ದಿಕ್ಕು ತಪ್ಪಿಸಲು ಮುಂದಾಗಿರುವ ರಾಜ್ಯ ಸರ್ಕಾರ: ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್

ಮೈಸೂರು: ಕಾಲ್ತುಳಿತದಿಂದ ಮೃತಪಟ್ಟ 11 ಜನರ ದುರ್ಘಟನೆಯಿಂದ ಬಂದಿರುವ ಕೆಟ್ಟ ಹೆಸರು ಮರೆಮಾಚಿ ಜನರನ್ನು ದಿಕ್ಕು ತಪ್ಪಿಸಲು ರಾಜ್ಯ ಸರ್ಕಾರ ಮರು ಜಾತಿ ಜನಗಣತಿಗೆ ಮುಂದಾಗಿದೆ ಎಂದು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಆರೋಪಿಸಿದರು.
ಕಾಲ್ತುಳಿತ ಪ್ರಕರಣವನ್ನು ಮುಚ್ಚಿ ಹಾಕಲು ಮುಂದಾಗಿರುವ ಕಾಂಗ್ರೆಸ್ ಸರ್ಕಾರ ಪೊಲೀಸ್ ಇಲಾಖೆಯ ಮೇಲೆ ಆರೋಪ ಮಾಡಿದೆ. ಈಗ ಜನರನ್ನು ದಿಕ್ಕುತಪ್ಪಿಸಲು ಜಾತಿ ಜನಗಣತಿ ಮರು ಸಮೀಕ್ಷೆಗೆ ಮುಂದಾಗಿದೆ ಎಂದು ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು
ಜನರ ತೆರಿಗೆಯ ನೂರಾರು ಕೋಟಿ ರೂ. ವ್ಯಯಿಸಿ ಕಾಂತರಾಜು ಆಯೋಗ ಜಾತಿ ಜನಗಣತಿ ವರದಿ ಸಿದ್ಧಪಡಿಸಿದ್ದರೂ ಇದುವರೆಗೂ ಅದನ್ನು ಬಹಿರಂಗಪಡಿಸಿಲ್ಲ. ಈಗ ಕಾಲ್ತುಳಿತ ಘಟನೆಯಿಂದ ಅಗಿರುವ ಮುಜುಗರ ತಪ್ಪಿಸಿಕೊಳ್ಳಲು ಇಂತಹ ಕಾರ್ಯಕ್ಕೆ ಮುಂದಾಗಿದೆ ಎಂದು ಹೇಳಿದರು.
ರಾಜ್ಯ ಸರ್ಕಾರದ ಬೇಜವಾಬ್ದಾರಿಯಿಂದ 11 ಯುವ ಜನರು ಸಾವಿಗೀಡಾಗುವ ಮೂಲಕ ಸರ್ಕಾರಕ್ಕೆ ಕೆಟ್ಟು ಹೆಸರು ಬಂದಿದೆ. ಇದರಿಂದ ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ವರ್ಚಸ್ಸಿಗೆ ಧಕ್ಕೆಯಾಗಿದೆ. ಈ ಮುಜುಗರದಿಂದ 90 ದಿನಗಳಲ್ಲಿ ಮರು ಜಾತಿ ಜನಗಣತಿ ಮಾಡುತ್ತೇವೆ ಎಂದು ಹೇಳುತ್ತಿದೆ. ವರ್ಷಾನುಗಟ್ಟಲೇ ನಡೆಸಿದರೂ ಪೂರ್ಣವಾಗಿ ಮುಗಿಯದ ಗಣತಿಯನ್ನು ಕೇವಲ 90 ದಿನಗಳಲ್ಲಿ ನಡೆಸಲು ಸಾಧ್ಯವೇ ಎಂದು ಪ್ರಶ್ನಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಉಳಿಸಲು ಕಾಂಗ್ರೆಸ್ ಹೈಕಮಾಂಡ್ ಹಿಂದುಳಿದ ವರ್ಗಗಳ ಹಿತ ಬಲಿಕೊಟ್ಟಿದೆ. ಈಗಾಗಲೇ ಕೇಂದ್ರ ಸರ್ಕಾರ ಜನಗಣತಿಯ ಜತೆಗೆ ಜಾತಿ ಜನಗಣತಿಯನ್ನು ಕೂಡ ನಡೆಸುವಂತೆ ಸೂಚಿಸಿದೆ. ಹಾಗಾಗಿ ಕೋಟ್ಯಂತರ ರೂ. ಖರ್ಚು ಮಾಡಿ ರಾಜ್ಯದಲ್ಲಿ ಮರು ಜಾತಿಗಣತಿ ನಡೆಸುವ ಅವಶ್ಯಕತೆ ಇಲ್ಲ ಎಂದು ಹೇಳಿದರು. ರಾಜ್ಯದ ಜಾತಿಗಣತಿ ವಿಚಾರವನ್ನು ರಾಹುಲ್ ಗಾಂಧಿ, ವೇಣುಗೋಪಾಲ್ ನಿರ್ಧರಿಸಲು ಮುಂದಾಗಿದ್ದು ಸರಿಯಲ್ಲ. ಈ ಮರು ಜಾತಿ ಜನ ಗಣತಿ ನಡೆಸುವ ಸಾಮರ್ಥ್ಯ ರಾಜ್ಯ ಸರ್ಕಾರಕ್ಕಿಲ್ಲ ಎಂದು ವಾಗ್ದಾಳಿ ನಡೆಸಿದರು.
ಬಿಜೆಪಿ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ರಘು ಕೌಟಿಲ್ಯ ಮಾತನಾಡಿ, ಕಾಂತರಾಜು ವರದಿಯನ್ನು ಕಾಂಗ್ರೆಸ್ ಹೈಕಮಾಂಡ್ ಕಸದ ಬುಟ್ಟಿಗೆ ಎಸೆದಿರುವುದರಿಂದ ಸಿಎಂ ಸಿದ್ದರಾಮಯ್ಯಗೆ ಮುಖಭಂಗವಾಗಿದೆ ಎಂದರು.
ರಾಜ್ಯ ಸರ್ಕಾರದ ವಿವಾದಿತ ಕಾಂತರಾಜು ಆಯೋಗದ ಜಾತಿಗಣತಿ ವರದಿಯನ್ನು ಕಾಂಗ್ರೆಸ್ ಹೈಕಮಾಂಡ್ ಕೈ ಬಿಡಲು ನಿರ್ಧರಿಸಿದೆ. ಈ ನಿರ್ಧಾರವನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಘೋಷಿಸಿದ್ದು, ಹಲವು ಗೊಂದಲಗಳನ್ನು ಹುಟ್ಟುಹಾಕಿದೆ. ರಾಜ್ಯ ಸಚಿವ ಸಂಪುಟ ಕೈಗೊಳ್ಳಬೇಕಾದ ನಿರ್ಣಯವನ್ನು ವೇಣುಗೋಪಾಲ್ ಹೇಗೆ ಪ್ರಕಟಿಸಿದರು? ಎಂದು ಪ್ರಶ್ನಿಸಿದರು.
ಬೆಂಗಳೂರು ಕಾಲ್ತುಳಿತ ಪ್ರಕರಣದಿಂದ ಕಾಂಗ್ರೆಸ್ ಮರ್ಯಾದೆ ರಾಷ್ಟ್ರಮಟ್ಟದಲ್ಲಿ ಹರಾಜಾಗಿದೆ. ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಉಳಿಸಲು ವಿಷಯಾಂತರ ಮಾಡಲು ಹೈಕಮಾಂಡ್ ಮುಂದಾಗಿದೆ. ಮರು ಜಾತಿ ಜನ ಗಣತಿ ಹೆಸರಿನಲ್ಲಿ ಹಿಂದುಳಿದ ಜಾತಿಗಳನ್ನು ಯಾಮಾರಿಸುತ್ತಿದ್ದಾರೆ ಎಂದು ಟೀಕಿಸಿದರು.
ಬಿಜೆಪಿ ನಗರಾಧ್ಯಕ್ಷ ಎಲ್ ನಾಗೇಂದ್ರ, ನಗರ ಪ್ರಧಾನ ಕಾರ್ಯದರ್ಶಿಗಳಾದ ಕೇಬಲ್ ಮಹೇಶ್, ಗಿರಿಧರ್, ಜಿಲ್ಲಾ ವಕ್ತಾರ ದಯಾನಂದ ಪಟೇಲ್, ನಗರ ಮಾಧ್ಯಮ ಸಂಚಾಲಕ ಮಹೇಶ್ ರಾಜೇ ಅರಸ್ ಇದ್ದರು.

Share This Article

ಒಂದು ತಿಂಗಳು ಸಕ್ಕರೆ ಮತ್ತು ಉಪ್ಪು ಬಿಟ್ಟರೆ ದೇಹದಲ್ಲಾಗುವ ಬದಲಾವಣೆ ಏನು ಗೊತ್ತಾ? | Sugar

Sugar: ಸಾಮಾನ್ಯವಾಗಿ ಮನುಷ್ಯನ ದೇಹ ಅನಾರೋಗ್ಯಕ್ಕೊಳಗಾದಾಗ ಆಹಾರದಲ್ಲಿ ಸಕ್ಕೆರೆ ಮತ್ತು ಉಪ್ಪುನಂತಹ ಅಂಶಗಳನ್ನು ತ್ಯಜಿಸಬೇಕಾಗುತ್ತದೆ. ಇದರಿಂದ…

ಹೃದ್ರೋಗ ದೂರ, ಮೆದುಳಿನ ಆರೋಗ್ಯಕ್ಕೆ ಬಲ: ಟ್ಯೂನ ಮೀನಿನಲ್ಲಿದೆ ಹಲವು ಆರೋಗ್ಯ ಪ್ರಯೋಜನಗಳು! Tuna Fish Benefits

Tuna Fish Benefits: ಮೀನು ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು ಎಂದು ಸಾಮಾನ್ಯವಾಗಿ ಹೇಳಲಾಗುತ್ತದೆ. ಮೀನಿನಲ್ಲಿ ಹಲವು…