More

    ಕೇಂದ್ರ ಮಾದರಿ ವೇತನ ಘೋಷಣೆ, ರಾಜ್ಯ ಸರ್ಕಾರಿ ನೌಕರರಿಗೆ ಸಂತಸ

    ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನದ ವಿಚಾರದಲ್ಲಿ ಸರ್ಕಾರ ಐತಿಹಾಸಿಕ ನಿರ್ಣಯವೊಂದನ್ನು ಕೈಗೊಂಡಿದ್ದು, ಕರ್ನಾಟಕದ ಲಕ್ಷಾಂತರ ನೌಕರರಿಗೆ ಸಂತೋಷವನ್ನು ಉಂಟುಮಾಡಿದೆ.

    ರಾಜ್ಯ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆಯಂತೆ ಕೇಂದ್ರ ಸರ್ಕಾರಿ ನೌಕರರಿಗೆ ಸಮಾನಾಂತರವಾಗಿ ವೇತನ ಪರಿಷ್ಕರಿಸಲು ಮುಂದಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಆ ನಿಟ್ಟಿನಲ್ಲಿ ಆಯೋಗವೊಂದನ್ನು ರಚಿಸುವುದಾಗಿ ತಿಳಿಸಿದ್ದಾರೆ.

    ಬುಧವಾರ ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಗೆ ಉತ್ತರಿಸುತ್ತ ಮುಖ್ಯಮಂತ್ರಿಯವರು ಈ ಘೋಷಣೆಯನ್ನು ಮಾಡಿದ್ದು, ಬೊಮ್ಮಾಯಿಯವರ ಈ ನಿರ್ಧಾರಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ನೌಕಕರ ಸಂಘವು ಸಂತೋಷ ವ್ಯಕ್ತಪಡಿಸಿ ಅಭಿನಂದನೆಗಳನ್ನು ಸಲ್ಲಿಸಿದೆ.

    ಸಮಾನ ಕೆಲಸಕ್ಕೆ ಸಮಾನ ವೇತನ ಎಂಬುದು ನಮ್ಮ ಬಹುದಿನಗಳ ಕನಸಾಗಿತ್ತು. ಇದೀಗ ಸರ್ಕಾರ ರಾಜ್ಯ ಸರ್ಕಾರಿ ನೌಕರರಿಗೆ ಕೇಂದ್ರ ಮಾದರಿ ವೇತನ ಘೋಷಣೆ ಮಾಡಿರುವುದರಿಂದ ನಮ್ಮ ಕನಸು ಬಹುತೇಕ ನನಸಾದಂತಾಗಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ತಿಳಿಸಿದ್ದಾರೆ.

    ಇದನ್ನೂ ಓದಿ: ಯೂಕ್ರೇನ್​ನಲ್ಲಿ ಮೃತಪಟ್ಟ ನವೀನ್​; 20 ದಿನಗಳ ಬಳಿಕ ಪಾರ್ಥಿವ ಶರೀರ ಮನೆಗೆ…

    ಮಾಜಿ ಸಿಎಂ ಬಿ.ಎಸ್​. ಯಡಿಯೂರಪ್ಪ ಅವರು 7ನೇ ವೇತನ ಆಯೋಗದ ಅನ್ವಯ ಸಂಬಳ ಹೆಚ್ಚಿಸುವಂತೆ ಬಜೆಟ್​​ಗೂ ಮುನ್ನವೇ ಮುಖ್ಯಮಂತ್ರಿಯವರಿಗೆ ಪತ್ರ ಬರೆದು ಸರ್ಕಾರಿ ನೌಕರರ ಪರವಾಗಿ ಒತ್ತಡ ಹೇರಿದ್ದರು. ಅದಾಗ್ಯೂ ಬಜೆಟ್​ನಲ್ಲಿ ಅದರ ಪ್ರಸ್ತಾಪ ಮಾಡದ್ದರಿಂದ ಬಿಎಸ್​ವೈ ಅಸಮಾಧಾನ ವ್ಯಕ್ತಪಡಿಸಿದ್ದರು. ಬಳಿಕ ಬಜೆಟ್​ ಚರ್ಚೆ ಸಂದರ್ಭದಲ್ಲಿ ಉತ್ತರಿಸುವಾಗ ಸಿಎಂ ಈ ಘೋಷಣೆ ಮಾಡಿದ್ದಾರೆ. ಇದರಿಂದ ರಾಜ್ಯದ 6 ಲಕ್ಷ ನೌಕರರ ಕುಟುಂಬ ನೆಮ್ಮದಿಯ ಹಾಗೂ ಘನತೆಯ ಬದುಕು ಸಾಗಿಸಲು ಸಾಧ್ಯವಾಗಲಿದೆ ಎಂದು ಷಡಾಕ್ಷರಿ ಸಂತೋಷ ವ್ಯಕ್ತಪಡಿಸಿದ್ದಾರೆ.

    ಇದನ್ನೂ ಓದಿ: ಯೂಕ್ರೇನ್​ನಲ್ಲಿ ಮೃತಪಟ್ಟ ನವೀನ್ ಅಂತಿಮ ದರ್ಶನಕ್ಕೆ ಅವಕಾಶ, ದೇಹದಾನ ಮಾಡಲು ನಿರ್ಧಾರ..

    ನಮ್ಮ ಈ ಕನಸು ನನಸಾಗಲು ಒತ್ತಡ ಹೇರಿದ ಮಾಜಿ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಮತ್ತು ಅದನ್ನು ಪರಿಗಣಿಸಿ ಸಕಾರಾತ್ಮಕವಾಗಿ ಸ್ಪಂದಿಸಿದ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಧನ್ಯವಾದಗಳನ್ನು ಸಲ್ಲಿಸಿರುವ ಷಡಾಕ್ಷರಿ, ಇಂಥದ್ದೊಂದು ಬೇಡಿಕೆ ಈಡೇರಿಸಿಕೊಳ್ಳುವಲ್ಲಿ ಒಕ್ಕೊರಲಿನಿಂದ ಬೆಂಬಲಿಸಿದ ಎಲ್ಲ ಶಾಸಕರು, ಹಿರಿಯ ಅಧಿಕಾರಿಗಳು ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘದ ಎಲ್ಲ ಪದಾಧಿಕಾರಿಗಳು ಮತ್ತು ಸಮಸ್ತ ನೌಕರರ ವೃಂದಕ್ಕೆ ಧನ್ಯವಾದಗಳನ್ನೂ ತಿಳಿಸಿದ್ದಾರೆ.

    ಹೋಳಿ ಆಡಲು ಹೋದವನಿಗೆ ಶಾಕ್​; ಆಟಕ್ಕೂ ಮುನ್ನ ಪ್ರಾಣ ಕಳೆದುಕೊಂಡ ಬಾಲಕ..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts