28.5 C
Bengaluru
Monday, January 20, 2020

ರಾಜ್ಯ ಸರ್ಕಾರದ ಬೊಕ್ಕಸ ಖಾಲಿ

Latest News

ವಿಪಕ್ಷ ನಾಯಕ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನ ಪ್ರತ್ಯೇಕವಾಗಲಿ: ಜಿ. ಪರಮೇಶ್ವರ್

ಬೆಂಗಳೂರು: ವಿಪಕ್ಷ ನಾಯಕ ಸ್ಥಾನ ಮತ್ತು ಕಾಂಗ್ರಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನ ಪ್ರತ್ಯೇಕವಾಗಿರಲಿ ಎಂಬ ಅಭಿಪ್ರಾಯವನ್ನು ಹಿರಿಯ ಕಾಂಗ್ರೆಸ್ ನಾಯಕ ಡಾ.ಜಿ.ಪರಮೇಶ್ವರ್...

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ಗುರುತು ಪತ್ತೆ

ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ಚಿತ್ರ ಸಿಸಿಟಿವಿಯಲ್ಲಿ ಸೆರೆಯಾಗಿದೆ.ವಿಮಾನ ನಿಲ್ದಾಣದಲ್ಲಿರುವ ಸಿಸಿಟಿವಿಯಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ದೃಶ್ಯ ಪತ್ತೆಯಾಗಿದೆ.ಶಂಕಿತ...

ವಸತಿ ಸಹಾಯಧನ ಹೆಚ್ಚಳ ಕೋರಿ ಪ್ರಧಾನಿ ಬಳಿ ರಾಜ್ಯದ ನಿಯೋಗ : ವಸತಿ ಸಚಿವ ವಿ.ಸೋಮಣ್ಣ

ಬೆಂಗಳೂರು: ವಿಧಾನ ಸೌಧ ಕೊಠಡಿಯಲ್ಲಿ ಬೆಂಗಳೂರು ನಗರ ವಸತಿ ಯೋಜನೆ ಕುರಿತು ಸಂಸದ, ಶಾಸಕರ ಸಭೆಯಲ್ಲಿ ಸೋಮವಾರ ಈ ವಿಷಯ ತಿಳಿಸಿದರು.ಕೇಂದ್ರ ಸಹಾಯಧನ...

ಜೂಜುಕೋರರ ಗಡಿಪಾರು ಖಚಿತ: ಎಸ್‌ಪಿ ವಂಶಿಕೃಷ್ಣ ಎಚ್ಚರಿಕೆ

ಪಾವಗಡ: ಮಟ್ಕಾ ಮತ್ತು ಇಸ್ಪೀಟು ಆಡುವವರನ್ನು ಮತ್ತು ಆಡಿಸುವವರನ್ನು ಗಡಿಪಾರು ವಾಡಲು ಪೊಲೀಸ್ ಇಲಾಖೆಯಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದು ತುಮಕೂರು ಜಿಲ್ಲಾ ಎಸ್‌ಪಿ ಡಾ.ಕೆ.ವಂಶಿಕೃಷ್ಣ...

ವಿಶ್ವಶಾಂತಿಗೆ ಸಂತರ ಮಾರ್ಗದರ್ಶನ ಅಗತ್ಯ: ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ

ತುಮಕೂರು: ವಿಶ್ವವೇ ಸಂಕಷ್ಟದ ಸನ್ನಿವೇಶದಲ್ಲಿದ್ದು ಜನರ ಭಯ ತೊಲಗಿಸಲು ಸುಖ-ಶಾಂತಿ ನೆಲೆಸಲು ಸಂತರ ಮಾರ್ಗದರ್ಶನ ಅಗತ್ಯವಿದೆ ಎಂದು ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹೇಳಿದರು. ಸಿದ್ಧಗಂಗಾ...

ಹಾವೇರಿ: ಸಾಲಮನ್ನಾ ಕುರಿತು ಸಿಎಂ ಕುಮಾರಸ್ವಾಮಿ ಸರಿಯಾದ ನೀತಿ ರೂಪಿಸದೇ ಬ್ಯಾಂಕರ್ಸ್​ಗಳ ಮೇಲೆ ಗೂಬೆ ಕೂರಿಸುತ್ತಿದ್ದಾರೆ ಎಂದು ಸಂಸದ ಶಿವಕುಮಾರ ಉದಾಸಿ ಆರೋಪಿಸಿದರು.

ನಗರದ ಮಾಗಾವಿ ಕಲ್ಯಾಣ ಮಂಟಪದಲ್ಲಿ ಗುರುವಾರ ಸಂಜೆ ಹಾವೇರಿ ವಿಧಾನಸಭೆ ಕ್ಷೇತ್ರದ ಕಾರ್ಯಕರ್ತರು ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಸಾಲಮನ್ನಾ ಮಾಡಲು ರಾಜ್ಯ ಸರ್ಕಾರದ ಬೊಕ್ಕಸದಲ್ಲಿ ಹಣವೇ ಇಲ್ಲ. ನೌಕರರಿಗೆ ಸಂಬಳ ಕೊಡಲು ಆಗುತ್ತಿಲ್ಲ. ಸರ್ಕಾರದ ವಿರುದ್ಧ ಬಿಜೆಪಿ ಮೂರು ದಿನಗಳ ಕಾಲ ಹೋರಾಟ ಹಮ್ಮಿಕೊಂಡಿದೆ ಎಂದರು.

ರಾಜ್ಯದ 25ರಿಂದ 31ವಿಧಾನಸಭೆ ಕ್ಷೇತ್ರಗಳಿಗೆ ಅನುಕೂಲವಾಗುವ ವರದಾ-ಬೇಡ್ತಿ ಯೋಜನೆ ಅನುಷ್ಠಾನಕ್ಕೆ ಪ್ರಯತ್ನಿಸುತ್ತೇನೆ. ಕ್ಷೇತ್ರದಲ್ಲಿ ಕೆರೆ ತುಂಬಿಸುವ ಯೋಜನೆಗೆ ಆದ್ಯತೆ ನೀಡುತ್ತೇನೆ. ಅದಕ್ಕಾಗಿ ಈಗಾಗಲೇ ಯೋಜನೆ ರೂಪಿಸಲು ಕಾರ್ಯ ಶುರು ಮಾಡಿದ್ದೇನೆ. ಪ್ರಧಾನ ಮಂತ್ರಿ ಆವಾಸ್ ಯೋಜನೆಯಲ್ಲಿ ಕ್ಷೇತ್ರದಲ್ಲಿ ಅತಿಹೆಚ್ಚು ಮನೆ ತರಲು ಪ್ರಯತ್ನಿಸುತ್ತೇನೆ. ಬೆಳೆಗಳಿಗೆ ಹೆಚ್ಚಿನ ಬೆಲೆ ಸಿಗಲು ಅನುಕೂಲವಾಗುವ ಫುಡ್​ಪಾರ್ಕ್ ಸ್ಥಾಪನೆಗೆ ಪ್ರಯತ್ನ ಪಡುತ್ತೇನೆ. ಒಟ್ಟಾರೆ ಮೋದಿ ಸರ್ಕಾರದಿಂದ ಈ ಬಾರಿ ನದಿ ಜೋಡಣೆ ಯೋಜನೆ ಅನುಷ್ಠಾನ ಸೇರಿ ಯುವಕರಿಗೆ, ರೈತರಿಗೆ ವಿಶೇಷ ಸೌಲಭ್ಯ ದೊರೆತು ಅಮೂಲಾಗ್ರ ಬದಲಾವಣೆ ಆಗಲಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ನೆಹರು ಓಲೇಕಾರ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಸೋಲಿಸಲು ಹೋದವರೇ ಸೋತು ಸುಣ್ಣವಾಗಿದ್ದಾರೆ. ಮೋದಿಗೆ ಕೆಲಸ ಮಾಡುವ ತಾಕತ್ತಿದೆ. ಇದನ್ನು ಅರಿತೇ ಜನ ಮತ್ತೊಮ್ಮೆ ಅವಕಾಶ ಕೊಟ್ಟಿದ್ದಾರೆ. ಹಾವೇರಿ ಕ್ಷೇತ್ರದಲ್ಲಿ 16ಸಾವಿರ ಜನ ಮನೆಗಾಗಿ ಅರ್ಜಿ ಸಲ್ಲಿಸಿದ್ದು, ಇದರಲ್ಲಿ 6ಸಾವಿರ ಜನರಿಗೆ ನಿವೇಶನವಿಲ್ಲ. ಇವರಿಗೆ ಮನೆ ಒದಗಿಸಲು ಸಂಸದರು ಮುಂದಾಗಬೇಕು. ಸಿಆರ್​ಎಫ್ ಸೇರಿ ಕೇಂದ್ರ ಸರ್ಕಾರದ ಅನುದಾನವನ್ನು ಹೆಚ್ಚು ಕೊಡಬೇಕು ಎಂದು ಮನವಿ ಮಾಡಿದರು.

ಕಾಂಗ್ರೆಸ್​ನವರಿಗೆ ತಕ್ಕಪಾಠ…

ಹಿಂದಿನ ಅವಧಿಯಲ್ಲಿ ರುದ್ರಪ್ಪ ಲಮಾಣಿಯವರು ಮಂತ್ರಿಯಾಗಿದ್ದರೂ ಅಭಿವೃದ್ಧಿ ಮಾಡಲಿಲ್ಲ. ನೀರು ಮತ್ತು ನೈರ್ಮಲ್ಯ ಇಲಾಖೆ ಬಳಿ ಕಳೆದ 5ವರ್ಷಗಳ ಕಾಲ ನೂರಾರು ಪೈಪ್​ಗಳಿದ್ದರೂ ಬಳಕೆ ಮಾಡಿರಲಿಲ್ಲ. ಆಗ ಅಧಿಕಾರಿಗಳು ಮಂತ್ರಿಗಳ, ಜಿಪಂ ಅಧ್ಯಕ್ಷರ ಮಾತು ಕೇಳುತ್ತಿರಲಿಲ್ಲ. ಈಗ ನಾನು ಆ ಪೈಪ್​ಗಳನ್ನು ಒಯ್ದು ಕನವಳ್ಳಿ ಕೆರೆಗೆ ನೀರು ತುಂಬಿಸಲು ಮುಂದಾದರೆ ಆ ಗ್ರಾಮದ ರೈತರ ಮೇಲೆ ಪ್ರಕರಣ ದಾಖಲಿಸುವ ಕೆಲಸ ಮಾಡುತ್ತಿದ್ದಾರೆ. ಅದೇ ಜನ ಮುಂದಿನ ದಿನಗಳಲ್ಲಿ ತಕ್ಕಪಾಠ ಕಲಿಸುತ್ತಾರೆ. ನಿಮ್ಮಿಂದ ಕ್ಷೇತ್ರದಲ್ಲಿ ಕೆಲಸ ಮಾಡಲು ಆಗಲಿಲ್ಲ. ಅಭಿವೃದ್ಧಿ ಮಾಡುವ ವ್ಯವಧಾನವೂ ಇರಲಿಲ್ಲ. ಹುದ್ದೆ ಇದ್ದರೂ ಜನರ ಕೆಲಸ ಮಾಡಲಿಲ್ಲ. ನೀವು ಎಲ್ಲ ಹಂತಗಳಲ್ಲಿ ಸೋತಿದ್ದೀರಿ. ಮಾನಸಿಕವಾಗಿ ನರಳಾಡುತ್ತಿದ್ದೀರಿ. ಆದರೀಗ ಅಭಿವೃದ್ಧಿ ಕೆಲಸಕ್ಕೆ ಅಡ್ಡಿ ಮಾಡುತ್ತಿದ್ದೀರಿ. ಇದನ್ನು ಬಿಟ್ಟು ನಾವು ಮಾಡುತ್ತಿರುವ ಅಭಿವೃದ್ಧಿ ಕೆಲಸ ನೋಡಿಕೊಂಡು ಸುಮ್ಮನಿರಬೇಕು ಎಂದು ಮಾಜಿ ಸಚಿವ ರುದ್ರಪ್ಪ ಲಮಾಣಿ, ಜಿಪಂ ಮಾಜಿ ಅಧ್ಯಕ್ಷ ಕೊಟ್ರೇಶಪ್ಪ ಬಸೇಗಣ್ಣಿ ಅವರಿಗೆ ಶಾಸಕ ನೆಹರು ಓಲೇಕಾರ ಎಚ್ಚರಿಸಿದರು.

ಬಿಜೆಪಿ ಉಪಾಧ್ಯಕ್ಷೆ ಭಾರತಿ ಮಲ್ಲಿಕಾರ್ಜುನ, ಕೆಸಿಸಿ ಬ್ಯಾಂಕ್ ನಿರ್ದೇಶಕ ಮುತ್ತಣ್ಣ ಯಲಿಗಾರ, ಎಪಿಎಂಸಿ ಸದಸ್ಯ ರುದ್ರೇಶ ಚಿನ್ನಣ್ಣನವರ, ನಾಗರಾಜ ಕೋಣನವರ, ಮಾಲತೇಶ ಬನ್ನಿಮಟ್ಟಿ, ಫಕ್ಕಿರಗೌಡ ಬಿಷ್ಟನಗೌಡ್ರ, ನಾಗರಾಜ ಬಸೇಗಣ್ಣಿ, ಪ್ರಭು ಹಿಟ್ನಳ್ಳಿ, ಮುತ್ತಯ್ಯ ಕಿತ್ತೂರಮಠ, ಬಾಬುಸಾಬ ಮೋಮಿನಗಾರ ಇತರರಿದ್ದರು. ಕೆ.ಸಿ. ಕೋರಿ ನಿರ್ವಹಿಸಿದರು.

ವಿಡಿಯೋ ನ್ಯೂಸ್

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...

VIDEO| ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ;...

ಮಂಗಳೂರು: ಬಜಪೆ ಬಳಿಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಶ್ರಾಂತಿ ಜಾಗದಲ್ಲಿ ಅನುಮಾನಾಸ್ಪದ ಬ್ಯಾಗ್​ನಲ್ಲಿ ಸಜೀವ ಬಾಂಬ್​ ಪತ್ತೆಯಾಗಿದೆ. ಏರ್ ಪೋರ್ಟ್ ಹೊರಭಾಗದಲ್ಲಿರುವ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಬ್ಯಾಗ್​ ಪತ್ತೆಯಾಗಿದ್ದು, ಬೆಳಗ್ಗೆ 10.30ರಿಂದ ಅದು...

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...