More

    17% ಹೆಚ್ಚಳದ ನಂತರ ಸರ್ಕಾರಿ ನೌಕರರ ವೇತನವೆಷ್ಟು? ಇಲ್ಲಿದೆ ವೇತನ ವ್ಯತ್ಯಾಸದ ಪಟ್ಟಿ…

    ಬೆಂಗಳೂರು: ಸರ್ಕಾರಿ ನೌಕರರ ಮುಷ್ಕರಕ್ಕೆ ಮಣಿದಿರುವ ರಾಜ್ಯ ಸರ್ಕಾರ, ಸದ್ಯ ಮೂಲ ವೇತನದ ಶೇಕಡ 17 ರಷ್ಟು ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಲು ನಿರ್ಧರಿಸಿದೆ. ಈ ಆದೇಶ ಮುಂದಿನ ತಿಂಗಳು ಏಪ್ರಿಲ್ 1ರಿಂದ ಜಾರಿಗೆ ಬರಲಿದೆ. ವೇತನ ಹೆಚ್ಚಳದ ನೂತನ ಅದೇಶದಿಂದ ಸದ್ಯ ಸರ್ಕಾರದ ಬೊಕ್ಕಸಕ್ಕೆ 6,000 ಕೋಟಿ ರೂ.ಗಳನ್ನು ಹೆಚ್ಚುವರಿ ಹೊರೆ ಬೀಳುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.

    ಇದನ್ನೂ ಓದಿ: ಸರ್ಕಾರಿ ನೌಕರರಿಗೆ 17% ವೇತನ ಹೆಚ್ಚಳ; ಬೊಕ್ಕಸಕ್ಕೆ ಬೀಳುವ ಹೊರೆಯೆಷ್ಟು? ಇಲ್ಲಿದೆ ಮಾಹಿತಿ…

    ಈ ಬಾರಿಯ ಬಜೆಟ್​ನಲ್ಲಿ ಸರ್ಕಾರಿ ನೌಕರರ ಹೆಚ್ಚುವರಿ ವೇತನಕ್ಕೆ 6 ಸಾವಿರ ಕೋಟಿ ರೂ. ಮೀಸಲಿಡಲಾಗಿತ್ತು. ಆದರೆ ನೂತನ ಆದೇಶದಿಂದ ಸರ್ಕಾರ ವಾರ್ಷಿಕ 10,800 ಕೋಟಿ ರೂ. ಮೀಸಲಿಡಬೇಕಾಗಿದೆ. ಇದು ಸರ್ಕಾರದ ಅಂದಾಜಿಗಿಂತ 4,800 ಕೋಟಿ ರೂ. ಹೆಚ್ಚುವರಿ ಹೊರೆಯಾಗಲಿದೆ ಎಂದು ಲೆಕ್ಕಾಚಾರ ಹಾಕಲಾಗಿದೆ. ಇನ್ನು ಮುಂದೆ ಪ್ರತಿ ತಿಂಗಳು ಸರ್ಕಾರಿ ನೌಕರರಿಗೆ ವೇತನ ನೀಡಲು 900 ಕೋಟಿ ರೂ. ಹೆಚ್ಚುವರಿಯಾಗಿ ಮೊತ್ತ ಬರಿಸಬೇಕಾಗಿದೆ.

    ನೂತನ ಆದೇಶದಂತೆ 2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರ ವೇತನ ವ್ಯತ್ಯಾಸದ ಪಟ್ಟಿ ಇಂತಿವೆ.

    17% ಹೆಚ್ಚಳದ ನಂತರ ಸರ್ಕಾರಿ ನೌಕರರ ವೇತನವೆಷ್ಟು? ಇಲ್ಲಿದೆ ವೇತನ ವ್ಯತ್ಯಾಸದ ಪಟ್ಟಿ…
    17% ಹೆಚ್ಚಳದ ನಂತರ ಸರ್ಕಾರಿ ನೌಕರರ ವೇತನವೆಷ್ಟು? ಇಲ್ಲಿದೆ ವೇತನ ವ್ಯತ್ಯಾಸದ ಪಟ್ಟಿ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts