ಗಣಿಧಣಿ ಜನಾರ್ದನರೆಡ್ಡಿಗೆ ಕಾದಿದೆ ಎಸ್​ಐಟಿ ಉರುಳು !

ಮಂಗಳೂರು: ಮಾಜಿ ಸಚಿವ ಗಾಲಿ ಜನಾರ್ದನರೆಡ್ಡಿ ಭಾಗಿಯಾಗಿರುವ ಅಕ್ರಮ ಗಣಿಗಾರಿಕೆ ಹಗರಣದ ತನಿಖೆಯನ್ನು ಎಸ್​ಐಟಿಗೆ ವಹಿಸುವ ಕುರಿತು ರಾಜ್ಯ ಸರ್ಕಾರ ಚಿಂತಿಸುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಹಗರಣದಲ್ಲಿ 25 ಸಾವಿರ ಕೋಟಿ ರೂ.ಮೊತ್ತದ ಭಾರಿ ಅವ್ಯವಹಾರ ನಡೆದಿರುವುದರಿಂದ ಎಸ್​ಐಟಿಯಿಂದ ಕೂಲಂಕಷ ತನಿಖೆ ಅನಿವಾರ್ಯ ಎಂಬ ಅಭಿಪ್ರಾಯಕ್ಕೆ ಬಂದಿದ್ದೇವೆ. ಈ ಸಂಬಂಧ ಶೀಘ್ರದಲ್ಲಿಯೇ ಸಚಿವ ಸಂಪುಟ ಸಭೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಿಎಂ ಸ್ಪಷ್ಟ ಪಡಿಸಿದ್ದಾರೆ.

ಈ ಮುನ್ನ ಹಗರಣದ ತನಿಖೆ ಕೈಗೆತ್ತಿಕೊಂಡಿದ್ದ ಸಿಬಿಐ ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಜನಾರ್ದನ ರೆಡ್ಡಿಗೆ ಕ್ಲೀನ್​ ಚಿಟ್​ ನೀಡಿದೆ. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *