ಕುರುಬ ಸಮುದಾಯವನ್ನು ಎಸ್ಟಿಗೆ ಸೇರಿಸುವಂತೆ ರಾಜ್ಯ ಸರ್ಕಾರದಿಂದ ಶಿಫಾರಸು

Vidhanasoudha
Published on

ಬೆಂಗಳೂರು: ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ(ST) ಸೇರಿಸುವಂತೆ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಶಿಫಾರಸು ಮಾಡಿದೆ.

ಮಂಗಳವಾರ ನಡೆದ ಸಚಿವ ಸಂಪು ಸಭೆಯಲ್ಲಿ ಈ ಕುರಿತು ನಿರ್ಧಾರ ಮಾಡಲಾಗಿದ್ದು, ಈ ಸಂಬಂಧ STಗೆ ಸೇರಿಸುವಂತೆ ಶಿಫಾರಸು ಪತ್ರವನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗಿದೆ.

Recommondation Letter

ಈ ಹಿಂದೆ 2020-21ರಲ್ಲಿ ಸಮುದಾದ ಮುಖಂಡರು, ಸ್ವಾಮೀಜಿಗಳು ಕುರುಬ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಆಗ್ರಹಿಸಿ ಬೃಹತ್​ ಸಂಖ್ಯೆಯಲ್ಲಿ ಪಾದಯಾತ್ರೆ ನಡೆಸಿದ್ದರು. ಈ ಸಂಬಂಧ ವರದಿ ತಯಾರಿಸುವಂತೆ ಕರ್ನಾಟಕ ರಾಜ್ಯ ಬುಡಕಟ್ಟು ಸಂಸ್ಥೆಗೆ ಅಂದಿನ ಸರ್ಕಾರ ಸೂಚಿಸಿತ್ತು.

ಕರ್ನಾಟಕ ರಾಜ್ಯ ಬುಡಕಟ್ಟು ಸಂಸ್ಥೆ ನವರದಿ ನೀಡಿದ್ದು, ಇದರಲ್ಲಿನ ಶಿಫಾರಸುಗಳನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಲು ಮಂಗಳವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net