More

    ರಾಜ್ಯ ಹೆದ್ದಾರಿಗಳ ನಿರ್ವಹಣೆಗೆ ಆದ್ಯತೆ; ವಿಜಯವಾಣಿ ವರದಿ ಹಿನ್ನೆಲೆಯಲ್ಲಿ ಸಚಿವಾಲಯಕ್ಕೆ ಶೋಭಾ ಕರಂದ್ಲಾಜೆ ಒತ್ತಡ

    ಬೆಂಗಳೂರು: ರಾಜ್ಯದ ರಾಷ್ಟ್ರೀಯ ಹೆದ್ದಾರಿಗಳ ಅವ್ಯವಸ್ಥೆಯನ್ನು ತೆರೆದಿಟ್ಟ ವಿಜಯವಾಣಿ ವರದಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸ್ಪಂದಿಸಿದ್ದಾರೆ. ‘ಹದಗೆಟ್ಟ ರಾಷ್ಟ್ರೀಯ ಹೆದ್ದಾರಿ’ ಶೀರ್ಷಿಕೆಯಡಿ ಬುಧವಾರ ಪ್ರಕಟಗೊಂಡ ವರದಿಯನ್ನು ಗಂಭೀರವಾಗಿ ಪರಿಗಣಿಸಿರುವ ಅವರು, ರಾಷ್ಟ್ರೀಯ ಹೆದ್ದಾರಿಗಳ ಸಮರ್ಪಕ ನಿರ್ವಹಣೆ, ತುರ್ತು ದುರಸ್ತಿ ಕಾಮಗಾರಿ ಕೈಗೊಳ್ಳುವುದು ಹಾಗೂ ಅಪಘಾತ ವಲಯಗಳನ್ನು ಸಮೀಕ್ಷೆ ಮೂಲಕ ಗುರುತಿಸಿ ಸಂಬಂಧಿಸಿದ ಸಚಿವಾಲಯಕ್ಕೆ ವರದಿ ಸಲ್ಲಿಸಿ ಪರಿಹಾರ ಕ್ರಮಕೈಗೊಳ್ಳಲು ಒತ್ತಾಯಿಸುವುದಾಗಿ ಭರವಸೆ ನೀಡಿದ್ದಾರೆ.

    ಹೆದ್ದಾರಿಗಳ ದುಸ್ಥಿತಿಯಿಂದ ಸಾರ್ವಜನಿಕರು, ಪ್ರಯಾಣಿಕರು ಸೇರಿ ಅನೇಕರಿಗೆ ಆಗುತ್ತಿರುವ ತೊಂದರೆ ತಪ್ಪಿಸುವ ನಿಟ್ಟಿನಲ್ಲಿ ಹೆಜ್ಜೆ ಇಡುವುದಾಗಿಯೂ ಶೋಭಾ ತಿಳಿಸಿದರು.

    ಮರು ಸಮೀಕ್ಷೆ: ಹೆದ್ದಾರಿಗಳಲ್ಲಿರುವ ಅಪಘಾತ ವಲಯಗಳ ಬಗ್ಗೆ 3 ವರ್ಷಗಳ ಹಿಂದೆ ಸ್ಥಳೀಯ ಸಂಚಾರಿ ಪೊಲೀಸ್ ಇಲಾಖೆಯಿಂದ ಸಮೀಕ್ಷೆ ಮಾಡಿಸಿ ವರದಿ ಸಲ್ಲಿಸಲಾಗಿತ್ತು. 2020ರಲ್ಲಿ ಬಿಡುಗಡೆ ಮಾಡಲಾದ ಪಟ್ಟಿಯಲ್ಲಿ ಕರ್ನಾಟಕ 551 ಬ್ಲಾ್ಯಕ್ ಸ್ಪಾಟ್ ಹೊಂದುವ ಮೂಲಕ ದೇಶದಲ್ಲಿ 3ನೇ ಅಪಘಾತ ಪೀಡಿತ ಪ್ರದೇಶಗಳ ರಾಜ್ಯವಾಗಿ ಗುರುತಿಸಿಕೊಂಡಿತ್ತು.

    ದ್ವಿಚಕ್ರವಾಹನದಲ್ಲಿ 4 ವರ್ಷದೊಳಗಿನ ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯ; ವೇಗ ಮಿತಿ ಕೂಡ ಅನ್ವಯ…

    ಆನ್​ಲೈನ್​ ಫ್ರೆಂಡ್​ ಜತೆ ಕಷ್ಟ ಹೇಳ್ಕೊಂಡಿದ್ದಕ್ಕೆ 86 ಲಕ್ಷ ರೂ. ಕಳ್ಕೊಂಡ; ಅದೃಷ್ಟವಶಾತ್​ ಕಿಡ್ನಿ ಉಳೀತು..

    ಇವುಗಳಲ್ಲಿ ಎಷ್ಟು ಪ್ರದೇಶಗಳನ್ನು ಅಭಿವೃದ್ಧಿ ಮಾಡಲಾಗಿದೆ ಮತ್ತು ಬಾಕಿ ಎಷ್ಟಿದೆ ಎಂದು ತಿಳಿದುಕೊಳ್ಳಲಾಗುತ್ತದೆ. ಜತೆಗೆ, ಎಲ್ಲ 30 ಜಿಲ್ಲೆಗಳ ಹೆದ್ದಾರಿಗಳಲ್ಲಿ ಪ್ರಸ್ತುತ ಇರುವ (ಬಾಕಿ ಮತ್ತು ಹೊಸ ಪ್ರದೇಶಗಳು ಒಳಗೊಂಡು) ಅಪಘಾತ ಪೀಡಿತ ಸ್ಥಳ ಗುರುತಿಸಿ ವರದಿ ನೀಡಲು ಜಿಲ್ಲಾವಾರು ಪೊಲೀಸ್ ಇಲಾಖೆಗೆ ಸೂಚಿಸಲಾಗುತ್ತದೆ ಎಂದರು.

    ಅಭಿವೃದ್ಧಿ ಪ್ರಮಾಣ ಅಧಿಕ: ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ದೇಶದ ಪ್ರತಿಯೊಂದು ಗ್ರಾಮೀಣ ಪ್ರದೇಶಗಳನ್ನೂ ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಭಾರತ್​ವಾಲಾ ಯೋಜನೆ ರೂಪಿಸಿ ಜಾರಿಗೆ ತಂದಿದ್ದಾರೆ. ಈ ಹಿಂದೆ ದಿನವೊಂದಕ್ಕೆ 22 ಕಿ.ಮೀ ಹೆದ್ದಾರಿ ಕಾಮಗಾರಿ ಪೂರ್ಣಗೊಳ್ಳುತ್ತಿತ್ತು. ಪ್ರಸ್ತುತ ದಿನವೊಂದಕ್ಕೆ 33 ಕಿ.ಮೀ ರಸ್ತೆ ಅಭಿವೃದ್ಧಿ ಮಾಡಲಾಗುತ್ತಿದ್ದು, ವೇಗವಾಗಿ ಕಾಮಗಾರಿ ಮಾಡುತ್ತಿರುವುದಕ್ಕೆ ಸಾಕ್ಷಿಯಾಗಿದೆ. 2021-22ನೇ ಸಾಲಿನಲ್ಲಿ ಏ.1 ರಿಂದ ಡಿ.31ರವರೆಗೆ 5,835 ಕಿ.ಮೀ ರಸ್ತೆ ಅಭಿವೃದ್ಧಿ ಮಾಡಲಾಗಿದೆ. ಕರ್ನಾಟಕದ ರಾಜ್ಯ ರಸ್ತೆಗಳನ್ನು ಹೆದ್ದಾರಿಗಳನ್ನಾಗಿ ಮೇಲ್ದರ್ಜೆಗೇರಿಸಲಾಗಿದ್ದು, ಕೆಲವು ಕಾಮಗಾರಿ ಪ್ರಗತಿಯಲ್ಲಿವೆ. ರಸ್ತೆ ನಿರ್ವಹಣೆ ಕೊರತೆ ಮತ್ತು ದುರಸ್ತಿ ಬಗ್ಗೆಯೂ ಆದ್ಯತೆ ನೀಡಲು ಒತ್ತಾಯಿಸಲಾಗುವುದು ಎಂದು ಶೋಭಾ ಕರಂದ್ಲಾಜೆ ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts