More

    ಜ.7ರಿಂದ ರಾಜ್ಯಮಟ್ಟದ ಪ್ರತಿಭಾ ಕಾರಂಜಿ, ಕಲೋತ್ಸವ

    ಶಿವಮೊಗ್ಗ: ಜಿಲ್ಲಾಧಿಕಾರಿ ಕಾರ್ಯಾಲಯ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಹಯೋಗದಲ್ಲಿ ಪ್ರೌಢಶಾಲಾ ಮಕ್ಕಳಿಗೆ ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವವನ್ನು 2023ರ ಜನವರಿ 7ರಿಂದ 9ರವರೆಗೆ ನಗರದ ವಿವಿಧೆಡೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ತಿಳಿಸಿದರು.
    ಶಿಕ್ಷಣ ಕ್ಷೇತ್ರದಲ್ಲಿ ಕಲೆಗಳನ್ನು ಉತ್ತೇಜಿಸುವ, ಶಾಲಾ ವಿದ್ಯಾರ್ಥಿಗಳ ಕಲಾತ್ಮಕ ಪ್ರತಿಭೆ ಮತ್ತು ಸೃಜನಾತ್ಮಕ ಕೌಶಲ ಹೊರತರಲು ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಉತ್ತಮ ವೇದಿಕೆಯಾಗಿದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
    ರಾಜ್ಯದ 34 ಶೈಕ್ಷಣಿಕ ಜಿಲ್ಲೆಗಳಲ್ಲಿ ನಡೆಸಿದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವದಲ್ಲಿ ಸ್ಥಾನ ಪಡೆದ 1,375ಕ್ಕೂ ಅಧಿಕ ಪ್ರತಿಭಾವಂತ ವಿದ್ಯಾರ್ಥಿಗಳು 23 ವೈಯಕ್ತಿಕ ವಿಭಾಗ ಹಾಗೂ 3 ಸಾಮೂಹಿಕ ವಿಭಾಗದಲ್ಲಿ ಭಾಗವಹಿಸುವರು. 154 ತೀರ್ಪುಗಾರರು ಮತ್ತು ಮೇಲ್ವಿಚಾರಕರನ್ನು ನಿಯೋಜಿಸಲಾಗಿದೆ. ಡಿವಿಎಸ್ ಕಾಲೇಜಿನ ವಿವಿಧ ಕೊಠಡಿಗಳಲ್ಲಿ ಏಕ ರೀತಿಯ ಸಾಂಸ್ಕೃತಿಕ ಸ್ಪರ್ಧೆಗಳು ನಡೆಯಲಿವೆ ಎಂದರು.
    ಸ್ಪರ್ಧೆಗಳಿಗೆ ತಜ್ಞ ಹಾಗೂ ಪರಿಣಿತಿ ಹೊಂದಿರುವ ಜಿಲ್ಲೆಯ ಹಾಗೂ ಹೊರ ಜಿಲ್ಲೆಗಳಿಂದ 150ಕ್ಕೂ ಅಧಿಕ ತೀರ್ಪುಗಾರರನ್ನು ನಿಯೋಜಿಸಲಾಗಿದೆ. ಅದರ ಯಶಸ್ಸಿಗಾಗಿ ಹಾಗೂ ವ್ಯವಸ್ಥಿತ ನಿರ್ವಹಣೆಗೆ ವಿವಿಧ ಸಲಹೆ, ಆಹಾರ, ಸಾರಿಗೆ, ಹಣಕಾಸು, ನೈರ್ಮಲ್ಯ, ವಸತಿ, ನೋಂದಣಿ, ಮಕ್ಕಳ ಸುರಕ್ಷತೆ ಸೇರಿದಂತೆ ಒಟ್ಟಾರೆ 19 ಸಮಿತಿಗಳನ್ನು ರಚಿಸಿದ್ದು, ಅದರ ಮೇಲ್ವಿಚಾರಣೆಗಾಗಿ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದು ಹೇಳಿದರು.
    ವಿಜೇತರಿಗೆ 6 ಸಾವಿರ ರೂ. ಪ್ರಥಮ, 4 ಸಾವಿರ ರೂ. ದ್ವಿತೀಯ ಹಾಗೂ 2 ಸಾವಿರ ರೂ. ತೃತೀಯ ಬಹುಮಾನ ಹಾಗೂ ಸ್ಮರಣಿಕೆ ನೀಡಿ ಗೌರವಿಸಲಾಗುವುದು. ಸ್ಪರ್ಧಾಳುಗಳಿಗೆ ಊಟ ಮತ್ತು ವಸತಿ ವ್ಯವಸ್ಥೆ ಕಲ್ಪಿಸಲಿದ್ದು ಅದಕ್ಕಾಗಿ ನಗರದಲ್ಲಿ 13 ಸ್ಥಳಗಳನ್ನು ಗುರುತಿಸಲಾಗಿದೆ ಎಂದರು.
    ಇದೇ ವೇಳೆ ಪ್ರತಿಭಾ ಕಾರಂಜಿಯ ಲಾಂಛನ ಹಾಗೂ ಜಾಲತಾಣ ಲೋಕಾರ್ಪಣೆಗೊಳಿಸಲಾಯಿತು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಡಿ.ಪ್ರಕಾಶ್, ಡಿಡಿಪಿಐ ಸಿ.ಆರ್.ಪರಮೇಶ್ವರಪ್ಪ, ಶಿಕ್ಷಣ ಇಲಾಖೆ ಇಒ ಲೋಕೇಶ್, ರಾಮಪ್ಪಗೌಡ ಸೇರಿದಂತೆ ಶಿಕ್ಷಣ ಇಲಾಖೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts