More

    Cotton candy ban: ಮಕ್ಕಳ ಫೇವರಿಟ್‌ ಬಾಂಬೆ ಮಿಠಾಯಿ ಕರ್ನಾಟಕದಲ್ಲಿ ಬ್ಯಾನ್‌ ಆಗಲಿದೆಯಾ?

    ಬೆಂಗಳೂರು: ಗುಲಾಬಿ ಬಣ್ಣದ ಸಿಹಿ ತಿನಿಸು ಕಾಟನ್ ಕ್ಯಾಂಡಿ ಅಥವಾ ಅಜ್ಜಿ ಕೂದಲು ಅಥವಾ ಬಾಂಬೆ ಮಿಠಾಯಿಯಲ್ಲಿ ಕ್ಯಾನ್ಸರ್ ಉಂಟುಮಾಡುವ ರೋಡಮೈನ್-ಬಿ ಎಂಬ ಬಣ್ಣ ಪತ್ತೆಯಾದ ನಂತರ ಇತ್ತೀಚೆಗಷ್ಟೇ ಪುದುಚೇರಿ ಮತ್ತು ತಮಿಳುನಾಡು ಸರ್ಕಾರಗಳು ಕಾಟನ್ ಕ್ಯಾಂಡಿ ಉತ್ಪಾದನೆ ಮತ್ತು ಮಾರಾಟವನ್ನು ನಿಷೇಧಿಸಲು ನಿರ್ಧರಿಸಿದವು.

    ಇದೀಗ ಕರ್ನಾಟಕ ಸರ್ಕಾರವೂ ಕಾಟನ್ ಕ್ಯಾಂಡಿ ಮಾದರಿಗಳನ್ನು ಸಂಗ್ರಹಿಸಲು ಪ್ರಾರಂಭಿಸಿದೆ. ಕರ್ನಾಟಕದಲ್ಲೂ ಈ ಬಗ್ಗೆ ಚರ್ಚೆ ನಡೆಯುತ್ತಿದ್ದು, ಕ್ಯಾಟನ್ ಕ್ಯಾಂಡಿ ಮಾದರಿಗಳನ್ನು ಪರೀಕ್ಷಿಸಲಾಗುತ್ತಿದೆ. ಈಗಾಗಲೇ ರಾಜ್ಯದಾದ್ಯಂತ ವ್ಯಾಪಾರ ಮೇಳಗಳು, ಮದುವೆಗಳು ಮತ್ತು ಉದ್ಯಾನವನಗಳು ಸೇರಿದಂತೆ ವಿವಿಧ ಸ್ಥಳಗಳಿಂದ ಕಾಟನ್ ಕ್ಯಾಂಡಿಯ ಮಾದರಿಗಳನ್ನು ಸಂಗ್ರಹಿಸಲಾಗಿದೆ.

    ಇದರಲ್ಲಿರುವ ರಾಸಾಯನಿಕ ಯಾವುದು?
    ವರದಿಯ ಪ್ರಕಾರ, ಕಾಟನ್ ಕ್ಯಾಂಡಿಯನ್ನು ಪರೀಕ್ಷಿಸಿದಾಗ ಅದರಲ್ಲಿ ರೋಡಮೈನ್-ಬಿ ಎಂಬ ರಾಸಾಯನಿಕ ಅಂಶವಿರುವುದು ಕಂಡುಬಂದಿದೆ. ಇದನ್ನು ಹೆಚ್ಚಾಗಿ ಜವಳಿ ಉದ್ಯಮದಲ್ಲಿ ಬಳಸಲಾಗುತ್ತದೆ. ಇದು ಕಾಟನ್ ಕ್ಯಾಂಡಿ ಮೂಲಕ ನಮ್ಮ ದೇಹವನ್ನು ಪ್ರವೇಶಿಸಿದರೆ, ಅದು ದೇಹಕ್ಕೆ ದೊಡ್ಡ ಹಾನಿಯನ್ನುಂಟುಮಾಡುತ್ತದೆ ಎಂದು ತಜ್ಞರು ಹೇಳುತ್ತಾರೆ. ಇದನ್ನು ದೀರ್ಘಕಾಲದವರೆಗೆ ಸೇವಿಸುವುದರಿಂದ ಕ್ಯಾನ್ಸರ್ ಕೂಡ ಉಂಟಾಗುತ್ತದೆ.

    ಪರೀಕ್ಷೆಯ ಫಲಿತಾಂಶಗಳ ನಂತರ ಅದರ ನಿಷೇಧದ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಜಂಟಿ ಆಯುಕ್ತ ಡಾ.ಹರೀಶ್ವರ ಮಾಹಿತಿ ನೀಡಿದ್ದಾರೆ. ಆಹಾರ ಸುರಕ್ಷತಾ ಆಯುಕ್ತ ಡಿ ರಂದೀಪ್, ಕಾಟನ್ ಕ್ಯಾಂಡಿ ಮಾದರಿಗಳ ಸಂಗ್ರಹವನ್ನು ಪ್ರಾರಂಭಿಸಿದ್ದಾರೆ. ನಾವು ಟೆಸ್ಟ್ ರಿಸಲ್ಟ್ ನೋಡುತ್ತೇವೆ. ಆರೋಗ್ಯ ಕಮಿಷನರೇಟ್‌ನಿಂದಲೂ ನಾವು ತೆಗೆದುಕೊಳ್ಳಬೇಕಾದ ಕ್ರಮಗಳನ್ನು ಮೌಲ್ಯಮಾಪನ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

    ಕಾಟನ್ ಕ್ಯಾಂಡಿಗೆ ಹಾಕಿರುವ ಪದಾರ್ಥಗಳು ಆರೋಗ್ಯಕ್ಕೆ ಅಪಾಯ ಉಂಟುಮಾಡುತ್ತವೆ. ಸ್ಲೋ ಪಾಯ್ಸನ್ ಆಗಿ ಕಾರ್ಯನಿರ್ವಹಿಸುತ್ತವೆ. ಆದ್ದರಿಂದ ಅಂತಹ ಆಹಾರಗಳನ್ನು ಸೇವಿಸುವುದನ್ನು ತಪ್ಪಿಸುವುದು ಸೂಕ್ತ ಎಂದು ಆರೋಗ್ಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

    ತೃತೀಯ ಲಿಂಗಿಗಳಿಗೆ ಕೊಟ್ಟ ಮಾತು ಉಳಿಸಿಕೊಳ್ಳದ ರಾಜ್ಯ ಸರ್ಕಾರ: ಆರೋಪ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts