ದು, ಭ್ರಷ್ಟ ಕಾಂಗ್ರೆಸ್​ ಸರ್ಕಾರದ ಆಡಳಿತ ಹೀಗೆಯೇ ಮುಂದುವರೆದರೆ 12 ಲಕ್ಷ ಕೋಟಿಗೆ ತಲುಪಿದರೂ ಅಚ್ಚರಿಯಿಲ್ಲ. ಒಟ್ಟಿನಲ್ಲಿ ತಮ್ಮದಲ್ಲದ ತಪ್ಪಿಗೆ ಕನ್ನಡಿಗರು ಸಾಲದ ಹೊರೆ ಹೊತ್ತುಕೊಳ್ಳುವುದು ಮಾತ್ರ ಖಚಿತ-ನಿಶ್ಚಿತ-ಖಂಡಿತ ಎಂದು ಹರಿಹಾಯ್ದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net