86ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ದಿನಾಂಕ ನಿಗದಿ

Kannada Sahitya
Published on

ಬೆಂಗಳೂರು: ಎಂಭತ್ತಾರನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು 2021ರ ಫೆಬ್ರವರಿಯಲ್ಲಿ ಆಯೋಜಿಸಲು ಕನ್ನಡ ಸಾಹಿತ್ಯ ಪರಿಷತ್ತು ನಿರ್ಧರಿಸಿದೆ.

2021ರ ಫೆಬ್ರವರಿ 26,27 ಹಾಗೂ 28ರಂದು ಹಾವೇರಿಯಲ್ಲಿ 86ನೇ ಸಮ್ಮೇಳನ ನಡೆಸಲು ತೀರ್ಮಾನಿಸಲಾಗಿದೆ.
ಕಸಾಪ ಅಧ್ಯಕ್ಷ ಡಾ. ಮನು ಬಳಿಗಾರ್ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಕುರಿತು ನಿರ್ಧಾರ ಮಾಡಲಾಗಿದೆ.


ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕೃಷಿ ಸಚಿವ ಬಿ.ಸಿ. ಪಾಟೀಲ ಹಾಗೂ ಹಾವೇರಿ ಶಾಸಕ ನೆಹರೂ ಓಲೇಕಾರ್ ಅವರೊಂದಿಗೆ ದಿನಾಂಕ ನಿಗದಿಪಡಿಸುವ ಕುರಿತು ಚರ್ಚಿಸಿದ ನಂತರ ಈ ನಿರ್ಧಾರ ಕೈಗೊಳ್ಳಲಾಗಿದೆ.



ಕರೊನಾ ಸೋಂಕು ಇಳಿಮುಖವಾಗಿದ್ದು, ಮಾರ್ಗಸೂಚಿಗಳನ್ನು ಸಡಿಲಗೊಳಿಸಿ ಅಕ್ಷರಜಾತ್ರೆಗೆ ಅನುವು ಮಾಡಿಕೊಡುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಮನವಿ ಮಾಡಲಾಗುತ್ತದೆ ಎಂದು ಮನು ಬಳಿಗಾರ್ ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net