More

    ರಾಜ್ಯ ಸರ್ಕಾರ ಎಸ್​ಐಟಿ ರಚಿಸಲಿ-ಶೆಟ್ಟರ್

    ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ: ಅಲ್ಪಸಂಖ್ಯಾತರ ತುಷ್ಟೀಕರಣ ನೀತಿಯಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ವಿದ್ಯಾರ್ಥಿನಿ ನೇಹಾಳ ಹತ್ಯೆ ವ್ಯವಸ್ಥಿತ ರೀತಿಯಲ್ಲಿ ನಡೆದಿದ್ದು, ವಿಶೇಷ ತನಿಖಾ ತಂಡ ರಚಿಸಿ ಆಮೂಲಾಗ್ರ ತನಿಖೆ ನಡೆಯಬೇಕು ಎಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ಆಗ್ರಹಿಸಿದರು.

    ನಗರದ ಬಿಡನಾಳದಲ್ಲಿರುವ ಮೃತ ನೇಹಾ ಹಿರೇಮಠ ಮನೆಗೆ ಶನಿವಾರ ಭೇಟಿ ನೀಡಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೃತಳ ಕುಟುಂಬದವರನ್ನು ಮುಖ್ಯಮಂತ್ರಿಯವರು ಭೇಟಿ ನೀಡಿ ಸಾಂತ್ವನ ಹೇಳಬೇಕಿತ್ತು. ಮುಖ್ಯಮಂತ್ರಿ ಹಾಗೂ ಗೃಹ ಸಚಿವರು ಬೇರೆ ಮೂಲಗಳಿಂದ ಮಾಹಿತಿ ಸಂಗ್ರಹಿಸದೇ ಅಧಿಕಾರಿಗಳು ನೀಡಿದ ಮಾಹಿತಿಯನ್ನೇ ಪುನರುಚ್ಚರಿಸುತ್ತಿದ್ದಾರೆ. ತುಷ್ಟೀಕರಣ ನೀತಿಗೆ ಜೋತು ಬಿದ್ದಿದ್ದಾರೆ. ಅವರ ಹೇಳಿಕೆ ಗಮನಿಸಿದರೆ ಪ್ರಕರಣ ಮುಚ್ಚಿಹಾಕುವ ಆತಂಕವಿದೆ ಎಂದು ಹೇಳಿದರು.

    ಸರ್ಕಾರ ಸರಿ ಇಲ್ಲದಾಗ ಇಂಥ ದುರ್ಘಟನೆಗಳು ನಡೆಯುತ್ತವೆ. ಉತ್ತರ ಪ್ರದೇಶ ಈ ಹಿಂದೆ ಗೂಂಡಾ ರಾಜ್ಯವಾಗಿತ್ತು. ಯೋಗಿ ಆದಿತ್ಯನಾಥ ಅವರು ಮುಖ್ಯಮಂತ್ರಿಯಾದ ನಂತರ ಬಿಗಿ ಆಡಳಿತ ಜಾರಿಗೆ ಬಂದಿತು. ಈಗ ಅಲ್ಲಿಯ ಜನ ಶಾಂತಿಯಿಂದ ಇದ್ದಾರೆ. ಈ ಪ್ರಕರಣದಲ್ಲಿ ಹಂತಕನನ್ನು ಬಂಧಿಸಲಾಗಿದೆಯೇ ಹೊರತೆ ಕೊಲೆಗೆ ಕಾರಣ, ಆತನ ಹಿನ್ನೆಲೆ ಕುರಿತು ವಿಚಾರಣೆ ನಡೆಸಿಲ್ಲ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts