More

  ರಾಜ್ಯಮಟ್ಟದ ಸಮಾವೇಶ ಇಂದು

  ಹುಬ್ಬಳ್ಳಿ: ಸಾಮರ್ಥ್ಯ ಸಂಸ್ಥೆಯ ಸಹಯೋಗದಲ್ಲಿ ಸಾರಥ್ಯ ಕರ್ನಾಟಕ ರಾಜ್ಯಮಟ್ಟದ ವಿಶಿಷ್ಟ ಲೈಂಗಿಕತೆ ಗುರುತಿಸುವಿಕೆಯ ಸಮುದಾಯಗಳ 12ನೇ ವರ್ಷದ ರಾಜ್ಯಮಟ್ಟದ ಸಮಾವೇಶವನ್ನು ಜ. 24ರಂದು ಬೆಳಗ್ಗೆ 10.30ಕ್ಕೆ ಧಾರವಾಡದ ಕರ್ನಾಟಕ ಕುಲಪುರೋಹಿತ ಆಲೂರ ವೆಂಕಟರಾವ್ ಸಾಂಸ್ಕೃತಿಕ ಸಭಾ ಭವನದಲ್ಲಿ ಏರ್ಪಡಿಸಲಾಗಿದೆ ಎಂದು ಸಂಸ್ಥೆಯ ಕಾರ್ಯಕಾರಿ ಸಮಿತಿ ಸದಸ್ಯ ಕೆ. ತ್ರಿಮೂರ್ತಿ ಹೇಳಿದರು.

  ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 28 ಜಿಲ್ಲೆಗಳಲ್ಲಿ ಸಮುದಾಯದ ರಕ್ಷಣೆ ಹಾಗೂ ಸಂಘಟನೆಯ ದೃಷ್ಟಿಯಿಂದ ಈ ಕಾರ್ಯಕ್ರಮ ಏರ್ಪಡಿಸಲಾಗಿದೆ. ಪ್ರಮುಖವಾಗಿ ಸಾರಥ್ಯ ವಿಶಿಷ್ಟ ಲೈಂಗಿಕತೆ ಸಮುದಾಯ ಕೋಥಿ, ಡಿಡಿ, ಬೈಸೆಕ್ಸೂ್ಯವಲ್​ನವರಿಗೆ ಆರ್ಥಿಕ, ಸಾಮಾಜಿಕ, ರಾಜಕೀಯ, ಸಾಂಸ್ಕೃತಿಕ ಸ್ಥಾನಮಾನಗಳಿಲ್ಲ. ಸಮಾಜದ ಮುಖ್ಯವಾಹಿನಿಯಲ್ಲಿ ಗೌರವದಿಂದ ಬದುಕಲು ಪೂರಕ ವಾತಾವರಣ ನಿರ್ವಿುಸುವ ಉದ್ದೇಶ ಹೊಂದಿದೆ. ಅಂದು 28 ಜಿಲ್ಲೆಗಳಿಂದ 200ಕ್ಕೂ ಹೆಚ್ಚು ಜನ ವಿಶಿಷ್ಟ ಲೈಂಗಿಕತೆ ಸಮುದಾಯದವರು ಭಾಗವಹಿಸಲಿದ್ದಾರೆ ಎಂದರು.

  ಸಮಾವೇಶದಲ್ಲಿ ಸಮುದಾಯಕ್ಕೆ ಸಂಬಂಧಿಸಿದಂತೆ ಒತ್ತಾಯದ ಮದುವೆ, ಗುರುತಿಸುಕೊಳ್ಳುವಿಕೆ, ಸವಾಲು ಮತ್ತು ಕಾನೂನು ವಿಷಯಗಳ ಚರ್ಚೆ, ಸಂವಾದ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿದೆ ಎಂದು ಹೇಳಿದರು.

  ಧಾರವಾಡ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶೆ ಕೆ.ಜಿ. ಶಾಂತಿ, ಹಿರಿಯ ಸಿವಿಲ್ ನ್ಯಾಯಾಧೀಶ ಪರಶುರಾಮ ದೊಡ್ಡಮನಿ ಕಾರ್ಯಕ್ರಮ ಉದ್ಘಾಟಿಸುವರು. ಪದ್ಮಶ್ರೀ ಡಾ. ಮಾತಾ ಮಂಜಮ್ಮ ಜೋಗತಿ ಅಧ್ಯಕ್ಷತೆ ವಹಿಸಲಿದ್ದಾರೆ. ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಎಸ್​ಪಿ ಡಾ. ಗೋಪಾಲ ಬ್ಯಾಕೋಡ, ಉಪ ವಿಭಾಗಾಧಿಕಾರಿ ಶಾಲಂ ಹುಸೇನ್, ಸಾಮಾಜಿಕ ಹೋರಾಟಗಾರ್ತಿ ಕೆ. ನೀಲಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಜಿ. ಪದ್ಮಾವತಿ ಸೇರಿದಂತೆ ಇತರ ಇಲಾಖೆಯ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

  ಜ. 25ರಂದು ಸಾರಥ್ಯ 2024-25 ಮತ್ತು 2025-26 ನೇ ಸಾಲಿನ ಕಾರ್ಯಕಾರಿ ಸಮಿತಿಗೆ ಚುನಾವಣೆ ನಡೆಯಲಿದೆ ಎಂದರು.

  ಪ್ರಮುಖರಾದ ಮಹೇಶ ಕದಂ, ದಿನೇಶ, ಪೆದ್ದಣ್ಣ ಕೋನಾಪುರ ಸುದ್ದಿಗೋಷ್ಠಿಯಲ್ಲಿದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts