More

  ಫೆ.1ರಿಂದ ರಾಜ್ಯಮಟ್ಟದ ಕಾರ್ಮಿಕ ಸಮ್ಮೇಳನ – ಎಐಟಿಯುಸಿ ಕಾರ್ಯದರ್ಶಿ ಕೆ.ಸೋಮಶೇಖರ್ ಮಾಹಿತಿ

  ಬಳ್ಳಾರಿ: ಬೆಂಗಳೂರಿನ ಮಲ್ಲೇಶ್ವರಂನ ಸಿರೂರು ಪಾರ್ಕ್‌ನಲ್ಲಿ ಫೆ.1 ಮತ್ತು 2ರಂದು ರಾಜ್ಯಮಟ್ಟದ ಕಾರ್ಮಿಕ ಸಮ್ಮೇಳನ ಆಯೋಜಿಸಲಾಗಿದೆ ಎಂದು ಎಐಟಿಯುಸಿ ಕಾರ್ಯದರ್ಶಿ ಕೆ.ಸೋಮಶೇಖರ್ ಮನವಿ ಮಾಡಿದರು.

  ಎಐಟಿಯುಸಿ ಅಖಿಲ ಭಾರತ ಅಧ್ಯಕ್ಷ ಕಾ.ಕೆ.ರಾಧಾಕೃಷ್ಣ ಮುಖ್ಯ ಭಾಷಣಕಾರರಾಗಿ ಮಾತನಾಡಲಿದ್ದಾರೆ. ವಿವಿಧ ರಾಜ್ಯಗಳ ಪ್ರತಿನಿಧಿಗಳು ಸೇರಿ ಒಟ್ಟು 5 ಸಾವಿರಕ್ಕೂ ಹೆಚ್ಚು ಕಾರ್ಮಿಕರು ಭಾಗವಹಿಸುವ ನಿರೀಕ್ಷೆಯಿದೆ. ಇದೇ ವೇಳೆ ವಿವಿಧ ಬೇಡಿಕೆ ಈಡೇರಿಸುವಂತೆ ಸರ್ಕಾರಕ್ಕೆ ಒತ್ತಾಯಿಸಲಾಗುವುದು. ಬಳ್ಳಾರಿ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಮಿಕರು ಆಗಮಿಸಬೇಕು ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಕೋರಿದರು. ಕಾರ್ಮಿಕ ಸಮಾವೇಶದ ಭಿತ್ತಿಪತ್ರ ಬಿಡುಗಡೆಗೊಳಿಸಲಾಯಿತು. ಎಐಟಿಯುಸಿ ಜಿಲ್ಲಾ ಅಧ್ಯಕ್ಷ ಎ.ದೇವದಾಸ್, ಜಿಲ್ಲಾ ಕಾರ್ಯದರ್ಶಿ ಪಿ.ಶರ್ಮಾಸ್ ಇತರರಿದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts