ದೂರದೃಷ್ಟಿ ಚಿಂತನೆಯಿಂದ ಪ್ರಪಂಚಕ್ಕೆ ಮಾದರಿ: ಅಭಯಚಂದ್ರ ಜೈನ್ ಸಲಹೆ

18-excelent
Published on

ವಿಜಯವಾಣಿ ಸುದ್ದಿಜಾಲ ಮೂಡುಬಿದಿರೆ

ಸಮುದಾಯದ ಯುವ ಜನರು ಶಿಸ್ತು, ಆತ್ಮವಿಶ್ವಾಸ, ನಾಯಕತ್ವ ಗುಣಗಳು ಮತ್ತು ಸಮಾಜದೊಂದಿಗೆ ಬೆರೆತು ಹೊಣೆಗಾರಿಕೆಯನ್ನು ನಿರ್ವಹಿಸುವ ಶಕ್ತಿಯನ್ನು ಬೆಳೆಸಿಕೊಳ್ಳಬೇಕು. ದೂರದೃಷ್ಟಿಯ ಚಿಂತನೆಯಿಂದ ಪ್ರಪಂಚಕ್ಕೆ ಮಾದರಿಯಾಗಬೇಕು ಎಂದು ಮಾಜಿ ಸಚಿವ ಅಭಯಚಂದ್ರ ಜೈನ್ ಹೇಳಿದರು.

ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆ ಆಶ್ರಯದಲ್ಲಿ ಎರಡು ದಿನಗಳ ರಾಜ್ಯಮಟ್ಟದ ಜೈನ ಯುವ ಸಮ್ಮೇಳನಕ್ಕೆ ಚಾಲನೆ ನೀಡಿ ಮಾತನಾಡಿದರು.

ಎಕ್ಸಲೆಂಟ್ ವಿದ್ಯಾಸಂಸ್ಥೆ ಅಧ್ಯಕ್ಷ ಯುವರಾಜ್ ಜೈನ್ ಮಾತನಾಡಿ, ಸಂಸ್ಥೆಯಲ್ಲಿ ಧ್ಯಾನ ಮಂದಿರ, ಜೈನ ಪಾಠಗಳು, ಭಜನೆಗಳ ಮೂಲಕ ವಿದ್ಯಾರ್ಥಿಗಳಲ್ಲಿ ಧಾರ್ಮಿಕ ಮತ್ತು ಸಾಂಸ್ಕೃತಿಕ ಚಿಂತನೆಗೆ ಅವಕಾಶ ಮಾಡಿಕೊಡಲಾಗಿದೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರ ಪರಿಚಯದ ಮೂಲಕ ಯುವ ಜನರಲ್ಲಿ ಸ್ಫೂರ್ತಿ ತುಂಬುವ ಸಲುವಾಗಿ ಈ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ ಎಂದರು.

ವಕೀಲ ಎಂ.ಕೆ.ವಿಜಯಕುಮಾರ್, ಅರಣ್ಯ ಸೇವಾ ಅಧಿಕಾರಿ ವಿಜಯಕುಮಾರ್ ಗೋಗಿ, ಕಾರ್ಯಕ್ರಮ ಸಂಚಾಲಕ ಅಜಿತ್ ಮುರುಗುಂಡೆ ಉಪಸ್ಥಿತರಿದ್ದರು. ಸಂಸ್ಥೆ ಕಾರ್ಯದರ್ಶಿ ರಶ್ಮಿತಾ ಜೈನ್ ವಂದಿಸಿದರು. ಆಡಳಿತ ನಿರ್ದೇಶಕ ಡಾ.ಬಿ.ಪಿ.ಸಂಪತ್ ಕುಮಾರ್ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net