ಯೋಗಾಸನದಲ್ಲಿ ಪ್ರೀತಂ ರಾಜ್ಯಮಟ್ಟಕ್ಕೆ ಆಯ್ಕೆ

pritham
ಪ್ರೀತಮ್ ಪಿ.ಎಂ
Published on

ಕಾರ್ಕಳ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉಡುಪಿ ವಿದ್ಯೋದಯ ಪದವಿ ಪೂರ್ವ ಕಾಲೇಜು ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಪ್ರೀತಂ ಪಿಎಂ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಪ್ರೀತಂ ಅವರು ಬಿ.ತಿಪ್ಪೆಸ್ವಾಮಿ ಮತ್ತು ವಿಜಯಲಕ್ಷ್ಮೀ ಟಿ. ದಂಪತಿಯ ಪುತ್ರ. ಸಂಸ್ಥೆ ಅಧ್ಯಕ್ಷ ಡಾ.ಸುಧಾಕರ್ ಶೆಟ್ಟಿ, ಸಿಇಒ ಮತ್ತು ಪ್ರಾಂಶುಪಾಲ ದಿನೇಶ್ ಎಂ. ಕೊಡವೂರು ಅಭಿನಂದಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net