More

    ಲೇಡಿಗೋಶನ್ ಆಸ್ಪತ್ರೆಗೆ ರಾಜ್ಯಮಟ್ಟದ ಕಾಯಕಲ್ಪ ಪ್ರಶಸ್ತಿ – ಬಹುಮಾನದ ಮೊತ್ತ ಆಸ್ಪತ್ರೆಯ ಅಭಿವೃದ್ಧಿಗೆ ಬಳಸಲು ವೈದ್ಯಕೀಯ ಅಧೀಕ್ಷಕ ಡಾ. ದುರ್ಗಾಪ್ರಸಾದ್ ಮಹತ್ತರ ನಿರ್ಧಾರ

    ಮಂಗಳೂರು: ಮಂಗಳೂರಿನ ಲೇಡಿಗೋಶನ್ ಸರಕಾರಿ ಹೆರಿಗೆ ಆಸ್ಪತ್ರೆ ಆರೋಗ್ಯ ಇಲಾಖೆ ನೀಡುವ 2022-23ನೇ ಸಾಲಿನ ರಾಜ್ಯಮಟ್ಟದ ಕಾಯಕಲ್ಪ ಪ್ರಶಸ್ತಿಗೆ ಭಾಜನವಾಗಿದ್ದು, ಇದರ ಪ್ರಶಸ್ತಿ ಪ್ರಧಾನ ಇತ್ತೀಚೆಗೆ ಮೈಸೂರಿನಲ್ಲಿ ನಡೆಯಿತು.
    ಮೈಸೂರಿನ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ ಮಿಲೇನಿಯಂ ಹಾಲ್‌ನಲ್ಲಿ ನಡೆದ ಕಾರ‌್ಯಕ್ರಮದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಈ ಪ್ರಶಸ್ತಿಯನ್ನು ಲೇಡಿಗೋಶನ್ ಆಸ್ಪತ್ರೆಯ ವೈದ್ಯಕೀಯ ಈಕ್ಷಕ ಡಾ. ದುರ್ಗಾಪ್ರಸಾದ್ ಅವರಿಗೆ ಪ್ರದಾನ ಮಾಡಿದರು.
    ಸಚಿವ ಎಚ್.ಸಿ. ಮಹದೇವಪ್ಪ, ಚಾಮರಾಜ ಶಾಸಕ ಹರೀಶ್ ಗೌಡ, ಆರೋಗ್ಯ ಇಲಾಖೆಯ ಪ್ರಧಾನ ಕಾರ‌್ಯದರ್ಶಿ ಟಿ.ಕೆ.ಅನಿಲ್‌ಕುಮಾರ್, ಆಯುಕ್ತ ಡಿ.ರಂದೀಪ್, ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕ ಡಾ. ನವೀನ್ ಭಟ್ ವೈ, ಇಲಾಖೆಯ ನಿರ್ದೇಶಕರಾದ ಡಾ.ಬಿ.ಎಸ್. ಪುಷ್ಪಲತಾ, ಮೈಸೂರಿನ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ ಯ ನಿರ್ದೇಶಕರಾದ ಡಾ.ದಾಕ್ಷಾಯಿಣಿ ಕೆ.ಆರ್ ಸೇರಿದಂತೆ ಇಲಾಖೆಯ ನಾನಾ ಉನ್ನತ ಅಕಾರಿಗಳು ಉಪಸ್ಥಿತರಿದ್ದರು.
    ಬಹುಮಾನದ ಮೊತ್ತ ಆಸ್ಪತ್ರೆಯ ಅಭಿವೃದ್ಧಿಗೆ
    ಮಂಗಳೂರು ಲೇಡಿಗೋಶನ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ದುರ್ಗಾಪ್ರಸಾದ್ ಅವರು ಮಾಹಿತಿ ನೀಡಿ, ವೈದ್ಯರ ಹಾಗೂ ಸಿಬ್ಬಂದಿಗಳ ಪ್ರಾಮಾಣಿಕ ಪ್ರಯತ್ನ ಅಲ್ಲದೇ ಹಿರಿಯ ಅಕಾರಿಗಳು ಹಾಗೂ ಜನಪ್ರತಿನಿಗಳು, ಸಂಘ ಸಂಸ್ತೇಗಳ ಸಹಕಾರದೊಂದಿಗೆ ಆಸ್ಪತ್ರೆಗೆ ರಾಜ್ಯಮಟ್ಟದ ಪ್ರಶಸ್ತಿ ಬಂದಿದೆ. ಈ ಪ್ರಶಸ್ತಿಯಲ್ಲಿ ಸಿಗುವ 20 ಲಕ್ಷ ರೂ. ವನ್ನು ಆಸ್ಪತ್ರೆಯ ಅಭಿವೃದ್ಧಿ ಕಾರ‌್ಯಗಳಿಗೆ ಬಳಸಲಾಗುತ್ತದೆ. ಮುಂದಿನ ದಿನಗಳಲ್ಲಿ ಈ ಆಸ್ಪತ್ರೆಯನ್ನು ಇನ್ನಷ್ಟು ಪರಿಸರ ಸ್ನೇಹಿ, ಜನಸ್ನೇಹಿ ಸ್ವಚ್ಛ ಪರಿಸರದ ಆಸ್ಪತ್ರೆಯಾಗಿ ಮುಂದುವರಿಸುವುದು ನಮ್ಮ ಮುಖ್ಯ ಗುರಿಯಾಗಿದೆ ಎಂದು ತಿಳಿಸಿದ್ದಾರೆ.


    ಮಾನವೀಯ ಸೇವೆಗೆ ಕಾಯಕಲ್ಪ ಪ್ರಶಸ್ತಿ ಗೌರವ
    ರಾಜ್ಯ ಆರೋಗ್ಯ ಇಲಾಖೆಯ ಮೌಲ್ಯ ಮಾಪನದಲ್ಲಿ ಲೇಡಿಗೋಶನ್ ಆಸ್ಪತ್ರೆ 100ರಲ್ಲಿ 91.15 ಅಂಕಗಳನ್ನು ಗಳಿಸಿಕೊಂಡು ದ್ವಿತೀಯ ಸ್ಥಾನವನ್ನು ಗಳಿಸಿಕೊಂಡಿದೆ. ಇದು ಈ ಆಸ್ಪತ್ರೆಯ ಮಾನವೀಯ ಸೇವೆಗೆ ಸಂದ ಗೌರವ. 93.80 ಅಂಕಗಳೊಂದಿಗೆ ಬೆಂಗಳೂರಿನ ಟ್ರಾಮಾ ಆ್ಯಂಡ್ ಎಮರ್ಜೆನ್ಸಿ ಕೇರ್ ಸೆಂಟರ್ ಮೊದಲ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಕಳೆದ 3-4 ವರ್ಷಗಳಿಂದ ಲೇಡಿಗೋಶನ್ ಆಸ್ಪತ್ರೆಯಿಂದ ಆರೋಗ್ಯ ಸೇವೆ ಪಡೆದುಕೊಳ್ಳುವವರ ಸಂಖ್ಯೆ ಹೆಚ್ಚಳವಾಗಿದ್ದು, ಇತರೆ ಖಾಸಗಿ ಆಸ್ಪತ್ರೆಗಿಂತಲೂ ಉತ್ತಮ ಮತ್ತು ಪಾರದರ್ಶಕ ಸೇವೆ ಇಲ್ಲಿ ನೀಡಲಾಗುತ್ತದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts