More

    ರೈತರ ಹೆಸರಿನಲ್ಲಿ ರಾಜ್ಯ ಸರ್ಕಾರ ರಾಜಕೀಯ

    ಲಕ್ಷ್ಮೇಶ್ವರ: ಕೇಂದ್ರ ಮತ್ತು ರಾಜ್ಯ ಸರ್ಕಾರ ಈಗಾಗಲೇ ಘೊಷಣೆಯಾದ ಬರಪೀಡಿತ ಜಿಲ್ಲೆಯ ರೈತರಿಗೆ ಹೆಕ್ಟೇರ್​ಗೆ 35 ಸಾವಿರ ರೂ. ಪರಿಹಾರ ನೀಡಬೇಕಿತ್ತು. ಆದರೆ, ಕೇಂದ್ರದ ಮೇಲೆ ಬೊಟ್ಟು ಮಾಡಿ ತೋರಿಸುವ ರಾಜ್ಯ ಸರ್ಕಾರ ಕೇವಲ 2 ಸಾವಿರ ರೂ. ಪರಿಹಾರ ಘೊಷಿಸಿ ರೈತರ ಹೆಸರಿನಲ್ಲಿ ರಾಜಕೀಯ ಮಾಡುತ್ತಿವೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಅಧ್ಯಕ್ಷ ವಾಸುದೇವ ಮೇಟಿ ಹೇಳಿದರು.


    ಪಟ್ಟಣದ ಪತ್ರಿಕಾ ಕಾರ್ಯಾಲಯದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
    ರೈತರು ಹಿಂಗಾರು- ಮುಂಗಾರಿನ ಬರಗಾಲದ ಸಂಕಷ್ಟದಲ್ಲಿದ್ದರೂ ಕೇವಲ ಬೆಂಗಳೂರನ್ನು ಕೇಂದ್ರವಾಗಿಸಿಕೊಂಡಿರುವ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಉತ್ತರ ಕರ್ನಾಟಕವನ್ನು ನಿರ್ಲಕ್ಷಿಸಿದ್ದಾರೆ. ನೀರಾವರಿ ಮಂತ್ರಿ ಡಿಸಿಎಂ ಡಿ.ಕೆ. ಶಿವಕುಮಾರ, ಉತ್ತರ ಕರ್ನಾಟಕದಲ್ಲಿ ಹರಿದಿರುವ ನದಿಗಳ ಬಗ್ಗೆ ಕಿಂಚಿತ್ತೂ ಗಮನವಿಲ್ಲ. ತುಂಗಭದ್ರಾ ಸೇರಿ ಅನೇಕ ಡ್ಯಾಂಗಳು ಹೂಳು ತುಂಬಿವೆ. ತಮ್ಮ ಖಾತೆಯನ್ನು ಸಮರ್ಥವಾಗಿ ನಿಭಾಯಿಸಲಾಗುತ್ತಿಲ್ಲ ಎಂದು ದೂರಿದರು.


    ಈ ವೇಳೆ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಗದಗ ಜಿಲ್ಲಾ ಅಧ್ಯಕ್ಷರನ್ನಾಗಿ ಯಲ್ಲನಗೌಡ ಪಾಟೀಲ ಹಾಗೂ ಶಿರಹಟ್ಟಿ ತಾಲೂಕು ಅಧ್ಯಕ್ಷರನ್ನಾಗಿ ಸುರೇಶ ತಳ್ಳಳ್ಳಿ ಹಾಗೂ ಲಕ್ಷ್ಮೇಶ್ವರ ತಾಲೂಕು ಅಧ್ಯಕ್ಷರನ್ನಾಗಿ ನಾಗರಾಜ ಶಿರಬಡಗಿ ಅವರನ್ನು ಆಯ್ಕೆ ಮಾಡಿ ನೇಮಕಾದೇಶ ಪತ್ರ ನೀಡಿದರು.
    ರಾಜ್ಯ ಪ್ರ. ಕಾರ್ಯದರ್ಶಿ ಸಂಗಣ್ಣ ಬಾಗೇವಾಡಿ, ರಾಜ್ಯ ಕಾರ್ಯದರ್ಶಿ ಎಫ್.ಕೆ. ಪೂಜಾರ, ಜಿಲ್ಲಾ ಉಪಾಧ್ಯಕ್ಷ ವಿಶ್ವನಾಥ ಚಿಂಚಲಿ, ಅಶೋಕ ಪ್ಯಾಟಿ, ನಿಂಗಪ್ಪ ಸಾಂದ್ಲಿ, ಅಂದಾನಪ್ಪ ಚೂರಿ, ದೇವಪ್ಪ ಭಜಂತ್ರಿ, ಕಬ್ಬೇರಹಳ್ಳಿ ಇದ್ದರು.


    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts