ಸಿಂದಗಿ: ಧಾರವಾಡ, ಕಲಬುರಗಿ, ವಿಜಯಪುರದ ಡಾ.ಎಂ.ಎಂ.ಕಲಬುರ್ಗಿ ರಾಷ್ಟ್ರೀಯ ಪ್ರತಿಷ್ಠಾನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಪಟ್ಟಣದ ಮಾಂಗಲ್ಯ ಭವನದಲ್ಲಿ ಜ.4ರಂದು ಬೆಳಗ್ಗೆ 10.30ಕ್ಕೆೆ ಡಾ.ಎಂ.ಎಂ.ಕಲಬುರ್ಗಿ ಅವರ ಸೃಜನಶೀಲ ಸಾಹಿತ್ಯ ಕುರಿತು ರಾಜ್ಯಮಟ್ಟದ ವಿಚಾರ ಸಂಕಿರಣ ಆಯೋಜಿಸಲಾಗಿದೆ. ಡಾ.ವಿಕ್ರಮ ವಿಸಾಜಿ ರಚನೆಯ, ಪ್ರವೀಣ ರೆಡ್ಡಿ ಗುಂಜಹಳ್ಳಿ ನಿರ್ದೇಶನದೊಂದಿಗೆ ಸಮುದಾಯ ರಾಯಚೂರು ಪ್ರಸ್ತುತಿಯಲ್ಲಿ ರಕ್ತವಿಲಾಪ ನಾಟಕ ಪ್ರದರ್ಶನ ನಡೆಯಲಿದೆ. ಸಾರಂಗಮಠದ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ಸಾನ್ನಿಧ್ಯ ವಹಿಸುವರು. ನ್ಯೂಜಿಲೆಂಡ್‌ನ ಆಕ್ಲಂಡ್ ಬಸವ ಸಮಿತಿ ಸಂಸ್ಥಾಪಕ ಡಾ.ಲಿಂಗಣ್ಣ ಕಲಬುರ್ಗಿ ಉದ್ಘಾಟಿಸುವರು. ಧಾರವಾಡದ ಡಾ.ಎಂ.ಎಂ.ಕಲಬುರ್ಗಿ ರಾಷ್ಟ್ರೀಯ ಪ್ರತಿಷ್ಠಾನದ ಅಧ್ಯಕ್ಷ ಡಾ.ಈರಣ್ಣ ರಾಜೂರ ಅಧ್ಯಕ್ಷತೆ ವಹಿಸುವರು. ಪ್ರತಿಷ್ಠಾನದ ಸದಸ್ಯೆ ಹನುಮಾಕ್ಷಿ ಗೋಗಿ ಪ್ರಾಸ್ತಾವಿಕವಾಗಿ ಮಾತನಾಡುವರು. ಚಡಚಣದ ಪ್ರಾಧ್ಯಾಪಕ ಡಾ.ಎಂ.ಎಸ್.ಮಾಗಣಗೇರಿ, ಕಲಕೇರಿಯ ಮನು ಪತ್ತಾರ ವಿಚಾರಗೋಷ್ಠಿಯಲ್ಲಿ ಪಾಲ್ಗೊಳ್ಳುವರು.
