More

    ರಾಜ್ಯಮಟ್ಟದ ಟೆನಿಕಾಯ್ಟ ರಿಂಗಿನಾಟ ಪಂದ್ಯಾವಳಿ

    ಶನಿವಾರಸಂತೆ: ಗ್ರಾಮೀಣ ಕ್ರೀಡೆಗಳನ್ನು ಪ್ರೋತ್ಸಾಹಿಸಿ ಬೆಳೆಸುವ ಉದ್ದೇಶದಿಂದ ರಾಜ್ಯಮಟ್ಟದ ಟಿನಿಕಾಯ್ಟ ಪಂದ್ಯಾವಳಿ ಆಯೋಜನೆ ಮಾಡಲಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಜಿಲ್ಲಾ ಉಪನಿರ್ದೇಶಕ ಸಿ.ಪುಟ್ಟರಾಜು ಹೇಳಿದರು.

    ಶಾಲಾ ಶಿಕ್ಷಣ ಮತ್ತು ಪ.ಪೂ.ಶಿಕ್ಷಣ ಇಲಾಖೆ ಹಾಗೂ ಶನಿವಾರಸಂತೆ ಭಾರತಿ ಪ.ಪೂ.ಕಾಲೇಜು ಸಹಯೋಗದಲ್ಲಿ ಇಲ್ಲಿನ ಭಾರತಿ ವಿದ್ಯಾಸಂಸ್ಥೆ ಕ್ರೀಡಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ರಾಜ್ಯಮಟ್ಟದ ಟೆನಿಕಾಯ್ಟ ರಿಂಗಿನಾಟ ಪಂದ್ಯಾವಳಿಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.
    ಗ್ರಾಮೀಣ ಕ್ರೀಡೆಯನ್ನು ಪ್ರತಿಯೊಬ್ಬರೂ ಪ್ರೋತ್ಸಾಹಿಸಬೇಕು. ಈ ನಿಟ್ಟಿನಲ್ಲಿ ಪ.ಪೂ.ಶಿಕ್ಷಣ ಇಲಾಖೆ ಬಾಲಕ ಮತ್ತು ಬಾಲಕಿಯರಿಗಾಗಿ ರಾಜ್ಯಮಟ್ಟದ ಟೆನಿಕಾಯ್ಟ ಪಂದ್ಯಾವಳಿ ಆಯೋಜಿಸಿದೆ ಎಂದರು.

    ಪಂದ್ಯಾವಳಿಗೆ ಎಲ್ಲ ಜಿಲ್ಲೆಗಳಿಂದ ತಂಡ ಭಾಗವಹಿಸಲು ಆಗಮಿಸಿದ್ದು, ಪಂದ್ಯಾವಳಿಯ ಯಶಸ್ಸಿಗೆ ಎಲ್ಲರೂ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

    ಶನಿವಾರಸಂತೆ ಗ್ರಾ.ಪಂ.ಅಧ್ಯಕ್ಷೆ ಗೀತಾ ಹರೀಶ್ ಮಾತನಾಡಿ, ಸೋಲು-ಗೆಲುವು ಸಹಜ. ಹಾಗಾಗಿ ಕ್ರೀಡಾಪಟುಗಳು ಎಲ್ಲವನ್ನೂ ಕ್ರೀಡಾ ಮನೋಭಾವನೆಯಿಂದ ಸ್ವೀಕರಿಸಿ ಉತ್ಸಾಹದಿಂದ ಪಾಲ್ಗೊಳ್ಳಬೇಕು. ಅಲ್ಲದೆ ರಾಜ್ಯಮಟ್ಟದ ಕ್ರೀಟಾಕೂಟವೊಂದನ್ನು ಸ್ಥಳೀಯ ಭಾರತಿ ವಿದ್ಯಾಸಂಸ್ಥೆ ಆಯೋಜನೆ ಮಾಡಿರುವುದು ಹೆಮ್ಮೆಯ ವಿಷಯ ಎಂದರು.

    ಪಂದ್ಯಾವಳಿಯಲ್ಲಿ ಎಲ್ಲ 31 ಜಿಲ್ಲೆಗಳಿಂದ ಬಾಲಕ ಮತ್ತು ಬಾಲಕಿಯರ ತಂಡ ಪಾಲ್ಗೊಂಡಿರುವುದು ವಿಶೇಷ. ಭಾರತಿ ವಿದ್ಯಾಸಂಸ್ಥೆ ಅಧ್ಯಕ್ಷ ಕೆ.ಎಂ.ಜಗನ್‌ಪಾಲ್ ಮಾತನಾಡಿದರು. ಸಮಾರಂಭದಲ್ಲಿ ರಾಜ್ಯ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಉಪಾಧ್ಯಕ್ಷ ಕಾಂತರಾಜು, ತುಮಕೂರು ಸಂಘದ ಅಧ್ಯಕ್ಷ ಬಸವರಾಜು, ಕೊಡಗು ಜಿಲ್ಲಾಧ್ಯಕ್ಷ ಕೆ.ಸಿ.ಚಂದ್ರಶೇಖರ್, ಭಾರತಿ ವಿದ್ಯಾಸಂಸ್ಥೆ ಉಪಾಧ್ಯಕ್ಷ ಮಹಮ್ಮದ್‌ಗೌಸ್, ಗೌರವ ಕಾರ್ಯದರ್ಶಿ ಎನ್.ಕೆ.ಅಪ್ಪಸ್ವಾಮಿ, ವಿದ್ಯಾಸಂಸ್ಥೆ ಮಾಜಿ ಅಧ್ಯಕ್ಷ ಎನ್.ಬಿ.ನಾಗಪ್ಪ, ಭಾರತಿ ಪ.ಪೂ.ಕಾಲೇಜು ಪ್ರಾಂಶುಪಾಲ ಎಸ್.ಜೆ.ಅಶೋಕ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts