More

     ಶಿಗ್ಗಾಂವಿಯಲ್ಲಿ ರಾಜ್ಯಮಟ್ಟದ ಕುಸ್ತಿ ಹಬ್ಬಕ್ಕೆ ಚಾಲನೆ

    ಶಿಗ್ಗಾಂವಿ(ಗ್ರಾ) ರಾಮಾಯಣ, ಮಹಾಭಾರತ ಸೇರಿದಂತೆ ರಾಜ-ಮಹಾರಾಜರ ಕಾಲದಿಂದ ಕುಸ್ತಿ ಪರಂಪರೆ ನಡೆದುಕೊಂಡು ಬಂದಿದೆ. ಕರ್ನಾಟಕದಲ್ಲಿಯೂ ಒಳ್ಳೆಯ ಪೈಲ್ವಾನರಿದ್ದಾರೆ. ಕುಸ್ತಿ ಕ್ರೀಡೆಯನ್ನು ಉಳಿಸಿ ಬೆಳೆಸಿಕೊಂಡು ಹೋಗಬೇಕು ಎಂದು ಅಂತಾರಾಷ್ಟ್ರೀಯ ಪದಕ ವಿಜೇತ, ಮಾಜಿ ಕುಸ್ತಿಪಟು ಮಲಕರಾಜ್ ಶರ್ಮಾ ಹೇಳಿದರು.

    ಶಿಗ್ಗಾಂವಿ ಪಟ್ಟಣದ ರಂಭಾಪುರಿ ಜಗದ್ಗುರು ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಮೈದಾನದಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜ್ಯ ಭಾರತೀಯ ಶೈಲಿಯ ಕುಸ್ತಿ ಸಂಘ ಹಾಗೂ ಜಿಲ್ಲೆಯ ಪೈಲ್ವಾನರ ಸಹಯೋಗದಲ್ಲಿ ಆಯೋಜಿಸಿರುವ ರಾಜ್ಯ ಮಟ್ಟದ ತೃತೀಯ ಕರ್ನಾಟಕ ಕುಸ್ತಿ ಹಬ್ಬ ಉದ್ಘಾಟಿಸಿ ಅವರು ಮಾತನಾಡಿದರು.

    </p><p>ಈ ಕ್ಷೇತ್ರದಲ್ಲಿ ನಾನು 40 ವರ್ಷಕ್ಕಿಂತ ಅಧಿಕ ಕಾಲದಿಂದ ಕೆಲಸ ಮಾಡುತ್ತಿದ್ದು, ಪೈಲ್ವಾನರಿಗೆ ತರಬೇತಿ ನೀಡುತ್ತಿದ್ದೇನೆ. ಕೆಲವರು ಕುಸ್ತಿಯನ್ನು ಬದಲು ಮಾಡಲು ಪ್ರಯತ್ನಿಸಿದರು. ಆದರೆ, ಈ ಎಲ್ಲವನ್ನೂ ಮೀರಿ ಕುಸ್ತಿ ಬೆಳೆದಿದೆ. ಈ ಕ್ರೀಡೆ ಹೆಚ್ಚು ಜನಪ್ರಿಯತೆ ಹೊಂದುತ್ತಿರುವುದರಿಂದ ಇನ್ನಷ್ಟು ಅಭಿವೃದ್ಧಿ ಪಡಿಸಬೇಕು ಎಂದರು.</p><p>ಬ್ಯಾಡಗಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಮಾತನಾಡಿ, ದೇಶಿ ಕ್ರೀಡೆಗಳು ನಾಶವಾಗುತ್ತಿರುವ ಇಂತಹ ಸಂದರ್ಭದಲ್ಲಿ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ ಆಯೋಜಿಸಿರುವುದು ಶ್ಲಾಘನೀಯ. ಗ್ರಾಮೀಣ ಕ್ರೀಡೆಗಳನ್ನು ಜೀವಂತವಾಗಿರಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಯತ್ನಿಸುತ್ತಿದ್ದಾರೆ ಎಂದರು.

    ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಉಪಾಧ್ಯಕ್ಷ ಶಿವಾನಂದ ಮ್ಯಾಗೇರಿ ಮಾತನಾಡಿ, ಗ್ರಾಮೀಣ ಕ್ರೀಡೆಗಳಿಗೆ ಬಲ ನೀಡುವ ಉದ್ದೇಶದಿಂದ ಯುವಕರನ್ನು ಸಬಲೀಕರಣಗೊಳಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯ ಮಟ್ಟದ ಕುಸ್ತಿ ಸ್ಪರ್ಧೆಯನ್ನು ಆಯೋಜಿಸಿದ್ದಾರೆ ಎಂದರು. ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ, ಪುರಸಭೆ ಅಧ್ಯಕ್ಷೆ ರೂಪಾ ಬನ್ನಿಕೊಪ್ಪ, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಕ್ಷಯ ಶ್ರೀಧರ ಮಾತನಾಡಿದರು. ನರಹರಿ ಕಟ್ಟಿ, ಹಿರಿಯ ಕುಸ್ತಿ ತರಬೇತುದಾರರಾದ ಶಿವಾನಂದ, ತುಕಾರಾಂ ಗೌಡ, ಕಾಲೇಶ ನ್ಯಾಮಗೌಡ ಇದ್ದರು.

     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts