ಜ್ಞಾನಸುಧಾ ಕಾಲೇಜಿನ ಮೂವರು ರಾಜ್ಯಮಟ್ಟಕ್ಕೆ

statelevel
ಯಶಸ್ವಿ, ನಿಹಾರ್ ಜೆ.ಎಸ್, ಸಾತ್ವಿಕ್ ಬಿ. ಆಚಾರ್ಯ
Published on

ಕಾರ್ಕಳ: ಪದವಿ ಪೂರ್ವ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಕೋಟೇಶ್ವರದ ಸರ್ಕಾರಿ ಪ.ಪೂ. ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ ಚೆಸ್ ಟೂರ್ನಿಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಯಶಸ್ವಿ ಪ್ರಥಮ ಸ್ಥಾನ ಪಡೆದಿದ್ದಾರೆ. ನಿಹಾರ್ ಜೆ.ಎಸ್ ನಾಲ್ಕನೇ, ಸಾತ್ವಿಕ್ ಬಿ. ಆಚಾರ್ಯ 5ನೇ ಸ್ಥಾನ ಪಡೆಯುವ ಮೂಲಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕಿ ಸೌಜನ್ಯ ಹೆಗ್ಡೆ ತರಬೇತಿ ನೀಡಿದ್ದಾರೆ. ಸಾಧಕ ವಿದ್ಯಾರ್ಥಿಗಳನ್ನು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ಅಧ್ಯಕ್ಷ ಡಾ.ಸುಧಾಕರ್ ಶೆಟ್ಟಿ ಅಭಿನಂದಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net