ಕರಾಟೆಯಲ್ಲಿ ಮಧುರ ರಾಜ್ಯಮಟ್ಟಕ್ಕೆ ಆಯ್ಕೆ

madhura
ಮಧುರ
Published on

ಗಂಗೊಳ್ಳಿ: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಎಸ್‌ಎನ್‌ವಿ ಪದವಿ ಪೂರ್ವ ಕಾಲೇಜು ಕಾರ್ಕಳ ಆಶ್ರಯದಲ್ಲಿ ಕಾರ್ಕಳದಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಬಾಲಕ ಬಾಲಕಿಯರ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಕರಾಟೆ ಟೂರ್ನಿ 52 ಕೆಜಿ ವಿಭಾಗದಲ್ಲಿ ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿ ಮಧುರ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಶಿಕ್ಷಕ ಸುರೇಶ್ ಎಂ.ತಾಂಡೇಲ ಮತ್ತು ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷೆ ಚಂದ್ರಕಲಾ ಎಸ್.ತಾಂಡೇಲ ದಂಪತಿ ಪುತ್ರಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net